ಯಶಸ್ವಿನಿ ಯೋಜನೆ ಮರು ಜಾರಿ: ಮಾರ್ಗಸೂಚಿ ನಿಗದಿ; ನೋಂದಣಿ ಪ್ರಾರಂಭ
Team Udayavani, Oct 12, 2022, 9:37 PM IST
ಬೆಂಗಳೂರು: ಮುಖ್ಯಮಂತ್ರಿಗಳು 2022-23ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಯಶಸ್ವಿನಿ ಯೋಜನೆ ಯನ್ನು ಪರಿಷ್ಕರಿಸಿ ಮರು ಜಾರಿ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ನವೆಂಬರ್ 1 ರಿಂದ ಸದಸ್ಯರ ನೋಂದಣಿ ಪ್ರಾರಂಭವಾಗಲಿದೆ.
ಈ ಕುರಿತು ಇಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ 500 ರೂ. ಹಾಗೂ ನಗರ ಪ್ರದೇಶದ ಸಹಕಾರಿಗಳಿಗೆ 1000 ರೂ. ವಂತಿಗೆ ನಿಗದಿ ಪಡಿಸಲಾಗಿದೆ.
ನಾಲ್ಕು ಮಂದಿಗಿಂತ ಹೆಚ್ಚಿನ ಸದಸ್ಯರು ಇರುವ ಕುಟುಂಬ ಗಳಿಗೆ ಹೆಚ್ಚುವರಿ ಸದಸ್ಯರಿಗೆ ತಲಾ 200 ರೂ. ವಂತಿಗೆ ಪಾವತಿಸಿ, ನೊಂದಾಯಿಸಬಹುದು.
ಈ ಯೋಜನೆಯಡಿ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಒಂದು ಕುಟುಂಬಕ್ಕೆ 5 ಲಕ್ಷ ರೂ. ವರೆಗಿನ ವೆಚ್ಚದಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಬಹುದು. ರಾಜ್ಯ ಸರ್ಕಾರವು ಇದಕ್ಕಾಗಿ ಪ್ರಸಕ್ತ ಆಯವ್ಯಯದಲ್ಲಿ 300 ಕೋಟಿ ರೂ. ಅನುದಾನ ನಿಗದಿ ಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