ರಿಲೀಫ್ ಬೆನ್ನಲ್ಲೇ ಬಂತು ನೋಟಿಸ್‌


Team Udayavani, Sep 23, 2017, 7:58 AM IST

23-STATE–3.jpg

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಶುಕ್ರವಾರ ಹೈಕೋರ್ಟಿನಲ್ಲಿ ಡಿನೋಟಿಫಿಕೇಷನ್‌ ಪ್ರಕರಣಕ್ಕೆ
ರಿಲೀಫ್ ಸಿಕ್ಕರೆ, ಅದರ ಬೆನ್ನಲ್ಲೇ ವಿಧಾನಪರಿಷತ್‌ ಪ್ರತಿಪಕ್ಷ ನಾಯಕ ಕೆ. ಎಸ್‌. ಈಶ್ವರಪ್ಪ ಪಿಎ ಅಪಹರಣ ಪ್ರಕರಣ ಸಂಬಂಧ ಬೆಂಗಳೂರಿನ ಪೊಲೀಸರು ನೋಟೀಸ್‌ ನೀಡಿದ್ದಾರೆ.

ಡಾ. ಶಿವರಾಮ ಕಾರಂತ ಬಡಾವಣೆಯ ಭೂ ಸ್ವಾಧೀನ ಪ್ರಕ್ರಿಯೆಯಿಂದ ಕೆಲ ಜಮೀನುಗಳನ್ನು ಕೈ ಬಿಡುವಂತೆ ಸೂಚಿಸಿ ಡಿನೋಟಿಫಿಕೇಷನ್‌ ಮಾಡಿದ ಆರೋಪ ಸಂಬಂಧ ಯಡಿಯೂರಪ್ಪ ವಿರುದ್ಧ ಎರಡು ಪ್ರತ್ಯೇಕ ಎಫ್ಐಆರ್‌ ದಾಖಲಿ  ಸಿದ್ದ ಭ್ರಷ್ಟಾಚಾರ ನಿಗ್ರಹ ದಳದ ತನಿಖೆಗೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದ್ದು, ಎಸಿಬಿಗೆ ತೀವ್ರ ಹಿನ್ನಡೆಯಾಗಿದೆ.  ಎಸಿಬಿ ತನಿಖೆಗೆ ತಡೆಯಾಜ್ಞೆ ನೀಡು ವಂತೆ ಯಡಿಯೂರಪ್ಪ ಸಲ್ಲಿಸಿದ್ದ ಮಧ್ಯಂ ತರ ಅರ್ಜಿಯನ್ನು ಪುರಸ್ಕರಿಸಿರುವ ನ್ಯಾಯ ಮೂರ್ತಿ
ಅರವಿಂದಕುಮಾರ್‌ ಅವರಿದ್ದ ಏಕ ಸದಸ್ಯ ಪೀಠ, ಶಿವರಾಮ ಕಾರಂತ ಬಡಾವಣೆಯ ನಿರ್ಮಾಣದ ಅಂತಿಮ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿಲ್ಲ. ಹೀಗಾಗಿ ಸರ್ಕಾರದ ಬೊಕ್ಕಸಕ್ಕೆ ನಷ್ಟವುಂಟಾಗಿದೆ ಎಂಬ ವಾದದಲ್ಲಿ ಹುರುಳಿಲ್ಲ ಎಂದು ಆದೇಶದಲ್ಲಿ ತಿಳಿಸಿದೆ.

