ಸರ್ಕಾರ ಉಳಿಸಿಕೊಳ್ಳಲು ಸಾಮೂಹಿಕ ರಾಜೀನಾಮೆಗೆ ಸಿದ್ಧ


Team Udayavani, Jun 5, 2019, 3:07 AM IST

samuhika

ಬೆಂಗಳೂರು: ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಸಾಮೂಹಿಕ ರಾಜೀನಾಮೆಗೂ ಸಿದ್ಧ ಎಂದು ಜೆಡಿಎಸ್‌ ಸಚಿವರು ಹೇಳಿದ್ದು, ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಏನೇ ತೀರ್ಮಾನ ಕೈಗೊಂಡರೂ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ.

ನಗರದಲ್ಲಿ ಮಂಗಳವಾರ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಂಪುಟ ವಿಸ್ತರಣೆ, ಕಾಂಗ್ರೆಸ್‌ನಲ್ಲಿನ ಹಿರಿಯ ನಾಯಕರ ಅಪಸ್ವರ, ಇದರಿಂದ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮಗಳ ಕುರಿತು ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಸಚಿವರು ಹಾಗೂ ಶಾಸಕರು ಕುಮಾರಸ್ವಾಮಿಯವರ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿ, ಸರ್ಕಾರ ಉಳಿಸಿಕೊಳ್ಳಲು ನಾವು ಎಲ್ಲ ರೀತಿಯ ತ್ಯಾಗಕ್ಕೂ ಸಿದ್ಧವಿದ್ದೇವೆ ಎಂದು ಹೇಳಿದರು.

ಮುಖ್ಯಮಂತ್ರಿ ಕುಮಾರಸ್ವಾಮಿಯವರು ಮಾತನಾಡಿ, ನಮ್ಮ ಸರ್ಕಾರ ನಾಲ್ಕು ವರ್ಷ ಮುಂದುವರಿಯಲಿದೆ. ಕಾಂಗ್ರೆಸ್‌ನವರು ಸಂಪೂರ್ಣ ಸಹಕಾರ ನೀಡಲಿದ್ದಾರೆ. ಯಾರೂ ಆತಂಕ ಪಡಬೇಕಿಲ್ಲ. ಶಾಸಕರ ಕ್ಷೇತ್ರಗಳ ಅಭಿವೃದ್ಧಿಗೆ ಸಂಬಂಧಿಸಿದಂತೆ ಕೆಲಸ ಮಾಡಿಕೊಡಲು ಇಲಾಖಾ ಮುಖ್ಯಸ್ಥರಿಗೆ ಹಾಗೂ ನನ್ನ ಸಚಿವಾಲಯದ ಅಧಿಕಾರಿಗಳಿಗೆ ತಿಳಿಸಿದ್ದೇನೆ.

ಸರ್ಕಾರ ಉತ್ತಮ ಕೆಲಸ ಮಾಡಿದೆ. ಆದರೆ, ಲೋಕಸಭೆ ಚುನಾವಣೆ ಫ‌ಲಿತಾಂಶ ಬೇರೆಯದೇ ರೀತಿಯಲ್ಲಿ ಬಂದಿದೆ. ಅದಕ್ಕೆ ಬೇರೆ ಕಾರಣವಿದೆ. ಆದರೆ, ಅದಕ್ಕೆ ತಲೆಕೆಡಿಸಿಕೊಳ್ಳುವುದು ಬೇಡ ಎಂದು ಹೇಳಿದರು.

ಸಂಪುಟ ವಿಸ್ತರಣೆ ಅಥವಾ ಪುನಾರಚನೆ ವಿಚಾರದಲ್ಲಿ ಅಂತಿಮವಾಗಿ ದೇವೇಗೌಡರು ಹಾಗೂ ಕುಮಾರಸ್ವಾಮಿಯವರು ಕೈಗೊಳ್ಳುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರಲು ತೀರ್ಮಾನಿಸಲಾಯಿತು. ಅಗತ್ಯ ಬಿದ್ದರೆ ಕೆಲವು ಸಚಿವರು ಸಚಿವ ಸ್ಥಾನ ಬಿಟ್ಟು ಪಕ್ಷ ಸಂಘಟನೆಗೆ ತೊಡಗುವಂತೆಯೂ ದೇವೇಗೌಡರು ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ.

ಜೆಡಿಎಸ್‌ನ ಕೋಟಾದಡಿ ಇರುವ ಎರಡು ಸಚಿವ ಸ್ಥಾನಗಳ ಪೈಕಿ ಒಂದನ್ನು ಮಾತ್ರ ಕಾಂಗ್ರೆಸ್‌ಗೆ ಬಿಟ್ಟು ಕೊಟ್ಟು ಇನ್ನೊಂದನ್ನು ನಾವೇ ಇಟ್ಟುಕೊಳ್ಳಬೇಕು. ಜೆಡಿಎಸ್‌ ಶಾಸಕರಿಗೆ ಅವಕಾಶ ಮಾಡಿಕೊಡಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಯಿತು. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಮೈತ್ರಿಯಿಂದ ನಮಗೆ ಹಿನ್ನಡೆಯಾಯಿತು.

