ಇನ್ನೂ ಸಿಗದ ಸಿಡಿ ಮೂಲ! ನೈಜ ವಿಡಿಯೋ ಸಿಗದೆ ಎಸ್‌ಐಟಿ ತನಿಖೆಗೆ ಅಡ್ಡಿ

ಪ್ರಭಾವಿ ಬಳಿ ನೈಜ ವಿಡಿಯೋ?

Team Udayavani, Mar 15, 2023, 7:10 AM IST

ಇನ್ನೂ ಸಿಗದ ಸಿಡಿ ಮೂಲ! ನೈಜ ವಿಡಿಯೋ ಸಿಗದೆ ಎಸ್‌ಐಟಿ ತನಿಖೆಗೆ ಅಡ್ಡಿ

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿ ರಮೇಶ ಜಾರಕಿಹೊಳಿ ಅವರ ಸಚಿವ ಸ್ಥಾನ ಕಸಿದುಕೊಂಡ ಅಶ್ಲೀಲ ಸಿಡಿ ಪ್ರಕರಣ ಚುನಾವಣೆ ಹೊಸ್ತಿಲಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. ಇನ್ನೂ ನಿಗೂಢವಾಗಿರುವ ಒರಿಜಿನಲ್‌ (ನೈಜ) ವಿಡಿಯೋ ಪತ್ತೆ ಹಚ್ಚುವುದೇ ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ದೊಡ್ಡ ತಲೆನೋವಾಗಿದೆ.

ರಮೇಶ್‌ ಜಾರಕಿಹೊಳಿ ಸಿಡಿ ಪ್ರಕರಣ ದಾಖಲಾಗಿ 2 ವರ್ಷ ಕಳೆದರೂ ಮಾಜಿ ಸಚಿವರ ನೈಜ ಸಿಡಿ ಇನ್ನೂ ನಿಗೂಢವಾಗಿದೆ. ಜೊತೆಗೆ ಆರೋಪಿಗಳು ಈ ವಿಡಿಯೋವನ್ನು ಅಂತರ್ಜಾಲಕ್ಕೆ ಎಲ್ಲಿಂದ, ಯಾರಿಂದ, ಹೇಗೆ ಅಪ್‌ಲೋಡ್‌ ಮಾಡಿದ್ದಾರೆ ಎಂಬುದನ್ನು ಪತ್ತೆಹಚ್ಚುವಲ್ಲಿ ಎಸ್‌ಐಟಿ ವಿಫ‌ಲವಾಗಿದೆ. ಆರು ತಿಂಗಳಿಂದ ಸಾಕ್ಷ್ಯಾಧಾರ ಕೊರತೆಯಿಂದ ತನಿಖಾಧಿಕಾರಿಗಳು ಕೈ ಕಟ್ಟಿ ಕುಳಿತಿದ್ದಾರೆ.

ಸರ್ಕಾರದ ಸಲಹೆ ಪಡೆದು ಮುಂದಿನ ಕ್ರಮ
ಸಿಡಿ ಪ್ರಕರಣದಲ್ಲಿ ಮೂಲ ವಿಡಿಯೋವನ್ನು ಎಫ್‌ಎಸ್‌ಎಲ್‌ಗೆ ಕಳುಹಿಸಿ, ಆ ವರದಿಯನ್ನು ಡಿಜಿಟಲ್‌ ಸಾಕ್ಷ್ಯವನ್ನಾಗಿ ಪರಿಗಣಿಸಿ ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲು ತನಿಖಾಧಿಕಾರಿಗಳು ಚಿಂತನೆ ನಡೆಸಿದ್ದರು. ಆದರೆ, ಸಾಕ್ಷ್ಯಧಾರಗಳ ಕೊರತೆಯಿಂದ ಸಿಡಿ ಕೇಸ್‌ ಠುಸ್‌ ಆಗುವ ಸಾಧ್ಯತೆಗಳೇ ಹೆಚ್ಚಾಗಿವೆ. ಸದ್ಯ ಸರ್ಕಾರ ಹಾಗೂ ಮೇಲಾಧಿಕಾರಿಗಳ ಸಲಹೆ ಪಡೆದು ತನಿಖೆ ಮುಂದುವರೆಸಲು ಎಸ್‌ಐಟಿ ಚಿಂತಿಸಿದೆ.

