Udayavni Special

ಸ್ಪೀಕರ್‌ ಸ್ಥಾನಕ್ಕೆ ರಮೇಶ್‌ಕುಮಾರ್‌ ರಾಜೀನಾಮೆ

Team Udayavani, Jul 30, 2019, 3:07 AM IST

speaker

ಬೆಂಗಳೂರು: ಮೈತ್ರಿ ಸರ್ಕಾರದ ವಿರುದ್ಧ ಬಂಡಾಯ ಸಾರಿದ್ದ 17 ಶಾಸಕರನ್ನು ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಳಿಸಿ ಐತಿಹಾಸಿಕ ತೀರ್ಪು ನೀಡಿದ್ದ ರಮೇಶ್‌ಕುಮಾರ್‌ ಸೋಮವಾರ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ವಿಶ್ವಾಸ ಮತ ಯಾಚನೆ ಹಾಗೂ ಧನ ವಿನಿಯೋಗ ವಿಧೇಯಕ ಅಂಗೀಕಾರಗೊಂಡ ನಂತರ ರಮೇಶ್‌ ಕುಮಾರ್‌, 14 ತಿಂಗಳು 4 ದಿನಗಳ ತಮ್ಮ ಸಭಾಧ್ಯಕ್ಷ ಹುದ್ದೆಗೆ ರಾಜೀನಾಮೆಯನ್ನು ಪ್ರಕಟಿಸಿ ಉಪಸಭಾಧ್ಯಕ್ಷ ಕೃಷ್ಣಾ ರೆಡ್ಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು.

ಸ್ಪೀಕರ್‌ ಆಗಿ ಕೊನೆಯ ದಿನ ಸದನದಲ್ಲಿ ವಿದಾಯ ಭಾಷಣ ಮಾಡಿದ ರಮೇಶ್‌ ಕುಮಾರ್‌, ಚುನಾವಣಾ ವ್ಯವಸ್ಥೆ ಸುಧಾರಣೆ ಮತ್ತು ಲೋಕಾಯುಕ್ತ ಕಾಯ್ದೆ ಬಲಪಡಿಸುವಂತಹ ರಚನಾತ್ಮಕ ಕೆಲಸಗಳನ್ನು ಸರ್ಕಾರ ಮತ್ತು ಸದನ ಮಾಡಬೇಕಾಗಿದೆ. ಪ್ರಜಾತಂತ್ರದ ನಾಲ್ಕನೇ ಅಂಗ ಎಂದು ಗುರುತಿಸಿಕೊಂಡಿರುವ ಮಾಧ್ಯಮಗಳು ವೈಯಕ್ತಿಕ ತೇಜೋವಧೆ ಮಾಡುವ ಕೆಲಸಕ್ಕೆ ಇಳಿಯಬಾರದು ಎಂದು ಸಲಹೆ ಮಾಡಿದರು.

ಚುನಾವಣಾ ವ್ಯವಸ್ಥೆಯೇ ಭ್ರಷ್ಟಾಚಾರಕ್ಕೆ ಮೂಲ ಕಾರಣ. ಇಂತಹ ವ್ಯವಸ್ಥೆ ಸುಧಾರಣೆಗೆ ಕ್ರಮ ಆಗಲೇಬೇಕಾಗಿದೆ. ಸಂವಿಧಾನದ 10ನೇ ಪರಿಚ್ಛೇದ ಪರಿಪೂರ್ಣವಾಗಿಲ್ಲ. ಇದಕ್ಕೆ ಸಾಕಷ್ಟು ತಿದ್ದುಪಡಿಗಳು ಆಗಬೇಕಾಗಿದೆ. ಚುನಾವಣಾ ವ್ಯವಸ್ಥೆ ಸುಧಾರಣೆ ಕುರಿತು ಸದನದಲ್ಲಿ ಸಮಗ್ರ ಚರ್ಚೆಯಾಗಿ ನಿರ್ಣಯ ಕೈಗೊಂಡು ಪ್ರಧಾನಿ ಮತ್ತು ಸಂಸತ್ತಿಗೆ ಕಳುಹಿಸಿ ಕೇಂದ್ರದ ಮೇಲೂ ಒತ್ತಡ ಹೇರಬೇಕಾಗಿದೆ. 1951 ರ ಪ್ರಜಾಪ್ರತಿನಿಧಿ ಕಾಯ್ದೆಯೂ ಪರಿಷ್ಕರಣೆಯಾಗಬೇಕಿದೆ. ಸಂಸದೀಯ ಪ್ರಜಾಪ್ರಭುತ್ವ ಉಳಿದರೆ ಮಾತ್ರ ಭ್ರಷ್ಟಾಚಾರದಂತಹ ಪಿಡುಗುಗಳು ನಿವಾರಣೆಯಾಗಲು ಸಾಧ್ಯ ಎಂದು ಪ್ರತಿಪಾದಿಸಿದರು.

