ರಾಜ್ಯೋತ್ಸವ ಪ್ರಶಸ್ತಿ ಪಟ್ಟಿ; ಮುಖ್ಯಮಂತ್ರಿ ನಿರ್ಧಾರ ಅಂತಿಮ
Team Udayavani, Oct 23, 2020, 11:48 PM IST
ಬೆಂಗಳೂರು: ನಾಡಿನ ಸಾಧಕರಿಗೆ ನೀಡುವ ರಾಜ್ಯೋತ್ಸವ ಪ್ರಶಸ್ತಿಗಳ ಅಂತಿಮ ಆಯ್ಕೆಯನ್ನು ಮುಖ್ಯಮಂತ್ರಿಗೆ ನೀಡಲಾಗಿದೆ. ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿಯು ಶುಕ್ರವಾರ ಸಭೆ ನಡೆಸಿದ್ದು, 70 ಜನರ ಪಟ್ಟಿಯನ್ನು ಸಿದ್ಧಪಡಿಸಿದೆ. ಇನ್ನೆರಡು ದಿನಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಅಧಿಕಾರಿಗಳ ಜತೆ ಚರ್ಚಿಸಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ತಿಳಿದು ಬಂದಿದೆ.
ಪ್ರಶಸ್ತಿಗೆ ಸುಮಾರು 22 ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರನ್ನು ಪರಿಗಣಿಸಲಾಗಿದ್ದು, ರಾಜ್ಯೋತ್ಸವ ಸಲಹಾ ಸಮಿತಿ 110 ಸಾಧಕರ ಪಟ್ಟಿಯನ್ನು ಸಿದ್ಧಪಡಿಸಿ ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿಗೆ ನೀಡಿತ್ತು. ಶುಕ್ರವಾರ ನಡೆದ ಮುಖ್ಯಮಂತ್ರಿ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿ ಹೈಕೋರ್ಟ್ ಆದೇಶದಂತೆ ಈ ವರ್ಷದ ರಾಜ್ಯೋತ್ಸವದ ಲೆಕ್ಕಾಚಾರದಲ್ಲಿ 65 ಜನರಿಗೆ ಮಾತ್ರ ಪ್ರಶಸ್ತಿ ನೀಡುವುದು, ಕ್ರೀಡಾ ಕ್ಷೇತ್ರವನ್ನು ಹೊರತು ಪಡೆಸಿ 60 ವರ್ಷ ಮೀರಿದವರಿಗೆ ಮಾತ್ರ ಪ್ರಶಸ್ತಿ ನೀಡುವುದು ಹಾಗೂ ಎಲ್ಲ ಜಿಲ್ಲೆಗಳಿಗೂ ಪ್ರಾತಿನಿಧ್ಯ ದೊರೆಯುವಂತೆ ನೋಡಿಕೊಂಡು ಪಟ್ಟಿ ಸಿದ್ಧಪಡಿಸಲಾಗಿದೆ ಎನ್ನಲಾಗಿದೆ.
ಈ ಬಾರಿ ಸರಳ ಸಮಾರಂಭ ಮಾಡಲು ನಿರ್ಧರಿಸಲಾಗಿದ್ದು, ನವೆಂಬರ್ 1ರಂದು ಪ್ರಶಸ್ತಿ ನೀಡುವ ಬಗ್ಗೆ ಇನ್ನೂ ಅಧಿಕೃತ ನಿರ್ಧಾರ ಕೈಗೊಂಡಿಲ್ಲ ಎಂದು ತಿಳಿದು ಬಂದಿದೆ. ಪರಿಸ್ಥಿತಿ ನೋಡಿಕೊಂಡು ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಬಗ್ಗೆ ತೀರ್ಮಾನಿಸಲು ಸರಕಾರ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.
ಸಚಿವರು, ಅಕಾಡೆಮಿ ಅಧ್ಯಕ್ಷರಿಲ್ಲದ ಸಮಿತಿ
ಪ್ರತಿ ವರ್ಷ ಮುಖ್ಯಮಂತ್ರಿ ಅಧ್ಯಕ್ಷತೆಯ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ರಾಜ್ಯ ಸರಕಾರದ ವ್ಯಾಪ್ತಿಯಲ್ಲಿರುವ ವಿವಿಧ ಅಕಾಡೆಮಿಗಳ ಅಧ್ಯಕ್ಷರು ಹಾಗೂ ರಾಜ್ಯ ಸರಕಾರದ ಪ್ರಮುಖ ಸಚಿವರನ್ನು ಸೇರಿಸಲಾಗುತ್ತಿತ್ತು. ಆದರೆ, ಈ ವರ್ಷ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರನ್ನು ಹೊರತು ಪಡೆಸಿ ಬೇರೆ ಯಾವುದೇ ಹಿರಿಯ ಸಚಿವರನ್ನು ಈ ಸಮಿತಿಗೆ ಸೇರ್ಪಡೆ ಮಾಡಿಲ್ಲ. ಅಂತಿಮ ಆಯ್ಕೆ ಸಮಿತಿಯಲ್ಲಿ ಸಲಹಾ ಸಮಿತಿಯಲ್ಲಿದ್ದ ಸದಸ್ಯರ ಜತೆಗೆ ನಾಲ್ವರು ಮಾತ್ರ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ
ಕಣ್ಣು ಆಪರೇಷನ್ ಮಾಡಿದರೆ ಹಣ ನೀಡುತ್ತೇವೆಂದು ನಂಬಿಸಿ ಮಹಿಳೆಯ 5 ಲಕ್ಷದ ಚಿನ್ನ ದೋಚಿದ ಆಸಾಮಿ
ಪಿಎಸ್ಐ ನೇಮಕಾತಿ ಅಕ್ರಮ : ಮತ್ತಿಬ್ಬರ ಜಾಮೀನು ಅರ್ಜಿ ತಿರಸ್ಕರಿಸಿದ ನ್ಯಾಯಾಲಯ
ವಿಜಯಪುರ : ಸಿಡಿಲಿಗೆ 14 ಕುರಿಗಳು ಸಾವು : ಸೂಕ್ತ ಪರಿಹಾರಕ್ಕೆ ಒತ್ತಾಯ