ಬಲವಾದ ಡಿಜಿಟಲ್‌ ಸಾಕ್ಷ್ಯಗಳು ಪತ್ತೆಯಾಗದೇ ಈ ಕೇಸ್‌ನ್ನು ಹನಿಟ್ರ್ಯಾಪ್ ಎಂದು ಚಾರ್ಜ್‌ಶೀಟ್‌ನಲ್ಲಿ ಸಾಬೀತುಪಡಿಸುವುದು ಕಷ್ಟಸಾಧ್ಯ ಎಂದು ಉನ್ನತ ಪೊಲೀಸ್‌ ಮೂಲಗಳು ತಿಳಿಸಿವೆ.

ಗೊಂದಲ ಹೇಳಿಕೆಯೇ ಸವಾಲು?
ಎಸ್‌ಐಟಿ ತಂಡ “ಒರಿಜಿನಲ್‌ ವಿಡಿಯೋ’ಗಾಗಿ ಒಂದು ವರ್ಷದಿಂದ ತಾಂತ್ರಿಕ ಕಾರ್ಯಾಚರಣೆ ನಡೆಸಿತ್ತು. ಪ್ರಕರಣದ ಆರೋಪಿಗಳಾದ ನರೇಶ್‌ ಹಾಗೂ ಶ್ರವಣ್‌ ಬಳಿಯೇ ನೈಜ ಸಿಡಿ ಇದೆ ಎಂದು ಸಂತ್ರಸ್ತೆ ವಿಚಾರಣೆಯಲ್ಲಿ ತನಿಖಾಧಿಕಾರಿಗಳ ಮುಂದೆ ಹೇಳಿದ್ದಳು. ಇತ್ತ ನರೇಶ್‌, ಶ್ರವಣ್‌ ಸಿಡಿಯಲ್ಲಿರುವ ಯುವತಿಯ ಮೇಲೆ ಬೊಟ್ಟು ಮಾಡಿದ್ದರು. ಮೂವರ ಗೊಂದಲದ ಹೇಳಿಕೆಯಿಂದ ಎಸ್‌ಐಟಿಗೆ ನೈಜ ವಿಡಿಯೋ ಪತ್ತೆ ಹಚ್ಚುವುದೇ ಸವಾಲಾಗಿದೆ. ಈಗಾಗಲೇ ವೈರಲ್‌ ಆಗಿರುವ ಅಶ್ಲೀಲ ವಿಡಿಯೋವನ್ನು ಕೊಂಚ ಎಡಿಟ್‌ ಮಾಡಿ ಸಿಡಿಗೆ ಅಪ್‌ಲೋಡ್‌ ಮಾಡಿರುವುದು ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್‌ಎಸ್‌ಎಲ್‌) ಪರಿಶೀಲನೆಯಲ್ಲಿ ಪತ್ತೆಯಾಗಿದೆ.

