ಸಿದ್ದು ಸಿಎಂ ಹೇಳಿಕೆ:ಜಮೀರ್, ಹಿಟ್ನಾಳ್ ಗೆ ಪರೋಕ್ಷ ಎಚ್ಚರಿಕೆ ನೀಡಿದ ಉಸ್ತುವಾರಿ ಸುರ್ಜೇವಾಲ
Team Udayavani, Jun 21, 2021, 2:58 PM IST
ಬೆಂಗಳೂರು: ಸಿದ್ದರಾಮಯ್ಯನವರೇ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡಿದ್ದ ಜಮೀರ್ ಅಹಮದ್ ಖಾನ್ ಮತ್ತು ರಾಘವೇಂದ್ರ ಹಿಟ್ನಾಳ್ ಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೇವಾಲ ಪರೋಕ್ಷ ಎಚ್ಚರಿಕೆ ನೀಡಿದ್ದಾರೆ.
ಕರ್ನಾಟಕದಲ್ಲಿ ಕಾಂಗ್ರೆಸ್ ನಾಯಕತ್ವದ ಬಗ್ಗೆ ಕೆಲವರು ಬಹಿರಂಗ ಹೇಳಿಕೆ ನೀಡುತ್ತಿರುವುದು ನಮ್ಮ ಗಮನಕ್ಕೆ ಬಂದಿದೆ. ಸಂದರ್ಭ ಬಂದಾಗ ಪಕ್ಷದ ಹೈಕಮಾಂಡ್ ಮತ್ತು ಶಾಸಕರು ನಾಯಕತ್ವದ ಬಗ್ಗೆ ನಿರ್ಧರಿಸುತ್ತಾರೆ. ಆದರೆ ನಾಯಕತ್ವ ಕುರಿತು ಯಾರೂ ಯಾವುದೇ ಹೇಳಿಕೆ ನೀಡಬಾರದು ಎಂದು ಸುರ್ಜೇವಾಲ ತಾಕೀತು ಮಾಡಿದ್ದಾರೆ.
ಇದನ್ನೂ ಓದಿ:ರೋಹಿಣಿ ಸಿಂಧೂರಿಗೆ ಮತ್ತೊಂದು ಸಂಕಷ್ಟ: ಡಿಸಿ ಅಧಿಕೃತ ನಿವಾಸ ನವೀಕರಣ ಪ್ರಕರಣದ ತನಿಖೆಗೆ ಆದೇಶ
ಗುಂಪುಗಾರಿಕೆ ಇಲ್ಲ: ಕಾಂಗ್ರೆಸ್ ನಲ್ಲಿ ಯಾವುದೇ ಗುಂಪುಗಾರಿಕೆಯಾಗಲಿ, ಒಳಜಗಳಗಳಾಗಲಿ ಇಲ್ಲ. ನಮ್ಮ ಉದ್ದೇಶ ಪಕ್ಷವನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುವುದಾಗಿದೆ ಹೊರತು ಸಿಎಂ ಸ್ಥಾನದ ಬಗ್ಗೆ ಚರ್ಚೆ ನಡೆಸುವಂತ ಸಮಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.