
ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ರಕ್ಷಾ ರಾಮಯ್ಯ ನೇಮಕ
Team Udayavani, Jun 3, 2022, 10:47 AM IST

ಬೆಂಗಳೂರು: ಯುವ ಕಾಂಗ್ರೆಸ್ ಮುಖಂಡ ಎಂ.ಎಸ್. ರಕ್ಷಾ ರಾಮಯ್ಯ ಅವರನ್ನು ಭಾರತೀಯ ಯುವ ಕಾಂಗ್ರೆಸ್ ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಿಸಲಾಗಿದೆ.
ಭಾರತೀಯ ಯುವ ಕಾಂಗ್ರೆಸ್ ಗೆ ತಾವು ಸಲ್ಲಿಸಿದ ಸೇವಯನ್ನು ಪರಿಗಣಿಸಿ “ರಾಷ್ಟ್ರೀಯ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯನ್ನಾಗಿ ಭಡ್ತಿ ನೀಡಲು ಸಂತಸವಾಗುತ್ತಿದೆ. ತಕ್ಷಣದಿಂದ ಜಾರಿಗೆ ಬರುವಂತೆ ಈ ನೇಮಕಾತಿ ಮಾಡಲಾಗಿದೆ“ ಎಂದು ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ. ಶ್ರೀನಿವಾಸ್ ಹೇಳಿದ್ದಾರೆ.
ಪಕ್ಷ ಸಂಘಟನೆಗಾಗಿ ತಾವು ನಿಮ್ಮ ಪೂರ್ಣ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುತ್ತೀರಿ. ಕಾಂಗ್ರೆಸ್ ಅಧ್ಯಕ್ಷರಾದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಕ್ರಿಯಾಶೀಲ ನಾಯಕತ್ವದಲ್ಲಿ ತಾವು ಪಕ್ಷವನ್ನು ಮತ್ತಷ್ಟು ಬಲಪಡಿಸಲು ಶ್ರಮಿಸುತ್ತೀರಿ ಎಂಬ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ:ದೊಡ್ಡ ಗೌಡರ ರಾಜಕೀಯ: ಖರ್ಗೆ ಎಂಟ್ರಿಯಿಂದ ಶುರುವಾಯ್ತೆ ಡಿಕೆ, ಸಿದ್ದು ಬಣಕ್ಕೆ ಭೀತಿ?
ಈ ಕುರಿತು ಪ್ರತಿಕ್ರಿಯೆ ನೀಡಿರುವ ರಕ್ಷಾ ರಾಮಯ್ಯ, ಪಕ್ಷ ನೀಡಿರುವ ಜವಾಬ್ದಾರಿಯನ್ನು ವಿನಮ್ರವಾಗಿ ಸ್ವೀಕರಿಸಿ ರಾಷ್ಟ್ರಮಟ್ಟದಲ್ಲಿ ಪಕ್ಷದ ಬಲವರ್ಧನೆಗೆ ಶಕ್ತಿ ಮೀರಿ ಕೆಲಸ ಮಾಡುತ್ತೇನೆ. ಇತ್ತೀಚೆಗೆ ವಿಶೇಷವಾಗಿ ಉದಯಪುರದಲ್ಲಿ ಜರುಗಿದ ಕಾಂಗ್ರೆಸ್ ಚಿಂತನ ಸಮಾವೇಶದಲ್ಲಿ ಕೈಗೊಂಡ ನಿರ್ಣಗಳ ಅನುಷ್ಠಾನಕ್ಕೆ ಶ್ರಮಿಸುತ್ತೇನೆ. ರಾಷ್ಟ್ಟಮಟ್ಟದಲ್ಲಿ ಯುವ ಕಾಂಗ್ರೆಸ್ ಮತ್ತು ಯುವ ಸಮೂಹದ ಧ್ವನಿಯಾಗಿ ಕೆಲಸ ಮಾಡುತ್ತೇನೆ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Mysore: ಕರ್ನಾಟಕದಲ್ಲಿ ರಾಕ್ಷಸರ ರಾಜ್ಯ ಆಡಳಿತಕ್ಕೆ ಬಂದಿದೆ; ಪ್ರತಾಪ್ ಸಿಂಹ ವಾಗ್ದಾಳಿ

Belagavi: ಬಾಲಕಾರ್ಮಿಕರ ರಕ್ಷಣೆಗೆ ಟಾಸ್ಕ್ ಫೋಸ್೯ ರಚನೆ: ಸಂತೋಷ್ ಲಾಡ್

Protest: ಕಳಪೆ ಕಾಮಗಾರಿ… ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Shivamogga Incident: ರಾಗಿಗುಡ್ಡಕ್ಕೆ ಆತಂರಿಕ ಭದ್ರತಾ ವಿಭಾಗದ ಅಧಿಕಾರಿಗಳ ತಂಡ ಭೇಟಿ
MUST WATCH
ಹೊಸ ಸೇರ್ಪಡೆ

Asian Games :ನೀರಜ್ ಚೋಪ್ರಾಗೆ ನಿರೀಕ್ಷಿತ ಚಿನ್ನ; ಪದಕಪಟ್ಟಿಯಲ್ಲಿ ಇತಿಹಾಸ

BMTC ಯಲ್ಲಿ ಭಾರಿ ವಂಚನೆ : ಮುಖ್ಯ ಟ್ರಾಫಿಕ್ ಮ್ಯಾನೇಜರ್ ಬಂಧನ

Pollution; ಭಾರತದ ಅತ್ಯಂತ ಕಲುಷಿತ ಗಾಳಿಯಿರುವ ನಗರ ಯಾವುದು? : ವಿಶ್ಲೇಷಣೆ

Gaming App Case:ಬಾಲಿವುಡ್ ನಟ ರಣಬೀರ್ ಕಪೂರ್ ಗೆ ಜಾರಿ ನಿರ್ದೇಶನಾಲಯದ ಸಮನ್ಸ್ ಜಾರಿ

BJP ಸಖ್ಯ ತೊರೆಯಲು ಕಾರಣ ಹೇಳಿದ AIADMK ಅಧ್ಯಕ್ಷ ಪಳನಿಸ್ವಾಮಿ