2,500 ಪ್ರೌಢಶಾಲಾ ಶಿಕ್ಷಕರ ನೇಮಕ: ಸಚಿವ ನಾಗೇಶ್
Team Udayavani, Sep 12, 2022, 10:00 PM IST
ಬೆಂಗಳೂರು: ರಾಜ್ಯದ ಸರ್ಕಾರಿ ಪ್ರೌಢಶಾಲೆಗಳಲ್ಲಿ ಶಿಕ್ಷಕರ ಕೊರತೆ ನೀಗಿಸುವುದಕ್ಕಾಗಿ 2,500 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಅವರು, 2,200 ಸಹ ಶಿಕ್ಷಕರು, 200 ದೈಹಿಕ ಶಿಕ್ಷಣ ಶಿಕ್ಷಕರು ಮತ್ತು 100 ವಿಶೇಷ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತದೆ. ಸದ್ಯದಲ್ಲಿಯೇ ನೇಮಕಾತಿ ಅಧಿಸೂಚನೆ ಪ್ರಕಟಿಸುವ ಸಾಧ್ಯತೆಗಳಿವೆ.
ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ ಬೋಧನೆಗಾಗಿ (6ರಿಂದ 8ನೇ ತರಗತಿ) 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ 1:2ರ ಅನುಪಾತ ಪಟ್ಟಿ ಪ್ರಕಟಿಸುವ ಹಂತದಲ್ಲಿದೆ. ಹೀಗಿರುವಾಗಲೇ ಮತ್ತೆ 2,500 ಶಿಕ್ಷಕರ ನೇಮಕಾತಿಗೆ ಸಿದ್ಧತೆ ನಡೆಸಿರುವುದು ಶಿಕ್ಷಕ ಹುದ್ದೆ ಆಕಾಂಕ್ಷಿಗಳಲ್ಲಿ ಖುಷಿ ನೀಡಿದೆ.
ಸದ್ಯ 6 ಸಾವಿರಕ್ಕೂ ಹೆಚ್ಚಿನ ಅತಿಥಿ ಶಿಕ್ಷಕರು ಪ್ರೌಢಶಾಲೆಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