ಡ್ರಗ್ ಪ್ರಕರಣದಲ್ಲಿ ತಲೆಮರೆಸಿಕೊಂಡವರಿಗೆ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಸಹಾಯ!
Team Udayavani, Oct 6, 2020, 12:54 PM IST
ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಇಂದು ಮುಂಜಾನೆ ದಿವಂಗತ ಮುತ್ತಪ್ಪ ರೈ ಪುತ್ರ ರಿಕ್ಕಿ ರೈ ಮನೆಗೆ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನ ಹೊರವಲಯ ಬಿಡದಿಯಲ್ಲಿರುವ ನಿವಾಸ ಹಾಗೂ ಸದಾಶಿವನಗರದ ಮುತ್ತಪ್ಪ ರೈ ನಿವಾಸದ ಮೇಲೆ ದಾಳಿ ನಡೆದಿದೆ.
ಇದನ್ನೂ ಓದಿ:ಡ್ರಗ್ಸ್ ನಂಟಿನಲ್ಲಿ ಮಾಜಿ ಡಾನ್ ಪುತ್ರ? ಮುತ್ತಪ್ಪ ರೈ ಮನೆಗೆ ಸಿಸಿಬಿ ದಾಳಿ
ಸ್ಯಾಂಡಲ್ ವುಡ್ ಡ್ರಗ್ ಪ್ರಕರಣದಲ್ಲಿ ಆರೋಪಿಗಳಾಗಿ ತಲೆಮರೆಸಿಕೊಂಡಿರುವ ಆದಿತ್ಯ ಆಳ್ವ ಸೇರಿದಂತೆ ನಾಲ್ವರಿಗೆ ರಿಕ್ಕಿ ರೈ ಸಹಾಯ ಮಾಡುತ್ತಿದ್ದರು ಎನ್ನಲಾಗಿದೆ. ಈ ಸಂಬಂಧ ಇಂದು ರಿಕ್ಕಿ ರೈ ಮನೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ.