ಬಿಜೆಪಿ ಗೆಲುವಿಗೆ ರಾಮ್ ಮಾಧವ್ ಕಾರ್ಯತಂತ್ರ 

Team Udayavani, Apr 7, 2018, 7:00 AM IST

ಬೆಂಗಳೂರು: ಬಿಜೆಪಿ ಚುನಾವಣಾ ಕಾರ್ಯತಂತ್ರಕ್ಕಾಗಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್‌ ಮಾಧವ್‌ ರಾಜ್ಯಕ್ಕೆ ಆಗಮಿಸಿದ್ದು ಎರಡು ದಿನಗಳಿಂದ ಆರ್‌ಎಸ್‌ಎಸ್‌ ನಾಯಕರು ಹಾಗೂ ಪಕ್ಷದ ಹಿರಿಯ ಮುಖಂಡರ ಜತೆ ಸಮಾಲೋಚನೆಯಲ್ಲಿ ತೊಡಗಿದ್ದಾರೆ.

ಈಶಾನ್ಯ ರಾಜ್ಯಗಳಲ್ಲಿ ಚುನಾವಣಾ ಕಾರ್ಯತಂತ್ರ ರೂಪಿಸಿ ಪಕ್ಷ ಅಧಿಕಾರಕ್ಕೆ ಬರುವಂತೆ ಮಾಡಿದ ರಾಮ್‌ ಮಾಧವ್‌ ಅವರನ್ನು ಪಕ್ಷದ ಅಧ್ಯಕ್ಷ ಅಮಿತ್‌ ಶಾ ಅವರೇ ಕರ್ನಾಟಕಕ್ಕೆ ಕಳುಹಿಸಿದ್ದಾರೆಂದು ಹೇಳಲಾಗಿದೆ. ರಾಜ್ಯ ನಾಯಕರಿಗೆ ಯಾವುದೇ ಮುನ್ಸೂಚನೆ ನೀಡದೆ ಬಂದಿರುವ ಅವರು ಮೊದಲಿಗೆ ಆರ್‌ಎಸ್‌ಎಸ್‌ ನಾಯಕರ ಜತೆ ಚರ್ಚಿಸಿ ನಂತರ ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ, ಮಾಜಿ ರಾಜ್ಯಾಧ್ಯಕ್ಷ ಪ್ರಹ್ಲಾದ್‌ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್‌, ಮಾಜಿ ಉಪ  ಖ್ಯಮಂತ್ರಿಗಳಾದ
ಕೆ.ಎಸ್‌. ಈಶ್ವರಪ್ಪ, ಆರ್‌.ಅಶೋಕ್‌ ಜತೆ ಮಾತನಾಡಿ ಮಾಹಿತಿ ಸಂಗ್ರಹಿಸಿದ್ದಾರೆ. ಕೇಂದ್ರದ ಸಚಿವರಾದ ಅನಂತಕುಮಾರ್‌, 
ಡಿ.ವಿ.ಸದಾನಂದಗೌಡ ಅವರ ಜತೆಗೂ ಚುನಾವಣಾ ಕಾರ್ಯತಂತ್ರ ಕುರಿತು ರಾಮ್‌ ಮಾಧವ್‌ ಮಾತನಾಡಲಿದ್ದಾರೆ.

ಪ್ರತಿ ವಿಧಾನಸಭೆ ಕ್ಷೇತ್ರವಾರು ಸಮುದಾಯ, ಸ್ಥಳೀಯ ಸಮಸ್ಯೆ, ಕಾಂಗ್ರೆಸ್‌, ಜೆಡಿಎಸ್‌ ಅಭ್ಯರ್ಥಿಗಳ ವರ್ಚಸ್ಸು ಮತ್ತಿತರ ಅಂಶಗಳನ್ನು ಪಡೆದಿರುವ ರಾಮ್‌ ಮಾಧವ್‌, ಈಗಾಗಲೇ ಅಮಿತ್‌ ಶಾ ನಡೆಸಿರುವ ಸಮೀಕ್ಷೆ, ಆರ್‌ಎಸ್‌ಎಸ್‌ ವತಿಯಿಂದ ಮಾಡಿರುವ ಸಮೀಕ್ಷೆಯ ವರದಿ ಇಟ್ಟುಕೊಂಡು ಚುನಾವಣಾ ಕಾರ್ಯತಂತ್ರ ರೂಪಿಸಲಿದ್ದಾರೆ ಎಂದು ಹೇಳಲಾಗಿದೆ.
ಆರ್‌ಎಸ್‌ಎಸ್‌ನಲ್ಲಿ ತಳಮಟ್ಟದಲ್ಲಿ ಕೆಲಸ ಮಾಡಿರುವ ರಾಮ್‌ ಮಾಧವ್‌, ರಾಜ್ಯದ ಆರ್‌ಎಸ್‌ಎಸ್‌ ಮುಖಂಡರು ಹಾಗೂ ಕಾರ್ಯಕರ್ತರಿಗೆ ಚಿರಪರಿಚಿತರಾಗಿದ್ದು, ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್‌ ಯಾವ ರೀತಿ ಕಾರ್ಯ ನಿರ್ವಹಿಸಬೇಕು ಎಂಬುದರ ರೂಪು ರೇಷೆ ಸಹ ಹಾಕಿಕೊಡಲಿದ್ದಾರೆಂದು ತಿಳಿದು ಬಂದಿದೆ.

