ಹತ್ಯೆಗಳಿಗೂ, ಸಂಘ ಪರಿವಾರದ ಆಂತರಿಕ ಬಿಕ್ಕಟ್ಟಿಗೂ ಸಂಬಂಧ: ಸಿದ್ದರಾಮಯ್ಯ

ಬೊಮ್ಮಾಯಿ ಕುರ್ಚಿಯ ಉಳಿವು, ರಾಜ್ಯದ ಅಳಿವು ಎಂದು ಆಕ್ರೋಶ

Team Udayavani, Jul 29, 2022, 3:04 PM IST

siddanna-2

ಬೆಂಗಳೂರು : ದಕ್ಷಿಣ ಕನ್ನಡದ ಇತ್ತೀಚಿನ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಅಲ್ಲಿ ನಡೆಯುತ್ತಿರುವ ಸರಣಿ ಹತ್ಯೆಗಳಿಗೂ, ಸಂಘ ಪರಿವಾರದೊಳಗಿನ ಆಂತರಿಕ ಬಿಕ್ಕಟ್ಟುಗಳಿಗೂ ಸಂಬಂಧ ಇರುವಂತೆ ಕಾಣುತ್ತಿದೆ. ಈ ಬೆಳವಣಿಗೆಗಳನ್ನು ಕೂಡಾ ಗಮನದಲ್ಲಿಟ್ಟುಕೊಂಡು ಪೊಲೀಸರು ತನಿಖೆ ನಡೆಸಿದರೆ ಸತ್ಯ ಬಯಲಾದೀತು ಎಂದು ವಿಧಾನ ಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್ ಮಾಡಿ ರಾಜ್ಯ ಸರಕಾರದ ವಿರುದ್ಧ ತೀವ್ರ ಆಕ್ರೋಶ ಹೊರ ಹಾಕಿದ್ದಾರೆ.

ಬಿಜೆಪಿ ಯುವಮೋರ್ಚಾ ಮುಖಂಡ ಪ್ರವೀಣ್ ನೆಟ್ಟಾರ್ ಅಂತಿಮ ದರ್ಶನಕ್ಕೆ ಆಗಮಿಸಿದ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್ , ವಿಎಚ್ ಪಿ ನಾಯಕ ಕಲ್ಲಡ್ಕ ಪ್ರಭಾಕರ್ ಭಟ್ ಮತ್ತು ಸ್ಥಳೀಯ ಶಾಸಕರ ವಿರುದ್ಧ ಭುಗಿಲೆದ್ದ ಜನಾಕ್ರೋಶದ ಹಿನ್ನೆಲೆಯನ್ನೂ ಪೊಲೀಸರು ತನಿಖೆ ಮಾಡಬೇಕಾಗಿದೆ ಎಂದು ಟ್ವೀಟ್ ನಲ್ಲಿ ಒತ್ತಾಯಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ ಆತ್ಮೀಯನಾಗಿದ್ದ ಮೃತ ಪ್ರವೀಣ್ ನೆಟ್ಟಾರ್ ಒಂದಷ್ಟು ಕಾಲ ನಳಿನ್ ಅವರ ಕಾರಿಗೆ ಚಾಲಕನೂ ಆಗಿದ್ದರಂತೆ. ಇಷ್ಟೊಂದು ಆತ್ಮೀಯರಾಗಿದ್ದವರು ದೂರವಾಗಿರುವುದು ಯಾಕೆ? ಪೊಲೀಸರು ಅವರನ್ನೂ ವಿಚಾರಣೆಗೊಳಪಡಿಸಿದರೆ ದುಷ್ಕರ್ಮಿಗಳ ಪತ್ತೆಗೆ ನೆರವಾದೀತು ಎಂದು ಟ್ವೀಟ್ ಮಾಡಿದ್ದಾರೆ.

