Rameshwaram Cafe Case; ಶಂಕಿತ ಉಗ್ರನ ಮಾಹಿತಿ ಪಡೆಯಲು ಎನ್ಐಎ ತಂಡ ಬಳ್ಳಾರಿಗೆ
Team Udayavani, Mar 7, 2024, 7:55 AM IST
ಬಳ್ಳಾರಿ: ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತ ಉಗ್ರನ ಸುಳಿವಿಗಾಗಿ ಎನ್ಐಎ ತಂಡ ಬಳ್ಳಾರಿಗೆ ಆಗಮಿಸಿದೆ.
ಎನ್ಐಎ ತಂಡ ತಡರಾತ್ರಿಯಿಂದ ಬೆಳಗಿನ ಜಾವದವರೆಗೂ ಬಳ್ಳಾರಿ ಬಸ್ ನಿಲ್ದಾಣದಲ್ಲಿದ್ದು, ಮಾಹಿತಿ ಪಡೆದರು. ಎನ್ಐಎ ತಂಡಕ್ಕೆ ಬಳ್ಳಾರಿ ಮತ್ತು ತುಮಕೂರು ಪೊಲೀಸರು ಸಾಥ್ ನೀಡಿದರು.
ಘಟನೆ ನಡೆದ ಬಳಿಕ ಆರೋಪಿ ತುಮಕೂರು ಮೂಲಕ ಬಳ್ಳಾರಿ ಬಸ್ ನಿಲ್ದಾಣಕ್ಕೆ ಬಂದಿದಿದ್ದನಂತೆ. ಬಳ್ಳಾರಿ ಬಸ್ ನಿಲ್ದಾಣದಿಂದ ಮಂತ್ರಾಲಯ ಗೋಕರ್ಣ ಬಸ್ ಮೂಲಕ ಭಟ್ಕಳಗೆ ತೆರಳಿದ್ದಾನೆ. ಹೀಗಾಗಿ ಎನ್ಐಎ ತಂಡ ಬಳ್ಳಾರಿ ನಿಲ್ದಾಣಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿಂದ ಎರಡು ಕಾರುಗಳಲ್ಲಿ ಹತ್ತಕ್ಕೂ ಹೆಚ್ಚು ಅಧಿಕಾರಿಗಳು ಬಂದಿದ್ದು, ಶಂಕಿತ ಉಗ್ರ ಬಳ್ಳಾರಿಯಿಂದಲೇ ಬೇರೆಡೆ ತೆರಳಿದ ಹಿನ್ನಲೆ ಬಳ್ಳಾರಿ ನಿಲ್ದಾಣದಲ್ಲಿ ಮಾಹಿತಿ ಪಡೆಯಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