ಭೀಮಾ ತೀರದಲ್ಲಿ ಮತ್ತೆ ನೆತ್ತರು;ಪಾತಕಿ ಶೂಟೌಟ್‌


Team Udayavani, Oct 31, 2017, 6:05 AM IST

bima-teera.jpg

ವಿಜಯಪುರ: ಭೀಮಾ ತೀರದ ಕೊಂಕಣಗಾಂವ ಎಂಬಲ್ಲಿ ಸೋಮವಾರ ಬೆಳ್ಳಂಬೆಳಗ್ಗೆ ಮತ್ತೆ ನೆತ್ತರು ಹರಿದಿದೆ. ಕಂಟ್ರಿ
ಪಿಸ್ತೂಲ್‌ ಶೋಧಕ್ಕೆ ತೆರಳಿದ್ದ ಪೊಲೀಸರ ಮೇಲೆಯೇ ಗುಂಡಿನ ದಾಳಿ ನಡೆಸಿದ ಕುಖ್ಯಾತ ಪಾತಕಿ ಧರ್ಮರಾಜ್‌ ಚಡಚಣ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ. ಈ ಘಟನೆ ಇಡೀ ಗ್ರಾಮವನ್ನೇ ಬೆಚ್ಚಿಬೀಳಿಸಿದೆ.

ಚಡಚಣ ಪಿಎಸ್‌ಐ ಗೋಪಾಲ ಹಳ್ಳೂರ ಹಾಗೂ ಹತ ಧರ್ಮರಾಜ್‌ ಸಹಚರ ಶಿವಾನಂದ ಬಿರಾದಾರ ಘಟನೆಯಲ್ಲಿ ತೀವ್ರ ಗಾಯಗೊಂಡಿದ್ದು, ಅವರನ್ನು ವಿಜಯಪುರದ ಬಿಎಲ್‌ಡಿಇ ಸಂಸ್ಥೆಯ ಬಿ.ಎಂ. ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ವಿಜಯಪುರ ಜಿಲ್ಲೆಯಲ್ಲಿ ಅಕ್ರಮವಾಗಿ ಕಂಟ್ರಿ ಪಿಸ್ತೂಲ್‌ ಸಂಗ್ರಹ-ಮಾರಾಟ ವಿರುದಟಛಿ ಇತ್ತೀಚಿಗೆ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದಾರೆ. ಅಂತೆಯೇ ಕೊಂಕಣಗಾಂವ ಗ್ರಾಮದಲ್ಲಿರುವ ತೋಟದ ಮನೆಯಲ್ಲಿ ಧರ್ಮರಾಜ್‌ ಕಂಟ್ರಿ ಪಿಸ್ತೂಲ್‌ ಸಂಗ್ರಹಿಸಿರುವ ಕುರಿತು ನಿಖರ ಮಾಹಿತಿ ಹಿನ್ನೆಲೆಯಲ್ಲಿ ಚಡಚಣ ಪೊಲೀಸರು ದಾಳಿ ನಡೆಸಿದ್ದರು. ಈ ಹಂತದಲ್ಲಿ ಧರ್ಮರಾಜ್‌ ಪೊಲೀಸರೊಂದಿಗೆ ವಾಗ್ವಾದ ನಡೆಸಿದ್ದಲ್ಲದೇ ಪಿಎಸ್‌ಐ ಗೋಪಾಲ ಅವರ ಮೇಲೆ ಕಂಟ್ರಿ ಪಿಸ್ತೂಲ್‌ನಿಂದ ಗುಂಡು ಹಾರಿಸಿದ್ದಾನೆ.