ಹಿಂದೂಗಳು ಸತ್ತರೆ ಮುಸ್ಲಿಮರ ಮೇಲೆ, ಮುಸ್ಲಿಮರು ಸತ್ತರೆ ಹಿಂದೂಗಳ ಮೇಲೆ ಸಂಶಯ ಪಡುವುದು ಸಾಮಾನ್ಯವಾಗಿಬಿಟ್ಟಿದೆ. ಪೊಲೀಸ್ ತನಿಖೆಯೂ ಇದೇ ಜಾಡಿನಲ್ಲಿ ಸಾಗುತ್ತಿರುವುದರಿಂದ ಸಾವಿನ ಹಿಂದಿನ ಅಸಲಿ ಸತ್ಯ ಹೊರಗೆ ಬರದೆ ಮುಚ್ಚಿಹೋಗುತ್ತಿದೆ ಎಂದು ಟ್ವೀಟ್ ಮೂಲಕ ಆಕ್ರೋಶ ಹೊರ ಹಾಕಿದ್ದಾರೆ.

ಹತ್ಯೆ ನಡೆಸಿರುವ ದುಷ್ಕರ್ಮಿಗಳು ಯಾವುದೇ ಪಕ್ಷ, ಜಾತಿ, ಧರ್ಮ ಇಲ್ಲವೇ ಸಂಘಟನೆಗಳಿಗೆ ಸೇರಿದ್ದರೂ ಮುಲಾಜಿಲ್ಲದೆ ಅವರನ್ನು ಬಂಧಿಸಿ ಜೈಲಿಗಟ್ಟಬೇಕು. ಯಾವುದಾದರೂ ಸಂಘಟನೆ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸುತ್ತಿದ್ದರೆ ಅವುಗಳನ್ನು ನಿಷೇಧಿಸುವ ದಿಟ್ಟತನವನ್ನು ರಾಜ್ಯ ಬಿಜೆಪಿ ಸರ್ಕಾರ ತೋರಬೇಕು ಎಂದು ಆಗ್ರಹಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಬಹಿರಂಗವಾಗಿ ಮುಸ್ಲಿಮರ ಬಗ್ಗೆ ಬೆಂಕಿ ಕಾರಿದರೂ, ಮುಸ್ಲಿಂ ಉದ್ಯಮಿಗಳ ಜೊತೆ ಅವರಿಗೆ ಹಾರ್ದಿಕ ಸಂಬಂಧ ಇರುವುದನ್ನು ಅವರೇ ಹಲವಾರು ಬಾರಿ ಬಹಿರಂಗ ಸಭೆಯಲ್ಲಿ ಹೇಳಿಕೊಂಡಿದ್ದಾರೆ. ಈ ಸಂಬಂಧಗಳು ಕೇವಲ ಸಾಮಾಜಿಕವಾದುದ್ದೇ? ಇಲ್ಲವೇ ವ್ಯಾಪಾರ ವಹಿವಾಟಿನದ್ದೇ? ಎಂದು ಪ್ರಶ್ನಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯಾಕೆ ಹಿಂದುಳಿದ ಜಾತಿಗಳ ಅದರಲ್ಲೂ ಮುಖ್ಯವಾಗಿ ಬಿಲ್ಲವ ಯುವಕರೇ ಕೋಮುಘರ್ಷಣೆಯಲ್ಲಿ ಬಲಿಯಾಗುತ್ತಿದ್ದಾರೆ? ರಾಜಕೀಯ ಪ್ರಾತಿನಿಧ್ಯ ಕಳೆದುಕೊಳ್ಳುತ್ತಿರುವ ಈ ಸಮುದಾಯದ ಯುವಕರು ಪ್ರಾಣವನ್ನೂ ಯಾಕೆ ಕಳೆದುಕೊಳ್ಳುತ್ತಿದ್ದಾರೆ? ಎಂದು ಸರಣಿ ಪ್ರಶ್ನೆಗಳನ್ನು ಮುಂದಿಟ್ಟಿದ್ದಾರೆ.

