ವಕೀಲೆ ಮೆಲೆ ಅತ್ಯಾಚಾರಕ್ಕೆ ಯತ್ನಿಸಿದ ಸೆಕ್ಯೂರಿಟಿ ಗಾರ್ಡ್
Team Udayavani, Jan 28, 2019, 3:00 AM IST
ಬೆಂಗಳೂರು: ವಕೀಲೆಯೊಬ್ಬರ ಮೇಲೆ ಭದ್ರತಾ ಸಿಬ್ಬಂದಿಯೇ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ರಾಜ್ಯ ರಾಜಧಾನಿಯಲ್ಲಿ ನಡೆದಿದೆ. ಜನವರಿ 25ಕ್ಕೇ ಈ ಪ್ರಕರಣ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅಶೋಕನಗರ ಠಾಣಾ ವ್ಯಾಪ್ತಿಯಲ್ಲಿರುವ ಖಾಸಗಿ ಅಪಾರ್ಟ್ ಮೆಂಟ್ ಒಂದರಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ಈ ಅಪಾರ್ಟ್ ಮೆಂಟ್ ನಲ್ಲಿರುವ ವಕೀಲರ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಮಹಿಳೆಯೇ ಅತ್ಯಾಚಾರ ಪ್ರಯತ್ನಕ್ಕೆ ಒಳಪಟ್ಟಾಕೆ ಮತ್ತು ಅಪಾರ್ಟ್ ಮೆಂಟ್ ನ ಭದ್ರತಾ ಸಿಬ್ಬಂದಿಯೇ ಈ ಪ್ರಕರಣದ ಆರೋಪಿಯಾಗಿದ್ದಾನೆ.
ಜನವರಿ 25ರಂದು ಸಂತ್ರಸ್ತೆ ತನ್ನ ಕಛೇರಿಯಿಂದ ಕೆಲಸ ಮುಗಿಸಿ ತಡರಾತ್ರಿ 11.50ರ ಸುಮಾರಿಗೆ ತನ್ನ ಮನೆಗೆ ಹೊರಟಿದ್ದ ಸಂದರ್ಭದಲ್ಲಿ ಆರೋಪಿಯು ಮಹಿಳೆಯ ಮೆಲೆ ಅತ್ಯಾಚಾರವೆಸಗಲು ಪ್ರಯತ್ನಪಟ್ಟಿದ್ದಾನೆ ಮತ್ತು ಈ ಸಂದರ್ಭದಲ್ಲಿ ಕೆಳಕ್ಕುರುಳಿದ ಮಹಿಳೆಯು ಬಳಿಕ ಆತನಿಂದ ತಪ್ಪಿಸಿಕೊಂಡು ಬಂದರು. ಬಳಿಕ ಪೊಲೀಸ್ ಠಾಣೆಗೆ ತೆರಳಿ ಘಟನೆಗೆ ಸಂಬಂಧಿಸಿದಂತೆ ದೂರು ನೀಡಿದ್ದಾರೆ ಎಂದು ಪ್ರಾಥಮಿಕ ಮಾಹಿತಿಗಳಿಂದ ತಿಳಿದುಬಂದಿದೆ.
ಆರೋಪಿ ಭದ್ರತಾ ಸಿಬ್ಬಂದಿಯು ಪರಾರಿಯಾಗಿದ್ದು ಘಟನೆಯ ಕುರಿತಾದಂತೆ ಪ್ರಕರಣ ದಾಖಲಿಸಿಕೊಂಡಿರುವ ಅಶೋಕ ನಗರ ಠಾಣಾ ಪೊಲೀಸರು ತಲೆಮರೆಸಿಕೊಂಡಿರುವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