ಡಿಕೆಶಿ ವಿರುದ್ಧ ರಮ್ಯಾ ತಿರುಗಿ ಬಿದ್ದಿದ್ದಾರೆ, ಮೀರ್‌ ಸಾದಿಕ್‌ ಕೈವಾಡ : ಬಿಜೆಪಿ

ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ?

Team Udayavani, May 12, 2022, 1:52 PM IST

1-ffsfsfsf

ಬೆಂಗಳೂರು: ”ಡಿಕೆಶಿ ವಿರುದ್ಧ ಮಾಜಿ ಸಂಸದೆ ರಮ್ಯಾ ತಿರುಗಿಬಿದ್ದಿದ್ದಾರೆ. ಅಸಹಾಯಕ ಡಿಕೆಶಿ ಅವರೇ, ನೀವೇ ಬೆಳೆಸಿದ ಸೋಷಿಯಲ್ ಮೀಡಿಯಾ ಎನ್ ಕೌಂಟರ್ ಸ್ಪೆಷಲಿಸ್ಟ್ ರಮ್ಯಾ ನೇತೃತ್ವದಲ್ಲಿ ಮತ್ತಷ್ಟು ನಕಲಿ ಖಾತೆ ಜನಿಸಲಿದ್ದು, ನಿಮ್ಮದೇ ಮೂಗಿನ ಕೆಳಗೆ ನಿಮ್ಮ ವಿರುದ್ಧವೇ ಟೂಲ್ ಕಿಟ್ ಹಣೆಯಲಾಗುತ್ತಿದೆ.ಇದರ ಹಿಂದೆ ಮೀರ್‌ ಸಾದಿಕ್‌ ಕೈವಾಡವಿದೆ, ಎಚ್ಚರ!” ಎಂದು ಬಿಜೆಪಿ ಸರಣಿ ಟ್ವೀಟ್ ಗಳನ್ನು ಮಾಡಿದೆ.

ಮಾನ್ಯ ಡಿಕೆಶಿ ಅವರೇ, ನಿಮ್ಮ ಹೇಳಿಕೆಯನ್ನು ಪಕ್ಷದ ವೇದಿಕೆಯಲ್ಲಿ ಪ್ರಶ್ನಿಸುತ್ತೇನೆ ಎಂದು ಎಂ.ಬಿ.ಪಾಟೀಲ್ ಹೇಳಿದ್ದಾರೆ. ದೆಹಲಿ ವರಿಷ್ಠರ ಮುಂದೆಯೇ ನಿಮ್ಮ ನಾಯಕತ್ವದ ಪ್ರಶ್ನೆಗೆ ವೇದಿಕೆ ಸಿದ್ದವಾಗುತ್ತಿದೆಯೇ, ಅಸಹಾಯಕ ಡಿಕೆಶಿ? ಚುನಾವಣೆಯ ಹೊಸ್ತಿಲಲ್ಲಿ ಡಿ.ಕೆ. ಶಿವಕುಮಾರ್ ಜತೆ ಎಷ್ಟು ಮಂದಿ ನಿಲ್ಲಬಹುದು ಎಂದು ಕಾಂಗ್ರೆಸಿಗರು ಈಗಲೇ ನಿರ್ಧರಿಸಿರಬಹುದು.ಮೀರ್‌ ಸಾದಿಕ್‌ ಬಣದ ಜೊತೆಗೆ, ಅಸಹಾಯಕ ಡಿಕೆಶಿ ಅವರ ವಿರೋಧಿಗಳ ಸಾಲಿಗೆ ಈಗ ಮಾಜಿ ಸಂಸದೆ ರಮ್ಯಾ ಕೂಡಾ ಸೇರಿದ್ದಾರೆ. ಡಿಕೆಶಿ ಅವರೇ, ಸಹೋದರ ಡಿ.ಕೆ.ಸುರೇಶ್ ಅವರಾದರೂ ನಿಮ್ಮ ಜೊತೆ ನಿಲ್ಲಬಹುದೇ? ಎಂದು ಟ್ವೀಟ್ ಮೂಲಕ ಬಿಜೆಪಿ ಕಾಲೆಳೆದಿದೆ.

ಭ್ರಷ್ಟಾಧ್ಯಕ್ಷ ಡಿಕೆಶಿ ಅವರೇ, ನೀವು ನಿಜಕ್ಕೂ ಕೆಪಿಸಿಸಿ ಅಧ್ಯಕ್ಷರೇ? ಸಾರ್ವಜನಿಕ ಬದುಕಿನಿಂದ ಕಳೆದು ಹೋದವರೆಲ್ಲಈಗ ಬಂದು‌ ಕೆಪಿಸಿಸಿ ಅಧ್ಯಕ್ಷರಿಗೆ ಪಾಠ ಹೇಳುತ್ತಿರುವುದನ್ನು ನೋಡಿದರೆ, ಕನಕಪುರದ ಬಂಡೆ ಎಷ್ಟು ಗಟ್ಟಿ ಎಂದು ಯೋಚಿಸಬೇಕಲ್ಲವೇ? ಡಿಕೆಶಿ ಅವರನ್ನು ಅಧೀರರನ್ನಾಗಿಸುವ ಹಿಂದೆ ಮೀರ್‌ ಸಾದಿಕ್‌ ತಂತ್ರವಿದೆಯೇ? ಎಂದು ಪ್ರಶ್ನಿಸಿದೆ.

“ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ”, ಇದು ಅಸಹಾಯಕ ಡಿಕೆಶಿ ಅವರ ಸದ್ಯದ ಸ್ಥಿತಿ.ಡಿಕೆಶಿ ಅವರೇ ಬೆಳೆಸಿದ ರಮ್ಯಾ ಈಗ ಡಿಕೆಶಿಗೆ ಸಾಮಾಜಿಕ ಮಾಧ್ಯಮದಲ್ಲಿ ಬುದ್ಧಿ ಮಾತು ಹೇಳುತ್ತಿದ್ದಾರೆ. ರಮ್ಯಾ ಅವರನ್ನು ಭ್ರಷ್ಟಾಧ್ಯಕ್ಷ ರ ವಿರುದ್ಧ ಛೂಬಿಟ್ಟಿದ್ದು ಮೀರ್‌ ಸಾದಿಕ್‌ ಅವರಿರಬಹುದೇ? ಎಂದು ಪರೋಕ್ಷ ಟಾಂಗ್ ನೀಡಿದೆ.

ತನ್ನ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ ಉಗ್ರಪ್ಪ ಅವರನ್ನು ಪಕ್ಕದಲ್ಲಿ ಕೂರಿಸಿಕೊಳ್ಳುವಷ್ಟು ಡಿ.ಕೆ. ಶಿವಕುಮಾರ್ ಅಸಹಾಯಕರೇ? ಅಲ್ಪಸಂಖ್ಯಾತ ಸಲೀಂ ಅವರನ್ನು ಕಿತ್ತೊಗೆದು ಉಗ್ರಪ್ಪ ಜೊತೆ ಪತ್ರಿಕಾಗೋಷ್ಠಿ ಮಾಡುವ ಮೂಲಕ ಯಾವ ಸಂದೇಶ ನೀಡುತ್ತಿದ್ದೀರಿ? ನೀವೆಂತಹ ಬಂಡೆ, ಕಲ್ಲುಬಂಡೆಯೋ ಅಥವಾ ಟೊಳ್ಳು ಬಂಡೆಯೋ? ಎಂದು ಕಾಲೆಳೆದಿದೆ.

ಕಾಂಗ್ರೆಸ್ ಒಂದು‌ ಒಡೆದ ಮನೆ. ಇಲ್ಲಿ ಯಾರ ಅಭಿಪ್ರಾಯವನ್ನು ಯಾರು ಸಮರ್ಥಿಸುತ್ತಾರೆ, ಯಾರು ವಿರೋಧಿಸುತ್ತಾರೆ ಎಂಬುದು ಯಾರಿಗೂ ಗೊತ್ತಿಲ್ಲ.ಎಂ.ಬಿ. ಪಾಟೀಲ್ ಹಾಗೂ ಅಶ್ವತ್ಥ್ ನಾರಾಯಣ ಅವರ ಭೇಟಿಯ ಬಗ್ಗೆ ಮಾತನಾಡಿದ #ಅಸಹಾಯಕಡಿಕೆಶಿ ಅವರೀಗ ತಮ್ಮ ಸ್ವಂತ ಮನೆಯಲ್ಲೇ ಉಪವಾಸ ಮಾಡುವ ಸ್ಥಿತಿಯಲ್ಲಿದ್ದಾರೆ.ಹೀಗೇಕಾಯಿತು ಡಿ.ಕೆ. ಶಿವಕುಮಾರ್ ಅವರೇ? ಅಕ್ರಮ ಸಂಪಾದನೆಯ ಹಣದ ಮೂಲಕ ಕಾಂಗ್ರೆಸ್‌ ಪಕ್ಷದಲ್ಲಿ ಏನೋ ಸಾಧನೆ ಮಾಡುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಸ್ಥಾನ ವಹಿಸಿಕೊಂಡ ಡಿ.ಕೆ. ಶಿವಕುಮಾರ್ ಅವರೀಗ ಅಸಹಾಯಕ ಡಿಕೆಶಿ ಆಗಿದ್ದಾರೆ. ಕೆಪಿಸಿಸಿ ಮನೆಯಲ್ಲಿ ಈಗ ಮೀರ್‌ ಸಾದಿಕ್‌ ಹಾವಳಿ ಜಾಸ್ತಿಯಾಗಿದ್ದು ನಿಜವೇ? ಗುಂಪುಗಾರಿಕೆ, ಬಣ, ಉಪಬಣ, ಆ ಬಣ ಈ ಬಣಗಳ ನಡುವೆಯೂ ಒಗ್ಗಟ್ಟಿನ ಮಂತ್ರವೇಕೆ? ಎಂದು ಟ್ವೀಟ್ ಮೂಲಕ ಸವಾಲೆಸೆದಿದೆ.

ಟಾಪ್ ನ್ಯೂಸ್

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

Loksabha election; ಕಾಂಗ್ರೆಸ್‌ ವಿರುದ್ಧ ಮೋದಿ ಈಗ ದೇಶ ವಿಭಜನೆ ಅಸ್ತ್ರ ಪ್ರಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.