ಬಸವರಾಜ ಬೊಮ್ಮಾಯಿ ಅವರು ಕೇವಲ ಬಿಜೆಪಿ ಕಾರ್ಯಕರ್ತರಿಗಷ್ಟೇ ಮುಖ್ಯಮಂತ್ರಿಗಳೋ? ಇಲ್ಲವೇ ರಾಜ್ಯದ ಸಮಸ್ತ ಆರುವರೆ ಕೋಟಿ ಜನತೆಗೋ ಎನ್ನುವುದನ್ನು ಮೊದಲು ಸ್ಪಷ್ಟಪಡಿಸಬೇಕು. ಪ್ರವೀಣ್ ನೆಟ್ಟಾರು ಮನೆಗೆ ಭೇಟಿ ನೀಡಿದ್ದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ದುಷ್ಕರ್ಮಿಗಳಿಂದ ಹತ್ಯೆಯಾದ ಮಸೂದ್ ಮನೆಗೆ ಹೋಗದಿರಲು ಕಾರಣ ಏನೆಂಬುದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.

ಮೃತ ಬಿಜೆಪಿ ಕಾರ್ಯಕರ್ತರಿಗೆ ಪಕ್ಷ ಎಷ್ಟೇ ಮೊತ್ತದ ಪರಿಹಾರ ನೀಡಿದರೂ ಅದು ಅವರ ಸಂಘಟನೆಗೆ ಸಂಬಂಧಿಸಿದ್ದು, ಆದರೆ ವಿಚಾರಣಾ ಹಂತದಲ್ಲಿರುವ ಹತ್ಯೆ ಪ್ರಕರಣಗಳಲ್ಲಿ ಕುಟುಂಬಗಳಿಗೆ ಪರಿಹಾರ ನೀಡುವಾಗ ಭೇದಭಾವ ಆಗದಂತೆ ಎಚ್ಚರಿಕೆ ವಹಿಸುವುದು ಮುಖ್ಯಮಂತ್ರಿ ಅವರ ಕರ್ತವ್ಯವಾಗಿದೆ ಎಂದು ಟ್ವೀಟ್ ನಲ್ಲಿ ಬರೆದಿದ್ದಾರೆ.

ರಾಜ್ಯದ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪಕ್ಷ ಇಲ್ಲವೇ ಸರ್ಕಾರದ ಮೇಲೆ ಯಾವುದೇ ನಿಯಂತ್ರಣ ಇಲ್ಲ. ಅಸಹಾಯಕರಾಗಿರುವ ಬೊಮ್ಮಾಯಿಯವರು ಕುರ್ಚಿ ಉಳಿಸಿಕೊಳ್ಳಲಿಕ್ಕಾಗಿ ಆರ್.ಎಸ್.ಎಸ್ ಹೇಳಿದಂತೆ ಬೊಂಬೆ ರೀತಿ ಕುಣಿಯುತ್ತಿದ್ದಾರೆ. ಅವರ ಕುರ್ಚಿಯ ಉಳಿವು, ರಾಜ್ಯದ ಅಳಿವಾಗಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಟಾಪ್ ನ್ಯೂಸ್

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

Shivamogga; ಮಾಜಿ ಸಿಎಂಗಳ ಕುಟುಂಬ ಕಾಳಗಕ್ಕೆ ಈಶ್ವರಪ್ಪ ರಂಗು!

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಇವರ ಬದುಕಿನ ಬಂಡಿಗೆ ಆತ್ಮವಿಶ್ವಾಸ-ಛಲವೇ ಚಕ್ರಗಳು! ಇರುವುದೊಂದೇ ಕಾಲು, ಇರುವುದೊಂದೇ ಬದುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

Karnataka Govt ಎಸ್‌ಐಟಿಗೆ ಮತ್ತೆ 3 ಎಸಿಪಿ ಸೇರಿ 19 ಸಿಬ್ಬಂದಿ ನೇಮಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.