ಅಪ್ರಾಪ್ತೆ ಮೇಲೆ ಅತ್ಯಾಚಾರ: ಪೇದೆಗೆ 10 ವರ್ಷ ಕಠಿಣ ಸಜೆ
Team Udayavani, Jan 15, 2019, 6:15 AM IST
ರಾಮನಗರ: ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆ ಮೇಲೆ ನಿರಂತರ ಅತ್ಯಾಚಾರವೆಸಗಿ ಪರಾರಿ ಯಾಗಿದ್ದ ಪೊಲೀಸ್ ಪೇದೆಗೆ ಇಲ್ಲಿನ 3ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 10 ವರ್ಷ ಕಠಿಣ ಸಜೆ, 1 ಲಕ್ಷ ರೂ ದಂಡ ವಿಧಿಸಿ ತೀರ್ಪು ನೀಡಿದೆ. ಜಿಲ್ಲೆಯ ಚನ್ನಪಟ್ಟಣ ಪೂರ್ವ ಠಾಣೆಯ ಪೇದೆ ವಿಜಯ ಪುರ ಜಿಲ್ಲೆಯ ಶಶಿಕಾಂತ್ ಕಟ್ಟಿಮನಿ ಆರೋಪಿ. ಚನ್ನಪಟ್ಟಣದ ಸರ್ಕಾರಿ ಪಿಯು ಕಾಲೇಜಿನಲ್ಲಿ 2016ನೇ ಸಾಲಿನಲ್ಲಿ ಪ್ರಥಮ ಪಿಯು ಓದುತ್ತಿದ್ದ ಬಾಲಕಿಯೊಬ್ಬಳ ಹಿಂದೆ ಬಿದ್ದ ಈ ಪೊಲೀಸಪ್ಪ ಪ್ರೀತಿ ಮಾಡುವುದಾಗಿ, ಮದುವೆ ಮಾಡಿಕೊಳ್ಳುವುದಾಗಿ ನಂಬಿಸಿ ಬಲಾತ್ಕಾರದಿಂದ ದೈಹಿಕ ಸಂಪರ್ಕ ಬೆಳೆಸಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳುವುದಾಗಿ ಕಾಲ ದೂಡಿದ್ದು, ಏಕಾಏಕಿ ವಿಜಯಪುರಕ್ಕೆ ವರ್ಗಾವಣೆ ಮಾಡಿಸಿಕೊಂಡು ಹೋಗಿದ್ದಾನೆ ಎಂದು ಬಾಲಕಿ ಚನ್ನಪಟ್ಟಣ ಪೂರ್ವ ಠಾಣೆಯಲ್ಲಿ ಸಲ್ಲಿಸಿದ ದೂರಿನಲ್ಲಿ ತಿಳಿಸಿದ್ದಾರೆ. ದೂರಿನನ್ವಯ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