ಇದು ಪಿಎಸ್‌ಐ ಗೋಪಾಲ ಅವರ ಬಲಗೈಗೆತಾಗಿದ್ದು, ಆತ್ಮರಕ್ಷಣೆಗಾಗಿ ಅವರು ಸರ್ವೀಸ್‌ ರಿವಾಲ್ವಾರ್‌ನಿಂದ ಪ್ರತಿದಾಳಿ ನಡೆಸಿದಾಗ ತಲಾ ಮೂರು ಗುಂಡು ಎದೆ ಮತ್ತು ಬೆನ್ನು ಹಾಗೂ ತಲಾ ಒಂದೊಂದು ಗುಂಡು ಧರ್ಮರಾಜ್‌ನ ಕಾಲು ಹಾಗೂ ಕೈಗೆ ತಾಗಿವೆ. ಜತೆಗೆ ಆತನ ಸಹಚರ ಶಿವಾನಂದ ಬಿರಾದಾರ ಎಂಬುವನ ಬೆನ್ನು ಹಾಗೂ ಹೊಟ್ಟೆ ಭಾಗಕ್ಕೂ ಗುಂಡು ತಾಗಿದೆ ಎನ್ನಲಾಗಿದೆ. ಈ ಘಟನೆ ಮಾಹಿತಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಚಡಚಣ ಹಾಗೂ ಇಂಡಿ ಠಾಣೆ ಪೊಲೀಸರು ಗಾಯಾಳುಗಳಿಗೆ ಚಡಚಣ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ ಬಳಿಕ ಅವರನ್ನು ವಿಜಯಪುರದ ಬಿ.ಎಂ.ಪಾಟೀಲ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಸಾಗಿಸಿದರು. ಆದರೆ ಗಂಭೀರ ಗಾಯಗೊಂಡಿದ್ದ ಧರ್ಮರಾಜ್‌ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಎಂದು ಮೂಲಗಳು ತಿಳಿಸಿವೆ. ಪಿಎಸ್‌ಐ ಹಳ್ಳೂರ ಅವರ ಕೈ ಹಾಗೂ ಶಿವಾನಂದ ಬಿರಾದಾರ ಹೊಟ್ಟೆ-ಬೆನ್ನು ಸೇರಿಕೊಂಡಿರುವ ಗುಂಡುಗಳನ್ನು ವೈದ್ಯರು ಸ್ಕಾನಿಂಗ್‌ ಮೂಲಕ ಪತ್ತೆ ಹಚ್ಚಿದ್ದು, ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಚಡಚಣ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಅಕ್ರಮವಾಗಿ ಕಂಟ್ರಿ ಪಿಸ್ತೂಲ್‌ ಸಂಗ್ರಹಿಸಿದ ಮಾಹಿತಿ ಆಧರಿಸಿ ಪೊಲೀಸರು ಧರ್ಮರಾಜ್‌ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದರು. ಧರ್ಮರಾಜ್‌ ಏಕಾಏಕಿ ಎಸ್ಸೆ„ ಗೋಪಾಲ ಹಳ್ಳೂರ ಮೇಲೆ ಗುಂಡು ಹಾರಿಸಿ ಗಾಯಗೊಳಿಸಿದ್ದಾನೆ. ಕೂಡಲೇ ಎಸ್ಸೆ„ ಆತ್ಮರಕ್ಷಣೆಗೆ ಹಾರಿಸಿದ ಗುಂಡುಗಳು ಧರ್ಮರಾಜನನ್ನು ತೀವ್ರ ಗಾಯಗೊಳಿಸಿದ್ದವು. ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಿಸದೇ ಆತ ಮೃತಪಟ್ಟಿದ್ದಾನೆ. ಎಸ್ಸೆ„ ಗೋಪಾಲ ಹಾಗೂ ಧರ್ಮರಾಜ್‌ ಸಹಚರ ಶಿವಾನಂದ ಬಿರಾದಾರಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
– ಕುಲದೀಪ ಜೈನ್‌, ಎಸ್ಪಿ-ವಿಜಯಪುರ

ಟಾಪ್ ನ್ಯೂಸ್

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

INDWvsBANW: ಭಾರತಕ್ಕೆ 2-0 ಮುನ್ನಡೆ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

CM Siddaramaiah ನನ್ನ ಮಗ ಮೃತಪಟ್ಟಾಗ ಮೋದಿ,ಸುಷ್ಮಾ ಸಹಾಯ ಮಾಡಿಲ್ಲ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.