ಲೋಕಾಯುಕ್ತ ಕಾಯ್ದೆ ಬಲಪಡಿಸುವ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದು, ಈ ನಿಟ್ಟಿನಲ್ಲಿ ಗಮನಹರಿಸುವ ಅಗತ್ಯವಿದೆ. ಪ್ರತಿವರ್ಷ ಲೋಕಾಯುಕ್ತ ಸಂಸ್ಥೆಗೆ ನಾವು ಆಸ್ತಿ ವಿವರಗಳನ್ನು ಸಲ್ಲಿಸಿ ಸುಮ್ಮನಾಗುತ್ತೇವೆ. ಜನಪ್ರತಿನಿಧಿಗಳು ಆಸ್ತಿ ವಿವರ ಸಲ್ಲಿಸದಿದ್ದರೆ ಏನು ಕ್ರಮ ಕೈಗೊಳ್ಳಲಾಗುತ್ತದೆ ಎನ್ನುವ ಬಗ್ಗೆ ಕಾನೂನಿನಲ್ಲಿ ಏನೂ ಹೇಳಿಲ್ಲ. ಪ್ರತಿ ಬಾರಿಯೂ ಚುನಾವಣೆಯಲ್ಲಿ ಸ್ಪರ್ಧಿಸುವ ವ್ಯಕ್ತಿಗಳು ನೂರಾರು ಕೋಟಿ ಆಸ್ತಿ ಘೋಷಣೆ ಮಾಡಿಕೊಳ್ಳುತ್ತಾರೆ.

ಆದರೆ, ಅವರ ಆದಾಯದ ಮೂಲ ಯಾವುದು ಎನ್ನುವುದನ್ನು ಚುನಾವಣಾ ಆಯೋಗ ಎಂದೂ ಪ್ರಶ್ನಿಸಿಲ್ಲ. ಏಕಾ ಏಕಿ ಹೆಚ್ಚಳವಾದ ಆದಾಯದ ಬಗ್ಗೆ ಚುನಾವಣಾ ಆಯೋಗ ಜಾರಿ ನಿರ್ದೇಶನಾಲಯದ ಮೂಲಕ ತನಿಖೆಗೆ ಆದೇಶ ಮಾಡುವ ವ್ಯವಸ್ಥೆ ಜಾರಿಯಾಗಬೇಕು. ಭ್ರಷ್ಟಾಚಾರ ವಿರುದ್ಧ ಕೆಲಸ ಮಾಡುವಂತಹ ಸಂಸ್ಥೆಗೆ ಶಕ್ತಿ ತುಂಬುವ ಕೆಲಸವಾಗುತ್ತಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಪ್ರಾಮಾಣಿಕ ಪ್ರಯತ್ನ ಮಾಡಬೇಕೆಂದು ಹೇಳಿದರು.

ಮಾಧ್ಯಮಗಳ ಬಗ್ಗೆಯೂ ಪರೋಕ್ಷ ಅಸಮಾಧಾನ ಹೊರ ಹಾಕಿದ ಅವರು, ಮಾಧ್ಯಮಗಳು ಯಾವುದೇ ವ್ಯಕ್ತಿಯ ವೈಯಕ್ತಿಕ ಬದುಕನ್ನು ರೋಚಕವಾಗಿ ವರದಿ ಮಾಡುವುದು ಸರಿಯಲ್ಲ. ಇದರಿಂದ ಆ ವ್ಯಕ್ತಿ ಮತ್ತು ಕುಟುಂಬದಲ್ಲಿ ಸಾಕಷ್ಟು ತೊಂದರೆ ಅನುಭವಿಸುವಂತಾಗುತ್ತದೆ. ಎಷ್ಟೋ ಸಾರಿ ಮಾಧ್ಯಮಗಳ ರೋಚಕ ವರದಿಗಳಿಂದ ನೊಂದ ವ್ಯಕ್ತಿ ಜೀವ ಕಳೆದುಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಹೀಗಾಗಿ ಎಚ್ಚರಿಕೆಯಿಂದ ವರದಿ ಮಾಡಿ ಎಂದು ಕಿವಿ ಮಾತು ಹೇಳಿದರು.