ಕಾಂಗ್ರೆಸ್‌ ಮುಕ್ತ ಕರ್ನಾಟಕ ನಮ್ಮ ಗುರಿ 
ಬೆಂಗಳೂರು: ಪ್ರಸಕ್ತ ವಿಧಾನಸಭೆ ಚುನಾವಣೆ ಅತ್ಯಂತ ಮಹತ್ವವಾಗಿದ್ದು ಕಾಂಗ್ರೆಸ್‌ ಮುಕ್ತ ಕರ್ನಾಟಕವೇ ನಮ್ಮ ಗುರಿಯಾಗಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ತಿಳಿಸಿದ್ದಾರೆ. ಪಕ್ಷದ ಕಚೇರಿಯಲ್ಲಿ ಆಯೋಜಿಸಿದ್ದ ಸಂಸ್ಥಾಪನಾ
ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದ್ದು ರಾಜ್ಯದಲ್ಲೂ ಬಿಜೆಪಿ ಸರ್ಕಾರ ತರಬೇಕು. ಮಿಷನ್‌ 150 ಗುರಿ ಮುಟ್ಟಲು ಎಲ್ಲ ಕಾರ್ಯಕರ್ತರು ಹಾಗೂ ಮುಖಂಡರು ಶ್ರಮಿಸಬೇಕೆಂದು ಕರೆ ನೀಡಿದರು.

ಕರ್ನಾಟಕದಲ್ಲಿ ಉತ್ತರ ಪ್ರದೇಶದಂತೆ ಅಚ್ಚರಿಯ ಫ‌ಲಿತಾಂಶ ಹೊರಬೀಳಲಿದೆ. ಅಭ್ಯರ್ಥಿಗಳ ಆಯ್ಕೆಗೆ ಪಕ್ಷದ ಕಾರ್ಯಕರ್ತರ ಅಭಿಪ್ರಾಯಗಳನ್ನು ಕೇಂದ್ರಕ್ಕೆ ಕಳುಹಿಸಲಾಗುವುದು. ಕೇಂದ್ರ ಸಮಿತಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದೆ. ಟಿಕೆಟ್‌ ಯಾರಿಗೆ ಸಿಕ್ಕರೂ ಪಕ್ಷದ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದರು. ಪ್ರಧಾನಿ ನರೇಂದ್ರಮೋದಿ ಹಾಗೂ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರು ಕರ್ನಾಟಕದಲ್ಲಿ ಬಿಜೆಪಿ ಸರ್ಕಾರದ ಕನಸು ಕಂಡಿದ್ದಾರೆ. ಆ ಕನಸು ನನಸಾಗಿರುವುದು ನಮ್ಮ ಕರ್ತವ್ಯ ಎಂದರು.

ಪಕ್ಷದ ವಕ್ತಾರ ಸುರೇಶ್‌ಕುಮಾರ್‌, ಅಂದು ವಾಜಪೇಯಿ ಮಾಡಿದ ಸಂಕಲ್ಪ ಇಂದು ನರೇಂದ್ರಮೋದಿ ನಾಯಕತ್ವದಿಂದ ಬಿಜೆಪಿ ಜನರ
ವಿಶ್ವಾಸಪಾತ್ರ ಪಕ್ಷವಾಗಿ ಎತ್ತರಕ್ಕೆ ಬೆಳೆದಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಜನಪರ ಸರ್ಕಾರ ರಚನೆಯಾಗಲು ಕಾರ್ಯಕರ್ತರು ಸಂಕಲ್ಪ ತೊಡಗಬೇಕು ಎಂದು ಹೇಳಿದರು. ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ರವಿಕುಮಾರ್‌, ಸಂಸದ ಭಗವಂತ್‌ ಖೂಬಾ ಉಪಸ್ಥಿತರಿದ್ದರು.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಸಮಸ್ಯೆ ಯಾವುದೇ ಇರಲಿ, ಇಷ್ಟಾರ್ಥ ಕಾರ್ಯವಿರಲಿ, ಕೇವಲ 5 ದಿನಗಳಲ್ಲಿ ಪರಿಹಾರಕ್ಕಾಗಿ ಇಂದೇ ಭೇಟಿ ನೀಡಿ
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