ಪ್ರಧಾನಿಗೆ ಸುರ್ಜೇವಾಲ 6 ಪ್ರಶ್ನೆ: ಉತ್ತರಿಸದೆ ಪಲಾಯನ ಎಂದು ಟೀಕೆ

Team Udayavani, Feb 28, 2023, 7:43 AM IST

ಪ್ರಧಾನಿಗೆ ಸುರ್ಜೇವಾಲ 6 ಪ್ರಶ್ನೆ: ಉತ್ತರಿಸದೆ ಪಲಾಯನ ಎಂದು ಟೀಕೆ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರದ ವೈಫ‌ಲ್ಯಗಳು, ಭ್ರಷ್ಟಾಚಾರ ಪ್ರಕರಣಗಳು, ಆಡಳಿತ ಯಂತ್ರ ಕುಸಿತ, ಉದ್ಯೋಗ ಸಮಸ್ಯೆ, ಬೆಲೆ ಏರಿಕೆಯಂತಹ ಪ್ರಶ್ನೆಗಳಿಗೆ ಉತ್ತರ ಕೊಡದೆ ಪ್ರಧಾನಿ ಮೋದಿ ಪಲಾಯನ ಮಾಡುತ್ತಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್‌ ಸುರ್ಜೇವಾಲ ಟೀಕಿಸಿದ್ದಾರೆ.

ರಾಜ್ಯಕ್ಕೆ ಸೋಮವಾರ ಪ್ರಧಾನಿ ಮೋದಿ ಭೇಟಿ ನೀಡಿದ ಹಿನ್ನೆಲೆಯಲ್ಲಿ ಪತ್ರಿಕಾ ಹೇಳಿಕೆ ನೀಡಿರುವ ಅವರು, ಚುನಾವಣೆ ಹತ್ತಿರ ಬರುತ್ತಿದ್ದಂತೆ ಕರ್ನಾಟಕ ನೆನಪಾಗಿ ಓಡೋಡಿ ಬರುತ್ತಿದ್ಧಾರೆ. ಚುನಾವಣಾ ಸಮಯದಲ್ಲಿ ಕರ್ನಾಟಕದ ಸ್ಥಳೀಯ ನಾಯಕತ್ವದ ಕೊರತೆ ಮತ್ತು ವೈಫ‌ಲ್ಯವನ್ನು ಮನಗಂಡಿರುವ ಮೋದಿ ಅವರು ಪದೇ ಪದೆ ಭೇಟಿ ನೀಡಿ ಸುಳ್ಳು ಮಾಹಿತಿಗಳ ಮೂಲಕ ಜನ ಸಾಮಾನ್ಯರ ಭಾವನೆಗಳ ಜತೆ ಆಟವಾಡುತ್ತಿದ್ಧಾರೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್‌ ಕೇಳಿರುವ ಪ್ರಮುಖ 6 ಪ್ರಶ್ನೆಗಳಿಗೆ ಉತ್ತರ ಕೊಡಬೇಕು ಎಂದು ಸುರ್ಜೇವಾಲ ಆಗ್ರಹಿಸಿದ್ದಾರೆ.

ಪ್ರಶ್ನೆ-1: ಬಿಜೆಪಿ ತನ್ನ ಪ್ರಣಾಳಿಕೆಯಲ್ಲಿ ನೀಡಿದ್ದ 600 ಭರವಸೆಗಳ ಪೈಕಿ ಶೇ.10 ರಷ್ಟು ಭರವಸೆಗಳನ್ನೂ ನಿಮ್ಮ ಪಕ್ಷದ ಸರ್ಕಾರ ಈಡೇರಿಸಿಲ್ಲ ಏಕೆ? ಬಿಜೆಪಿಯೇ ಭರವಸೆ ಅನ್ನೋ ಅಭಿಯಾನ ನಡೆಸುತ್ತಿದೆ. ಶೇ.40 ಅಕ್ರಮ ಗಳಿಕೆಯ ಹಣದಲ್ಲಿ ಎಲ್ಲಾ ರಸ್ತೆಗಳು, ಗೋಡೆಗಳ ಮೇಲೆ ಪೋಸ್ಟರ್‌ ಅಂಟಿಸುವ ಮೂಲಕ ಚುನಾವಣೆಗೆ ಮುಂದಾಗಿದೆ. ಸರ್ಕಾರದ ಹಣದಲ್ಲಿ ನೀವು ನಡೆಸುತ್ತಿರುವ ಪ್ರಚಾರ ಸಭೆಯಲ್ಲಿ ಉತ್ತರ ಕೊಡಬೇಕು.