ಪ್ರಭಾವಿ ವ್ಯಕ್ತಿ ಬಳಿ ನೈಜ ವಿಡಿಯೋ ?
ಒಂದು ಮೂಲಗಳ ಪ್ರಕಾರ ಮಲ್ಲೇಶ್ವರದಲ್ಲಿರುವ ಮಾಜಿ ಸಚಿವರಿಗೆ ಸೇರಿದ ಫ್ಲ್ಯಾಟ್ ಗೆ ಯುವತಿ ಬಂದಾಗ, ತನ್ನ ವ್ಯಾನಿಟಿ ಬ್ಯಾಗ್‌ನ ಬಟನ್‌ ಇರುವ ಜಾಗದಲ್ಲಿ ಮೈಕ್ರೋ ಕ್ಯಾಮರಾ ಇಟ್ಟಿದ್ದಳು. ನಂತರ ಮಾಜಿ ಸಚಿವರೊಂದಿಗೆ ಕಳೆದ ಖಾಸಗಿ ಕ್ಷಣದ ವಿಡಿಯೋ ಸೆರೆ ಹಿಡಿದು ತೆರಳಿದ್ದಳು ಎನ್ನಲಾಗಿದೆ. ಈ ಖಾಸಗಿ ದೃಶ್ಯದ ನೈಜ ವಿಡಿಯೋ ಆರೋಪಿಗಳ ಹಿಂದಿರುವ ರಾಜ್ಯದ ಪ್ರಭಾವಿಯೊಬ್ಬರ ಬಳಿ ಇದೆ ಎಂಬ ಶಂಕೆ ವ್ಯಕ್ತವಾಗಿದೆ. ಆದರೆ, ಪ್ರಕರಣದಲ್ಲಿ ಶಂಕಿತ ಪ್ರಭಾವಿ ವ್ಯಕ್ತಿ ಶಾಮೀಲಾಗಿರುವುದಕ್ಕೆ ಎಸ್‌ಐಟಿ ಬಳಿ ಯಾವುದೇ ಸಾಕ್ಷ್ಯಗಳಿಲ್ಲ. ಹೀಗಾಗಿ ಆ ಪ್ರಭಾವಿಯನ್ನು ವಿಚಾರಣೆ ನಡೆಸಲೂ ಸಾಧ್ಯವಾಗುತ್ತಿಲ್ಲ. ಇನ್ನು ಆರೋಪಿಗಳು ಎಲ್ಲೂ ಪ್ರಕರಣದ ಹಿಂದಿರುವ ಆ ಪ್ರಭಾವಿಯ ಸಣ್ಣ ಸುಳಿವು ಬಿಟ್ಟು ಕೊಟ್ಟಿಲ್ಲ ಎಂದು ಎಸ್‌ಐಟಿ ಮೂಲಗಳಿಂದ ತಿಳಿದು ಬಂದಿದೆ.

ಎಸ್‌ಐಟಿ ತನಿಖೆಯಲ್ಲಿ ಸಿಕ್ಕಿದ ಸಾಕ್ಷ್ಯಧಾರಗಳೇನು?
– ಸಿಡಿಯಲ್ಲಿ ಸೆರೆಯಾದ ದೃಶ್ಯದಲ್ಲಿ ಇಬ್ಬರೂ ಮಾತುಕತೆ ನಡೆಸಿರುವುದು.
– ಮಹಜರು ವೇಳೆ ಯುವತಿ ವಿರುದ್ಧ ಸಿಕ್ಕ ಮಹತ್ವದ ದಾಖಲೆಗಳು.
– ಮಾಜಿ ಸಚಿವರು ಹಾಗೂ ಯುವತಿ ನಡುವಿನ ಮೊಬೈಲ್‌ ಸಂಭಾಷಣೆ, ಚಾಟಿಂಗ್‌, ವಿಡಿಯೋ ಕರೆ.
– ಸಿಡಿ ಬಿಡುಗಡೆ ಬಳಿಕ ಪ್ರಕರಣದಲ್ಲಿ ಶಾಮೀಲಾದವರು ವೈ-ಫೈ ಬಳಸಿಕೊಂಡು ಕರೆ ಮಾಡಿ ಮಾತುಕತೆ ನಡೆಸಿರುವುದು.
– ಶಂಕಿತರು ಹಾಗೂ ಯುವತಿಯ ಬ್ಯಾಂಕ್‌ ಖಾತೆಗೆ ಹಣ ಜಮೆಯಾಗಿರುವುದು.

-ಅವಿನಾಶ್‌ ಮೂಡಂಬಿಕಾನ

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.