ಕಲ್ಯಾಣ ಕರ್ನಾಟಕ ಭಾಗಕ್ಕೆ 10 ಸಾವಿರ ಶಿಕ್ಷಕರ ನೇಮಕಕ್ಕೆ ಪ್ರಸ್ತಾವನೆ: ಸುರೇಶ್ ಕುಮಾರ್

ಮುಖ್ಯಮಂತ್ರಿಗಳೊಂದಿಗೆ 2021-22ನೇ ಆಯವ್ಯಯ ಪೂರ್ವಭಾವಿ ಸಭೆಯಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆಯ ಯೋಜನೆಗಳ ಪ್ರಸ್ತಾಪ

Team Udayavani, Feb 18, 2021, 5:45 PM IST

suresh-kumar

ಬೆಂಗಳೂರು:  ನಂಜುಂಡಪ್ಪ ವರದಿಯಂತೆ ಶೈಕ್ಷಣಿಕವಾಗಿ ಹಿಂದುಳಿದ ಕಲ್ಯಾಣ ಕರ್ನಾಟಕ ಪ್ರದೇಶದ ಜಿಲ್ಲೆಗಳಲ್ಲಿ ವಿಶೇಷ ಶೈಕ್ಷಣಿಕ ವಲಯಗಳನ್ನು ಸ್ಥಾಪಿಸಿ ಅಭಿವೃದ್ಧಿಗೊಳಿಸಲು ಮತ್ತು ಆ ಭಾಗದ ಶಾಲೆಗಳಿಗೆ 10 ಸಾವಿರ ಶಿಕ್ಷಕರ ನೇಮಕಕ್ಕೆ 2021-22ನೇ ಸಾಲಿನ ಬಜೆಟ್‍ನಲ್ಲಿ ಅವಕಾಶ ಕಲ್ಪಿಸಬೇಕೆಂದು ಮುಖ್ಯಮಂತ್ರಿಯವರನ್ನು ಕೋರಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್   ತಿಳಿಸಿದ್ದಾರೆ.

ಗುರುವಾರ ಮುಖ್ಯಮಂತ್ರಿಯವರೊಂದಿಗೆ ಬಜೆಟ್ ಪೂರ್ವಭಾವಿ ಸಭೆಯಲ್ಲಿ ಭಾಗವಹಿಸಿ ನಂತರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಸಂಬಂಧ ಅವಶ್ಯ  ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ರಾಷ್ಟ್ರೀಯ ಶಿಕ್ಷಣ  ನೀತಿಯ ಅಳವಡಿಕೆ ನಿಟ್ಟಿನಲ್ಲಿ ನೀತಿ ನಿರೂಪಣೆಗೆ ಶಿಕ್ಷಣ ಆಯೋಗ ಸ್ಥಾಪನೆಗೆ ಮನವಿ ಮಾಡಲಾಗಿದೆ.  50 ವರ್ಷ ಹಳೆಯದಾದ 14613 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಕಟ್ಟಡಗಳ     ಹಾಗೂ 634 ಸರ್ಕಾರಿ ಪ್ರೌಢಶಾಲೆಗಳ ಕಟ್ಟಡ ನಿರ್ವಹಣೆಗೆ ಅನುದಾನ ಬಿಡುಗಡೆಗೆ  ಮನವಿ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದರು.

ಸ್ಥಳೀಯ ಸಂಸ್ಥೆಗಳ ಮೂಲಕ ಶಾಲೆಗಳ ಅಭಿವೃದ್ಧಿಗೆ ಕ್ರಮ ವಹಿಸಿ ಪ್ರತಿ ಸ್ಥಳೀಯ ಸಂಸ್ಥೆಗೆ ಎರಡು ಸರ್ಕಾರಿ ಶಾಲೆಗಳಿಗೆ ಅಗತ್ಯ ಮೂಲಸೌಲಭ್ಯ ಒದಗಿಸಿ ಮಾದರಿ ಶಾಲೆಗಳನ್ನಾಗಿ ಮಾರ್ಪಡಿಸಲು ಯೋಜನೆ ರೂಪಿಸಲಾಗಿದೆ. ಪಂಚಾಯತ್/ವಾರ್ಡ್ ಪಬ್ಲಿಕ್ ಶಾಲೆಗಳ ಸ್ಥಾಪನೆಗೆ ಕ್ರಮ ವಹಿಸುವುದು, ರಾಜ್ಯ ಸಾಕ್ಷರತಾ ಅಭಿಯಾನ ಕಾರ್ಯಕ್ರಮದ ಮೂಲಕ 30 ಸಾವಿರ ಅನಕ್ಷರಸ್ಥರಿಗೆ ವಿಶೇಷ ಅಭಿವೃದ್ಧಿ ಯೋಜನೆಯಡಿ ಸಾಕ್ಷರತಾ ಕಾರ್ಯಕ್ರಮ ರೂಪಿಸುವ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಚಿವರು ವಿವರಿಸಿದರು. ಶಾಖಾ ಗ್ರಂಥಾಲಯಗಳು, ಮಕ್ಕಳ ಗ್ರಂಥಾಲಯಗಳ ಡಿಜಿಟಲೀಕರಣ ಮತ್ತು ಗ್ರಂಥಾಲಯ ತರಬೇತಿ ಶಾಲೆಗಳನ್ನು ಮೇಲ್ದರ್ಜೆಗೇರಿಸುವ ಪ್ರಸ್ತಾಪವನ್ನು ಹೊಂದಲಾಗಿದೆ.

