ರವಿ ಬೆಳಗೆರೆ ವಿಚಾರಣೆಗೆ ಕಸರತ್ತು ; 2 ನೇ ಪತ್ನಿ ನಾಪತ್ತೆ
Team Udayavani, Dec 9, 2017, 12:16 PM IST
ಬೆಂಗಳೂರು: ಹತ್ಯೆಗೆ ಸುಪಾರಿ ನೀಡಿದ ಆರೋಪದ ಮೇಲೆ “ಹಾಯ್ ಬೆಂಗಳೂರು’ ಪತ್ರಿಕೆ ಸಂಪಾದಕ ರವಿ ಬೆಳಗೆರೆ ಯನ್ನು ಕೇಂದ್ರ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ ಬೆನ್ನಲ್ಲೇ ಅವರ 2 ನೇ ಪತ್ನಿ ನಾಪತ್ತೆಯಾಗಿದ್ದು, ಅವರ ಮೊಬೈಲ್ ಸ್ವಿಚ್ಡ್ ಆಫ್ ಆಗಿದ್ದು, ಫೇಸ್ಬುಕ್ ಖಾತೆಯನ್ನೂ ಕೂಡ ಸ್ಥಗಿತಗೊಳಿಸಿದ್ದಾರೆ.
ರಾಜರಾಜೇಶ್ವರಿ ನಗರದ ಪಟ್ಟಣಗೆರೆ ಲೇಔಟ್ನಲ್ಲಿರುವ ನಿವಾಸದಲ್ಲಿ ಯಶೋಮತಿ ಅವರು ಇಲ್ಲ ಎನ್ನುವುದು ಸ್ಪಷ್ಟವಾಗಿದೆ.
ಸುಪಾರಿ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ವಿಚಾರಣೆ ನಡೆಸುವ ಸಾಧ್ಯತೆಗಳಿರುವ ಹಿನ್ನಲೆಯಲ್ಲಿ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಈ ಹಿಂದೆ “ಹಾಯ್ ಬೆಂಗಳೂರು’ ಪತ್ರಿಕೆಯಲ್ಲಿರವಿ ಬೆಳಗೆರೆ ಬಳಿಯೇ ಕೆಲಸ ಮಾಡುತ್ತಿದ್ದ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿಯನ್ನು ಕೊಲೆ ಮಾಡಲು ವಿಜಯಪುರದ ಶಶಿಧರ್ ರಾಮಚಂದ್ರ ಮುಂಡೆವಾಡಿ ಎಂಬಾತನಿಗೆ 30 ಲಕ್ಷ ರೂ.ಗೆ ಸುಪಾರಿ ನೀಡಿ ಮುಂಗಡವಾಗಿ 15 ಸಾವಿರ ರೂ. ಜತೆಗೆ ಒಂದು ಗನ್ ಹಾಗೂ ನಾಲ್ಕು ಗುಂಡು ಸಹನೀಡಿದ್ದ ವಿಚಾರ ತನಿಖೆಯಲ್ಲಿ ಬಯಲಾಗಿತ್ತು.
ಸುನಿಲ್ ಮತ್ತು ಯಶೋಮತಿ ನಡುವೆ ಅನೈತಿಕ ಸಂಬಂಧ ಇದ್ದ ಕಾರಣಕ್ಕೆ ಸುಪಾರಿ ನೀಡಿದ್ದರು ಎಂದು ಹೇಳಲಾಗಿದೆ.
ವಿಚಾರಣೆಗೆ ಕಸರತ್ತು
ಬಂಧನಕ್ಕೊಳಗಾಗಿರುವ ರವಿ ಬೆಳಗೆರೆ ಅವರನ್ನು ಸಿಸಿಬಿ ಪೊಲೀಸರು ವಿಚಾರಣೆಗೊಳಪಡಿಸುತ್ತಿದ್ದು, ಪುತ್ರಿ ಚೇತನಾ ಬೆಳಗೆರೆ ಅವರು ಸಿಸಿಬಿ ಕಚೇರಿಗೆ ಆಗಮಿಸಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿರುವ ಬೆಳಗೆರೆಪೊಲೀಸರ ಬಳಿ ನನಗೆ ಹೆಚ್ಚಿಗೆ ಮಾತನಾಡಲು ಸಾಧ್ಯವಿಲ್ಲ, ನನಗೆ ಪೆನ್ ಮತ್ತು ಪೇಪರ್ ಕೋಡಿ ಎಂದು ಕೇಳಿದ್ದು, ಅದರಲ್ಲಿ ಕೆಲ ವಿಚಾರಗಳನ್ನು ಬರೆಯುತ್ತಿದ್ದಾರೆ ಎಂದು ವರದಿಯಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಜೊಯಿಡಾ ಬಳಿಯಿರುವ ರವಿ ಬೆಳಗೆರೆಯ ತೋಟದ ಮನೆ, ಚಿಕ್ಕಮಗಳೂರಿನಲ್ಲಿರುವ ಕಾಫಿ ಎಸ್ಟೇಟ್ನಲ್ಲೂ ಸಿಸಿಬಿ ಪೊಲೀಸರು ಪರಿಶೀಲನೆ ನಡೆಸಲಿದ್ದಾರೆ ಎಂದು ವರದಿಯಾಗಿದೆ.
ಅರಣ್ಯಾಧಿಕಾರಿಗಳಿಂದ ತನಿಖೆ
ಬೆಳಗೆರೆ ಕಚೇರಿಯಲ್ಲಿ ಸುಮಾರು 50 ವರ್ಷ ಹಳೆಯದಾದ ಜಿಂಕೆಯ ಚರ್ಮ ಮತ್ತು ಆಮೆಯ ಚಿಪ್ಪು ಪತ್ತೆಯಾಗಿರುವ ಹಿನ್ನಲೆಯಲ್ಲಿ ಅರಣ್ಯಾಧಿಕಾರಿಗಳು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವ ಸಾಧ್ಯತೆಗಳಿವೆ. ಈ ಬಗ್ಗೆ ಅರಣ್ಯ ಅಧಿಕಾರಿಗಳಿಗೆ ಸಿಸಿಬಿ ಅಧಿಕಾರಿಗಳು ಪತ್ರ ಬರೆದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
MUST WATCH
ಹೊಸ ಸೇರ್ಪಡೆ
Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ
Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ
Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ
Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !
ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