ಅಮೆರಿಕ ರಾಯಭಾರಿ ಕಚೇರಿ ತೆರೆಯಲು ಮನವಿ
Team Udayavani, Jul 18, 2019, 3:03 AM IST
ಬೆಂಗಳೂರು: ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಅಮೆರಿಕ ರಾಯಭಾರಿ ಕಚೇರಿ ತೆರೆಯುವಂತೆ ಕೋರಿ ಸಂಸದೆ ಶೋಭಾ ಕರಂದ್ಲಾಜೆಯವರು ಬುಧವಾರ ಕೇಂದ್ರ ವಿದೇಶಾಂಗ ಸಚಿವ ಜೈಶಂಕರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ಅತಿ ವೇಗವಾಗಿ ಬೆಳೆಯುತ್ತಿರುವ ಬೆಂಗಳೂರು ನಗರದಲ್ಲಿ ಅಮೆರಿಕ ರಾಯಭಾರಿ ಕಚೇರಿ ಇಲ್ಲ. ಇದರಿಂದ ಇಲ್ಲಿನ ಜನರಿಗೆ ಸಾಕಷ್ಟು ಸಮಸ್ಯೆಯಾಗುತ್ತಿದೆ. ಆದ್ದರಿಂದ ಅಮೆರಿಕ ರಾಯಭಾರಿ ಕಚೇರಿಯನ್ನು ಬೆಂಗಳೂರಿನಲ್ಲಿ ತೆರೆಯುವಂತೆ ಕೋರಿ ಬಿಜೆಪಿ ರಾಜ್ಯ ಸಹ ವಕ್ತಾರ ಎ.ಎಚ್.ಆನಂದ್, ಎ.ಎನ್.ವೇಣುಗೋಪಾಲ್, ರಂಜಿತ್ ಕುಮಾರ್ ಮೊದಲಾದವರು ಪತ್ರ ಬರೆದಿದ್ದರು. ಅಮೆರಿಕಕ್ಕೆ ವೀಸಾ ಸೇರಿದಂತೆ ರಾಯಭಾರಿ ಕಚೇರಿಯ ಕೆಲಸಕ್ಕೆ ಚೆನ್ನೈಗೆ ಅಲೆದಾಡಬೇಕಾದ ಸ್ಥಿತಿ ಇದೆ.
ಹೀಗಾಗಿ, ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ತೆರೆಯುವಂತೆ ಪತ್ರದಲ್ಲಿ ಕೋರಿದ್ದರು. ಈ ಪತ್ರದಂತೆ ಸಂಸದೆ ಶೋಭಾ ಕರಂದ್ಲಾಜೆಯವರು ಕರ್ನಾಟಕದ ಜನರ ಹಿತದೃಷ್ಟಿಯಿಂದ ಬೆಂಗಳೂರಿನಲ್ಲಿ ರಾಯಭಾರಿ ಕಚೇರಿ ತೆರೆಯುವಂತೆ ಕೋರಿ ಕೇಂದ್ರ ವಿದೇಶಾಂಗ ಸಚಿವರಿಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?