ಇದನ್ನೂ ಓದಿಐಪಿಎಲ್ ಇತಿಹಾಸದಲ್ಲಿ ಹೊಸ ದಾಖಲೆ ಬರೆದ ಕ್ರಿಸ್ ಮೊರಿಸ್: ರಾಜಸ್ಥಾನ ತಂಡಕ್ಕೆ ಸೇರ್ಪಡೆ

ಸರ್ಕಾರಿ ಶಾಲೆಗಳ ಅಭಿವೃದ್ಧಿ:  ಕೇಂದ್ರೀಯ ವಿದ್ಯಾಲಯ ಶಾಲೆಗಳ ಮಾದರಿಯಲ್ಲಿ  ರಾಜ್ಯದ 276 ಕೆಪಿಎಸ್ ಶಾಲೆಗಳನ್ನು ಅಭಿವೃದ್ಧಿಪಡಿಸಿ ಗುಣಮಟ್ಟದ ಶಿಕ್ಷಣ ಒದಗಿಸಲು   ಪ್ರಸ್ತಾವೆ ಸಲ್ಲಿಸಲಾಗಿದೆ   ಎಂದೂ ಸುರೇಶ್ ಕುಮಾರ್ ತಿಳಿಸಿದರು.

ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಗೆ ಹಂಚಿಕೆಯಾದ ಅನುದಾನದಲ್ಲಿ ಶೇ. 79 ರಷ್ಟು ಅನುದಾನ ಅಧಿಕಾರಿ/ಸಿಬ್ಬಂದಿ ವೇತನ ವೆಚ್ಚಗಳಿಗೆ ವಿನಿಯೋಗವಾದರೆ, ಉಳಿದ ಶೇ. 21 ಅನುದಾನವನ್ನು ಇತರೆ ಶೈಕ್ಷಣಿಕ ಚಟುವಟಿಕೆಗಳು, ಮೂಲಸೌಲಭ್ಯಗಳು ಹಾಗೂ ಶಿಕ್ಷಣದ ಗುಣಮಟ್ಟ ಸುಧಾರಣೆ ಕಾರ್ಯಕ್ರಮಗಳಿಗೆ ವೆಚ್ಚವಾಗುತ್ತದೆ ಎಂದು ಮುಖ್ಯಮಂತ್ರಿಗಳ ಗಮನಕ್ಕೆ ತರಲಾಗಿದ್ದು, ಶೈಕ್ಷಣಿಕ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರವು ಹೆಚ್ಚು ಆದ್ಯತೆ ನೀಡಬೇಕೆಂದು ಮನವಿ ಮಾಡಿದ್ದೇನೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ಒಟ್ಟು 34 ಶೈಕ್ಷಣಿಕ ಜಿಲ್ಲೆಗಳಲ್ಲಿ ಇಲಾಖೆಯಡಿ 5459 ಶಾಲಾ ಕಾಲೇಜುಗಳಿದ್ದು, ಒಟ್ಟು 101.42 ಲಕ್ಷ ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯು  ಸಾರ್ವಜನಿಕ ಶಿಕ್ಷಣ ಆಯಕ್ತಾಲಯ, ಪದವಿ ಪೂರ್ವ ಶಿಕ್ಷಣ ನಿರ್ದೇಶನಾಲಯ, ರಾಜ್ಯ ಸಂಶೋಧನೆ ಮತ್ತು ತರಬೇತಿ ನಿರ್ದೇಶನಾಲಯ, ಸಮಗ್ರ ಶಿಕ್ಷಣ ಅಭಿಯಾನ, ಸಾರ್ವಜನಿಕ ಗ್ರಂಥಾಲಯ ಇಲಾಖೆ, ಲೋಕ ಶಿಕ್ಷಣ ನಿರ್ದೇಶನಾಲಯ ಮತ್ತು ಸರ್ಕಾರಿ ಮುದ್ರಣಾಲಯ ಇಲಾಖೆಗಳನ್ನೊಳಗೊಂಡಿದೆ. ಈ ಇಲ್ಲಾ ಇಲಾಖೆಗಳಡಿಯಲ್ಲಿ ಇದುವರೆಗೆ 2020-21ನೇ ಸಾಲಿನಲ್ಲಿ ಇದುವರೆಗೆ ಹಂಚಿಕೆಯಾದ ಅನುದಾನದಲ್ಲಿ ಈ ತನಕ ಶೇ. 81ರಷ್ಟು ವೆಚ್ಚ ಮಾಡಲಾಗಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಪ್ರಾಥಮಿಕ ಶಿಕ್ಷಣ ಇಲಾಖೆ ಕೈಗೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಮುಖ್ಯಮಂತ್ರಿಗಳು ಈ ಬಾರಿ ಶಿಕ್ಷಣ ವಲಯಕ್ಕೆ ಹೆಚ್ಚಿನ ಅದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆಂದು ಸಚಿವರು ತಿಳಿಸಿದರು.

