ರಮೇಶ್ ಭೇಟಿ ಮಾಡಿದ ಪ್ರಸನ್ನಾನಂದ ಸ್ವಾಮೀಜಿ
Team Udayavani, Jun 6, 2019, 3:00 AM IST
ಬೆಂಗಳೂರು: ಕಾಂಗ್ರೆಸ್ ಬಂಡಾಯ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಭೇಟಿ ನಂತರ ಸುದ್ದಿಗಾರರ ಜತೆ ಮಾತನಾಡಿ, “ರಮೇಶ್ ಹಾಗೂ ಸತೀಶ್ ಜಾರಕಿಹೊಳಿ ನಡುವಿನ ಭಿನ್ನಾಭಿಪ್ರಾಯ ಬಗೆಹರಿಸಲು ನಾನು ಬಂದಿರಲಿಲ್ಲ. ಹಿಂದೆ ಇಬ್ಬರೂ ಸಹೋದರರ ನಡುವೆ ವೈಯಕ್ತಿಕ ಭಿನ್ನಾಭಿಪ್ರಾಯ ಇದ್ದಾಗ ನಾನು ಮಧ್ಯಸ್ಥಿಕೆ ವಹಿಸಿ ಬಗೆಹರಿಸಿದ್ದೆ. ಈಗ ಅವರ ನಡುವೆ ರಾಜಕೀಯ ಭಿನ್ನಾಭಿಪ್ರಾಯ ಇರುವುದರಿಂದ ನಾನು ಈ ವಿಷಯದಲ್ಲಿ ಮಾತನಾಡುವುದಿಲ್ಲ’ ಎಂದು ಹೇಳಿದರು.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಶೇ.7ಕ್ಕೆ ಹೆಚ್ಚಿಸುವಂತೆ ಹೋರಾಟ ನಡೆಸುತ್ತಿದ್ದು, ಗುರುವಾರ ರಾಜ್ಯಾದ್ಯಂತ ಹೋರಾಟ ನಡೆಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಸಮುದಾಯದ ನಾಯಕರಾಗಿರುವ ರಮೇಶ್ ಜಾರಕಿಹೊಳಿಯನ್ನು ಭೇಟಿ ಮಾಡಿ, ಚರ್ಚೆ ನಡೆಸಿದ್ದೇನೆ.
ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವಂತೆ ಜೂ. 9 ರಿಂದ ರಾಜನಹಳ್ಳಿ ಮಹಾಸಂಸ್ಥಾನದಿಂದ ಪಾದಯಾತ್ರೆ ಆರಂಭಿಸಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಮನವಿ ಸಲ್ಲಿಸಲಾಗುವುದು. ರಾಜ್ಯ ಸರ್ಕಾರ ನಮ್ಮ ಮನವಿಗೆ ಸ್ಪಂದಿಸದಿದ್ದರೆ, ಜೂ.25ರಂದು ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು ಎಂದು ಸ್ವಾಮೀಜಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
2014 ರಿಂದಲೇ ಜೆಡಿಎಸ್ ಬಿಜೆಪಿ ಮೈತ್ರಿಯಲ್ಲಿವೆ ಇದು ಹೊಸದೇನಲ್ಲ… HDK
Raids: ಕೊಪ್ಪಳ ಕೃಷಿ ಇಲಾಖೆ ಉಪ ನಿರ್ದೇಶಕ ಸಹದೇವ ಯರಗುಪ್ಪಾ ಮನೆ ಮೇಲೆ ಲೋಕಾಯುಕ್ತ ದಾಳಿ
ಮೋದಿ 3ನೇ ಬಾರಿ ಪ್ರಧಾನಿಯಾಗಲು ಸಹಕರಿಸಿ: ಗಾಯತ್ರಿ ಸಿದ್ದೇಶ್ವರ
Lok Sabha Election; ಇಂದಿನಿಂದ 14 ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಕೆ
MUST WATCH
ಹೊಸ ಸೇರ್ಪಡೆ
Arunachal Village: ಕೇವಲ ಒಂದು ಮತಕ್ಕಾಗಿ ಚುನಾವಣಾ ಅಧಿಕಾರಿಗಳ 40 ಕಿ.ಮೀ ಕಾಲ್ನಡಿಗೆ!
SSLC ಪರೀಕ್ಷೆ ವೇಳೆ ಉತ್ತರ ತೋರಿಸಲಿಲ್ಲ ಎಂದು ಸಹಪಾಠಿಗೆ ಚಾಕು ಇರಿದ ವಿದ್ಯಾರ್ಥಿಗಳು
Bengaluru: ಸಾಲ ವಸೂಲಿ ಹೆಸರಲ್ಲಿ ಆಟೋ ವಶ, ಧರ್ಮ ನಿಂದನೆ: ಬಂಧನ
Shocking: ಮುಸುಧಾರಿಗಳಿಂದ ಗುರುದ್ವಾರದ ಸಿಬ್ಬಂದಿಯ ಗುಂಡಿಕ್ಕಿ ಹತ್ಯೆ.. ಭಯಾನಕ ದೃಶ್ಯ ಸೆರೆ
Bengaluru: ಪೇಂಟರ್ ಕೊಂದು ಪೊಲೀಸ್ ಠಾಣೆಗೆ ಬಂದು ಸಿಕ್ಕಿಬಿದ್ದ ಸ್ನೇಹಿತರು