ಕಾಂಗ್ರೆಸ್‌ ನಾಯಕರು ಎಲ್ಲೆಡೆ ಪೂರ್ತಿ ಮನಸ್ಸಿನಿಂದ ಕೆಲಸ ಮಾಡಲಿಲ್ಲ. ತುಮಕೂರು ಹಾಗೂ ಮಂಡ್ಯ ಕ್ಷೇತ್ರಗಳನ್ನು ನಾವು ಗೆಲ್ಲಬೇಕಿತ್ತು ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದರು. ಆದರೆ, ಆಗಿ ಹೋಗಿದ್ದರ ಬಗ್ಗೆ ಮತ್ತೆ ಕೆದಕಿ ಪ್ರಯೋಜನವಿಲ್ಲ. ಇದೀಗ ಸರ್ಕಾರ ಉಳಿಸಿಕೊಂಡು ಪಕ್ಷ ಕಟ್ಟುವುದು ನಮ್ಮ ಮೊದಲ ಆದ್ಯತೆಯಾಗಬೇಕು.

ಜೆಡಿಎಸ್‌ ಬಲವರ್ಧನೆಗೆ ಹೆಚ್ಚು ಗಮನ ಹರಿಸಬೇಕು. ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮತ್ತಷ್ಟು ಶ್ರಮ ಹಾಕಿದ್ದರೆ ಉತ್ತಮ ಫ‌ಲಿತಾಂಶ ಬರುತ್ತಿತ್ತು. ತಳಮಟ್ಟದಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ ಎಂದು ಸಭೆಯಲ್ಲಿ ದೇವೇಗೌಡರು ತಿಳಿಸಿದರು ಎನ್ನಲಾಗಿದೆ.

ವಿಶ್ವನಾಥ್‌ ಮನವೊಲಿಕೆಗೆ ಯತ್ನ: ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲೂ ರಾಜ್ಯಾಧ್ಯಕ್ಷ ಎಚ್‌.ವಿಶ್ವನಾಥ್‌ ಅವರ ರಾಜೀನಾಮೆ ವಿಚಾರವೇ ಪ್ರಮುಖವಾಗಿ ಚರ್ಚೆಯಾಗಿ, ದೇವೇಗೌಡರು, ಕುಮಾರಸ್ವಾಮಿ ಸಹಿತ ಎಲ್ಲ ಶಾಸಕರು ರಾಜೀನಾಮೆ ನಿರ್ಧಾರ ವಾಪಸ್‌ ಪಡೆಯುವಂತೆ ಮನವಿ ಮಾಡಿದರು.

ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿಯವರ ಜೆಪಿ ನಗರ ನಿವಾಸದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ, “ಪಕ್ಷ ಸಂಘಟನೆಗೆ ನಾವೆಲ್ಲರೂ ನಿಮ್ಮ ಜತೆಗೂಡುತ್ತೇವೆ. ಎಲ್ಲ ರೀತಿಯ ಸಹಕಾರ ನೀಡುತ್ತೇವೆ. ನಿಮ್ಮ ನಾಯಕತ್ವದಲ್ಲೇ ಪಕ್ಷ ಕಟ್ಟೋಣ’ ಎಂದು ಹೇಳಿದರು. ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು, ಎರಡು ದಿನ ಕಾಲಾವಕಾಶ ತೆಗೆದುಕೊಂಡು ನಿಮ್ಮ ನಿರ್ಧಾರ ತಿಳಿಸಿ. ಏನಾದರೂ ವ್ಯತ್ಯಾಸ ಆಗಿದ್ದರೆ ಸರಿಪಡಿಸೋಣ ಎಂದು ತಿಳಿಸಿದರು. ಆದರೆ, ತಮ್ಮನ್ನು ಬಲವಂತ ಮಾಡಬೇಡಿ. ನನಗೆ ಆರೋಗ್ಯವೂ ಕೈ ಕೊಡುತ್ತಿದೆ. ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕಿದೆ ಎಂದು ಹೇಳಿದರು. ಆದರೆ, ರಾಜೀನಾಮೆ ಅಂಗೀಕಾರ ಕುರಿತು ಯಾವುದೇ ತೀರ್ಮಾನವಾಗಲಿಲ್ಲ ಎಂದು ಹೇಳಲಾಗಿದೆ.

ಕಣ್ಣಲ್ಲಿ ನೀರು ತುಂಬಿಕೊಂಡ ಗೌಡರು: ವಿಶ್ವನಾಥ್‌ ರಾಜೀನಾಮೆ ಬಗ್ಗೆ ಒಂದು ಹಂತದಲ್ಲಿ ದೇವೇಗೌಡರು ಭಾವನಾತ್ಮಕವಾಗಿ ಮಾತನಾಡಿ, ಕಣ್ಣಲ್ಲಿ ನೀರು ತುಂಬಿಕೊಂಡರು. “ಯಾಕೆ ಹೀಗೆ ಮಾಡಿದಿರಿ, ದಯಮಾಡಿ ರಾಜೀನಾಮೆ ವಾಪಸ್‌ ಪಡೆಯಿರಿ. ನೀವು ರಾಜೀನಾಮೆ ಪತ್ರದಲ್ಲಿ ಬಳಸಿದ ಪದಗಳು ಸರಿಯಾಗಿವೆ. ಯಾವ ಕೊಂಕು ನುಡಿಯೂ ಇಲ್ಲದೆ ಎಲ್ಲವನ್ನೂ ಹೇಳಿದ್ದೀರಿ. ನಿಮ್ಮ ಅನುಭವ ಪಕ್ಷಕ್ಕೆ ಬೇಕು. ಶಾಸಕರಿಗೆ ನಿಮ್ಮ ಮಾರ್ಗದರ್ಶನ ಬೇಕು’ ಎಂದು ಹೇಳಿದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.