ಇದನ್ನೂ ಓದಿ ಆತ್ಮಹತ್ಯೆ ಮಾಡಿಕೊಂಡ ಅಭಿಮಾನಿಯ ಅಂತಿಮ ದರ್ಶನ ಪಡೆದ ಮಾಜಿ ಸಿಎಂ ಸಿದ್ದರಾಮಯ್ಯ

ಸಕಾಲ ಮಿಷನ್ ಅಭಿವೃದ್ಧಿಗೆ ಒತ್ತು:

ಸಕಾಲ ಯೋಜನೆಯಡಿ ಸಕಾಲ ಮಿಷನ್ ಕಚೇರಿ ಹುದ್ದೆಗಳ ಹೊಂದಾಣಿಕ ಮತ್ತು ಪುನರ್‍ರಚನೆಯೊಂದಿಗೆ ಕಾರ್ಯನಿರ್ವಹಿಸಲುದ್ದೇಶಿಸಿದ್ದು, ತನಿಖಾ ಶಾಖೆ, ತಾಂತ್ರಿಕ ಶಾಖೆ, ತರಬೇತಿ ಶಾಖೆ ಮತ್ತು ಕುಂದುಕೊರತೆ ಹಾಗೂ ಮಾಹಿತಿ, ಪ್ರಚಾರ ಶಾಖೆಗಳನ್ನೊಳಗೊಂಡಂತೆ ಸಕಾಲ ಮಿಷನ್ ಅಭಿವೃದ್ಧಿಗೆ ಒತ್ತು ನೀಡಲು ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಸಕಾಲ ಮಿಷನ್ ಸಚಿವರೂ ಆದ ಸುರೇಶ್  ಕುಮಾರ್ ತಿಳಿಸಿದರು.

ಸಕಾಲ ಯೋಜನೆಯಡಿ ಮೊಬೈಲ್ ಅಪ್ಲಿಕೇಷನ್ ಅಭಿವೃದ್ಧಿ ಸೇರಿದಂತೆ ದೂರದರ್ಶನ, ರೇಡಿಯೋ, ವೃತ್ತಪತ್ರಿಕೆ ಹಾಗೂ ಬ್ರಾಂಡ್ ಅಂಬಾಸಡರ್ ಮೂಲಕ   ಮತ್ತು ವಿವಿಧ ಇಲಾಖೆಗಳ ಮಾಹಿತಿ ಫಲಕಗಳ ಮೂಲಕ ಮಾಹಿತಿ, ಅರಿವು ಮತ್ತು ಸಂವಹನಕ್ಕೆ ಒತ್ತು ನೀಡುವ ಉದ್ದೇಶ ಹೊಂದಲಾಗಿದೆ ಎಂದೂ ಅವರು ವಿವರಿಸಿದರು.

ಇದನ್ನೂ ಓದಿ ಬಾಂಬ್ ದಾಳಿ ನಡೆಸಿ ಸಚಿವ ಜಾಕೀರ್ ಹತ್ಯೆಗೆ ಪೂರ್ವ ಯೋಜಿತ ಸಂಚು: ಮಮತಾ ಆರೋಪ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.