ಉದಯವಾಣಿ ಸುದ್ದಿ ಈಗ ಟೆಲಿಗ್ರಾಂನಲ್ಲೂ ಲಭ್ಯ; ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ

ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ

rcb

ಬೆಂಗಳೂರು-ಹೈದರಾಬಾದ್ ಬಿಗ್ ಫೈಟ್: ಟಾಸ್ ಗೆದ್ದ ವಾರ್ನರ್ ಪಡೆ ಬೌಲಿಂಗ್ ಆಯ್ಕೆ

ಕೊಲ್ಹಾಪುರ ಏರ್‌ಪೋರ್ಟ್‌ ವಿಸ್ತರಣೆಗೆ 10 ಕೋಟಿ ರೂ. ಅನುದಾನ

ಕೊಲ್ಹಾಪುರ ಏರ್‌ಪೋರ್ಟ್‌ ವಿಸ್ತರಣೆಗೆ 10 ಕೋಟಿ ರೂ. ಅನುದಾನ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

mullayanagiri-main

ಕೈಬೀಸಿ ಕರೆಯೋ ಮಂಜಿನ ಶೃಂಗಾರ ಸೌಂದರ್ಯದ ಮುಳ್ಳಯ್ಯನಗಿರಿ ಬೆಟ್ಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ

ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಚಾಮರಾಜನಗರ: 22 ಹೊಸ ಕೋವಿಡ್ ಪ್ರಕರಣ ದೃಢ: 28 ಮಂದಿ ಗುಣಮುಖ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ಪಿರಿಯಾಪಟ್ಟಣ ಮೂಲದ ಮಹಿಳೆ, ಮಕ್ಕಳು ಐರ್ಲೆಂಡ್‌ನಲ್ಲಿ ಅನುಮಾನಾಸ್ಪದ ಸಾವು: ಕೊಲೆ ಶಂಕೆ

ನೀವು ಸರಿಯಿದ್ದರೆ ಇಂತಹ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕೈ ಪಕ್ಷದ ವಿರುದ್ಧ ಮುನಿರತ್ನ ಕಿಡಿ

ನೀವು ಸರಿಯಿದ್ದರೆ ಈ ಪರಿಸ್ಥಿತಿ ಯಾಕೆ ಬರುತ್ತಿತ್ತು? ಕಾಂಗ್ರೆಸ್ ವಿರುದ್ಧ ಮುನಿರತ್ನ ಕಿಡಿ

MUST WATCH

udayavani youtube

ಈ ಮತ್ಸ್ಯಪ್ರೇಮಿಗೆ ಮನೆಯ ಬಾವಿಯೇ ಅಕ್ವೇರಿಯಂ

udayavani youtube

ಬೆಳ್ತಂಗಡಿ: ಕಾಡಿನಿಂದ ನಾಡಿಗೆ ಆಹಾರ ಅರಸಿಬಂದ ಎರಡು ತಿಂಗಳ ಆನೆ ಮರಿ

udayavani youtube

ಅಪಾಯಕಾರಿ ತಿರುವು; ಎಚ್ಚರ ತಪ್ಪಿದರೆ ಅಪಘಾತ ಖಚಿತ!

udayavani youtube

Peoples take on reopening of schools | ಶಾಲೆ ಯಾಕೆ ಬೇಕು? ಯಾಕೆ ಬೇಡ ? | Udayavani

udayavani youtube

ಭಕ್ತಿ-ಸಂಭ್ರಮದ ಮಂಗಳೂರು ದಸರಾ -2020 ಸಂಪನ್ನ

ಹೊಸ ಸೇರ್ಪಡೆ

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ಚಿಕ್ಕಮಗಳೂರು : ಶಾಮಿಯಾನ ಸಾಗಾಟದ ವಾಹನ ಪಲ್ಟಿ! ಚಾಲಕ ಪ್ರಾಣಾಪಾಯದಿಂದ ಪಾರು

ರಾಜಕಾಲುವೆ ಮೇಲೆ ವಾಣಿಜ್ಯ ಮಳಿಗೆ-ಆರೋಪ

ರಾಜಕಾಲುವೆ ಮೇಲೆ ವಾಣಿಜ್ಯ ಮಳಿಗೆ-ಆರೋಪ

ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ

ಗಂಗಾವತಿ: ಮನೋಹರಸ್ವಾಮಿ ಅಪಹರಣ ಪ್ರಕರಣದಲ್ಲಿರುವ ನಗರಸಭೆ ಸದಸ್ಯರ ಬಂಧನಕ್ಕೆ ಆಗ್ರಹ

cd-tdy-1

ಸಪ್ತಪದಿ ಕಾರ್ಯಕ್ರಮ ಶೀಘ್ರ ಆರಂಭ

cm-tdy-1

ಗ್ರಾಮಠಾಣಾ ಜಾಗ ಗುರುತಿಸಲು ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.