ಯೋಗೇಶ್ವರ್ ಗೆ ಸಚಿವ ಸ್ಥಾನ ನೀಡದಂತೆ ಗೆಳೆಯರು ಒತ್ತಡ ಹಾಕಿದ್ದಾರೆ: ರಮೇಶ್ ಜಾರಕಿಹೊಳಿ
Team Udayavani, Nov 25, 2020, 4:52 PM IST
ಬೆಂಗಳೂರು: ಸಿ.ಪಿ ಯೋಗೇಶ್ವರ್ ಅವರಿಗೆ ಸಚಿವ ಸ್ಥಾನ ನೀಡದಂತೆ ನನ್ನ ಕೆಲವು ಗೆಳೆಯರು ಕೂಡ ವಿರೋಧ ಮಾಡಿದ್ದು ನಿಜ. ಆದರೆ ಅವನಿಗೆ ಸಚಿವ ಸ್ಥಾನ ಕೊಡಿಸಲು ಫೈಟ್ ಮಾಡೋದು ನನ್ನ ಧರ್ಮ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ನನಗೆ ಸಿಪಿ ಯೋಗೇಶ್ವರ್ ಅವರು ತುಂಬಾ ಒಳ್ಳೆಯ ಪರಿಚಯ. ಅವನನ್ನು ಮಂತ್ರಿ ಮಾಡುವ ವಿಚಾರ ಹೈಕಮಾಂಡ್ ಗೆ ಬಿಟ್ಟಿದ್ದು, ಯೋಗೇಶ್ವರ್ ನನ್ನು ಮಂತ್ರಿ ಮಾಡಿದರೂ ಖುಷಿ, ಮಾಡದೆ ಇದ್ದರೂ ಖುಷಿ, ಆದರೆ ಅವನ ಪರವಾಗಿ ನಾನು ಕೊನೆಯವರೆಗೂ ಬ್ಯಾಟಿಂಗ್ ಮಾಡುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ:ಸೋನಿಯಾ ಗಾಂಧಿ ಬಿಜೆಪಿಗೆ ಬರಬಹುದು ಆದ್ರೆ ಪ್ರಕಾಶ್ ಹುಕ್ಕೇರಿ ಬರುವುದಿಲ್ಲ: ಪ್ರಭಾಕರ್ ಕೋರೆ
ಜಾರಕಿಹೊಳಿ ನಿವಾಸದಲ್ಲಿ ಶಾಸಕರ ಚರ್ಚೆಯ ಕುರಿತು ಮಾತನಾಡಿದ ಅವರು, ನಾನೇನು ಸ್ಟ್ರಾಂಗ್ ಅಲ್ಲ, ಮಾಧ್ಯಮದವರೇ ನನ್ನನ್ನು ಸ್ಟ್ರಾಂಗ್ ಮಾಡುತ್ತಿದ್ದೀರಿ. ನೀರಾವರಿ ಸಮಸ್ಯೆ ಗಳ ಬಗ್ಗೆ ಚರ್ಚಿಸಲು ಶಾಸಕರು ಬರುತ್ತಾರೆ ಅಷ್ಟೇ ಎಂದರು.
ನಾನು ಡಿಸಿಎಂ ಸ್ಥಾನವನ್ನು ಯಾವತ್ತು ಕೇಳಿಲ್ಲ, ಮುಂದೆಯೂ ಕೇಳುವುದಿಲ್ಲ. ಮುಖ್ಯಮಂತ್ರಿಗಳು ನನಗೆ ವಿಶ್ವಾಸದಿಂದ ನೀರಾವರಿ ಖಾತೆ ಕೊಟ್ಟಿದ್ದಾರೆ. ಇದರಲ್ಲೇ ನಾನು ಬಹಳ ಸಂತೋಷದಿಂದ ಕೆಲಸ ಮಾಡುತ್ತೇನೆ ಎಂದು ಜಾರಕಿಹೊಳಿ ಹೇಳಿದರು.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಲೇಷಿಯಾಕ್ಕೆ ರಫ್ತಾಗುತ್ತಿದ್ದ 400ಟನ್ ಗೂ ಅಧಿಕ ಅಕ್ರಮ ಪಡಿತರ ಅಕ್ಕಿ ವಶ : ತನಿಖೆ ಚುರುಕು
ಪಿಯು ಸೇವೆಗಳನ್ನು ಸಕಾಲ ವ್ಯಾಪ್ತಿಗೆ ತರಲು ಚಿಂತನೆ : ಶಿಕ್ಷಣ ಸಚಿವ ಸುರೇಶ್ ಕುಮಾರ್
ದೇವರ ದರ್ಶನಕ್ಕೆ ಬಂದ ಮೂವರು ಸಮುದ್ರ ಪಾಲು : ಗೋಕರ್ಣ ಕಡಲಿನಲ್ಲಿ ನಡೆದ ದುರಂತ
ಮಂಗಳೂರು : 44.2 ಲಕ್ಷ ಮೌಲ್ಯದ ಅಕ್ರಮ ಚಿನ್ನ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ
ಹಣ ಡಬಲ್ ಮಾಡುವುದಾಗಿ ನಂಬಿಸಿ 20 ಕೋಟಿ ರೂ. ಪಂಗನಾಮ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