ಪ್ರಶ್ನೆ -2: ದೇಶದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ರಾಜ್ಯದಲ್ಲಿ 2.50 ಲಕ್ಷ ಸರ್ಕಾರಿ ಉದ್ಯೋಗ ಮತ್ತು ಸುಮಾರು 7.50 ಲಕ್ಷ ಖಾಸಗಿ ಉದ್ಯೋಗಕ್ಕೆ ಅವಕಾಶವಿದ್ದರೂ ಬಿಜೆಪಿ ಸರ್ಕಾರ ಉದ್ಯೋಗ ನೀಡುವಲ್ಲಿ ವಿಫ‌ಲವಾಗಿದೆ. ನೇಮಕಾತಿ ನಡೆಸುತ್ತಿರುವ ಹುದ್ದೆಗಳ ಹಂಚಿಕೆಯಲ್ಲೂ ಬ್ರಹ್ಮಾಂಡ ಭ್ರಷ್ಟಾಚಾರ ನಡೆಯುತ್ತಿದೆ. ಇದಕ್ಕೆ ಪಿಎಸ್‌ಐ ಹಗರಣ ಸಾಕ್ಷಿ ಅಲ್ಲವೇ?

ಪ್ರಶ್ನೆ-3: ಶಿವಮೊಗ್ಗ ಭದ್ರಾವತಿಯ ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಲಕ್ಷಾಂತರ ಜನರ ಪಾಲಿಗೆ ಉದ್ಯೋಗ ಒದಗಿಸಿದ್ದ ದೇಶದ ಪ್ರಮುಖ ಕಾರ್ಖಾನೆಯಾಗಿತ್ತು. 2013 ರಲ್ಲಿ ಯುಪಿಎ ಸರ್ಕಾರ 380 ಎಕರೆ ಗಣಿ ಪ್ರದೇಶ ಒದಗಿಸಿದ್ದರೂ ಉಪಯೋಗ ಮಾಡದೇ ಕಾರ್ಖಾನೆಗೆ ಶಾಶ್ವತ ಬೀಗ ಹಾಕಿದ್ದು ಏಕೆ, ಶಿವಮೊಗ್ಗ ಜನರಿಗೆ ಉತ್ತರಿಸುವರೇ?

ಪ್ರಶ್ನೆ-4: ಅಡಕೆ ಮೇಲಿದ್ದ ಆಮದು ಸುಂಕವನ್ನು ಶೇ.110 ರಿಂದ ಕೇವಲ ಶೇ.10ಕ್ಕೆ ಇಳಿಸಿ ದೇಶೀಯ ಅಡಕೆ ಮಾರುಕಟ್ಟೆಯನ್ನು ಭಸ್ಮ ಮಾಡಿದ್ದು ಏಕೆ? ಎಲೆ ಚುಕ್ಕೆ ರೋಗಕ್ಕೆ ಡಬಲ್‌ ಎಂಜಿನ್‌ ಸರ್ಕಾರದ ಔಷಧಿ ಕಂಡು ಹಿಡಿಯಲು ಏಕೆ ಮುಂದಾಗಿಲ್ಲ?

ಪ್ರಶ್ನೆ-5: ಬೆಳಗಾವಿಯಲ್ಲಿ ರೋಡ್‌ಶೋ ಗಾಗಿ ಪ್ರಥಮ ಪಿಯುಸಿ ಪರೀಕ್ಷೆ ರದ್ದು ಮಾಡಿದ್ದು ಏಕೆ?

ಪ್ರಶ್ನೆ -6: ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ- ಇಲ್ಲಿ ಯಾರೂ ಅನಾವಶ್ಯಕವಾಗಿ ಗಡಿ ವಿಚಾರದಲ್ಲಿ ರಾಜಕೀಯ ಮಾಡಬಾರದೆಂದು ಮಹಾರಾಷ್ಟ್ರದ ಬಿಜೆಪಿ ಶಾಸಕರಿಗೆ ಪಾಠ ಹೇಳಬಲ್ಲಿರಾ?

ಟಾಪ್ ನ್ಯೂಸ್

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

1-modi

Congress ಗೆದ್ದರೆ 370ನೇ ವಿಧಿ ವಾಪಸ್‌: ಮೋದಿ ಆರೋಪ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Ra

Congress; ಅಮೇಠಿಗೆ ರಾಹುಲ್‌: ಅಂತಿಮ ನಿರ್ಧಾರ ಖರ್ಗೆ ಹೆಗಲಿಗೆ

1-weqqeqw

Goa; ದಿನಕ್ಕೆ ಒಂದೇ ಖರ್ಜೂರ ತಿನ್ನುತ್ತಿದ್ದ ಇಬ್ಬರು ಸಹೋದರರು ನಿಧನ

1-ww-ewqe

India-Bangladesh ಇಂದಿನಿಂದ ವನಿತಾ ಟಿ20 ಸರಣಿ

1-eeqwew

Ban; ಎಂಡಿಎಚ್‌, ಎವರೆಸ್ಟ್‌ ಮಸಾಲೆಗಳ ಮೇಲೆ ಅಮೆರಿಕ ಕೂಡ ನಿಷೇಧ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.