ಎಸಿಬಿಯು ಅರ್ಜಿದಾರರ ವಿರುದ್ಧದ ಆರೋಪಕ್ಕೆ ಸಂಬಂಧಿಸಿ ಸೂಕ್ತ ದಾಖಲೆಗಳನ್ನು ಕಲೆ ಹಾಕದೆ, ಪೂರ್ವಗ್ರಹ ಪೀಡಿತವಾಗಿ ತನಿಖೆ ನಡೆಸಲು ಮುಂದಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ ಎಂದೂ ಸಹ ಹೈಕೋರ್ಟ್‌ ಅಭಿಪ್ರಾಯಪಟ್ಟಿದ್ದು, ಎಸಿಬಿ ತನಿಖೆಗೆ ಮಧ್ಯಂತರ  ತಡೆಯಾಜ್ಞೆ ನೀಡಿದೆ. ಮತ್ತೂಂದೆಡೆ ಸುಪ್ರೀಂಕೋರ್ಟ್‌ನ ಹಲವು ತೀರ್ಪುಗಳನ್ನು ಉಲ್ಲೇಖೀಸಿ ಅರ್ಜಿದಾರರ ರಿಟ್‌ ಅರ್ಜಿಯ ಮಾನ್ಯತೆ ಹಾಗೂ ಕ್ರಿಮಿನಲ್‌ ಪ್ರಕರಣಗಳ ಪೊಲೀಸ್‌ ತನಿಖೆಗೆ ತಡೆಯಾಜ್ಞೆ ನೀಡಲು ಅವಕಾಶವಿಲ್ಲ ಎಂದು ಆಕ್ಷೇಪಿಸಿದ್ದ ಎಸಿಬಿ ವಾದಕ್ಕೆ ಅನುಗುಣವಾಗಿ ಕಾನೂನಿನ ಅಂಶಗಳನ್ನು ಉಲ್ಲೇಖೀಸಿರುವ ನ್ಯಾಯಪೀಠ, ಸಂವಿಧಾನದ ಕಲಂ 226 ಹಾಗೂ ಕಲಂಗಳ 227ರ ಅಡಿಯಲ್ಲಿ ಅರ್ಜಿದಾರರು ಸಲ್ಲಿಸಿರುವ ರಿಟ್‌ ಅರ್ಜಿಯನ್ನು ಹೈಕೋರ್ಟ್‌ ಪರಿಗಣಿಸಲು ಅವಕಾಶವಿದೆ. ಅಲ್ಲದೆ ಡಿನೋಟಿಫಿಕೇಷನ್‌ ಪ್ರಕರಣಕ್ಕೆ ಸಂಬಂಧಿಸಿದ ಒಂದೇ ಆರೋಪಕ್ಕೆ ಎರಡು ಎಫ್ಐಆರ್‌ ದಾಖಲಿಸಲು ಅವಕಾಶವಿಲ್ಲ, ಹೀಗಾಗಿ ಎರಡನೇ ಎಫ್ಐಆರ್‌ ರದ್ದುಪಡಿಸಲು ಅರ್ಹವಾಗಲಿದೆ ಎಂದು ನ್ಯಾಯಾಲಯ ತಿಳಿಸಿದೆ.

ಕ್ರಿಮಿನಲ್‌ ಕೇಸ್‌ಗಳಿಗೆ ಸಂಬಂಧಿಸಿದಂತೆ ಪೊಲೀಸರ ತನಿಖೆಗೆ ಭ್ರಷ್ಟಾಚಾರ ನಿಗ್ರಹದಳ ಕಾಯಿದೆಯ ಸೆಕ್ಷನ್‌ 13(3) (ಸಿ) ಅನ್ವಯ ತಡೆಯಾಜ್ಞೆ ನೀಡಲು ಹೈಕೋರ್ಟ್‌ಗೆ ಅಧಿಕಾರ  ವಿದೆ. ನಿಗದಿತ ಅವಧಿಯಲ್ಲಿ ಎಫ್ಐಆರ್‌ ದಾಖಲಿಸದೇ ವಿಳಂಬ ಮಾಡಲು ಕೆಲವೇ ಕೆಲವು ಪ್ರಕರಣಗಳಲ್ಲಿ ಮಾತ್ರ ಅವಕಾಶವಿದೆ. ಆದರೆ, ಈ ಪ್ರಕರಣದಲ್ಲಿ ಅರ್ಜಿದಾರರ ವಿರುದ್ಧ ಎಫ್ಐಆರ್‌ ದಾಖಲಿಸಲು ವಿಳಂಬ ತೋರಿರುವುದಕ್ಕೆ ಎಸಿಬಿ ಸೂಕ್ತ ಕಾರಣಗಳನ್ನು ನೀಡಿಲ್ಲ. ಈ ಅಂಶಗಳನ್ನು ಆಧರಿಸಿ ತಡೆಯಾಜ್ಞೆ ನೀಡಲಾಗುತ್ತಿದೆ ಎಂದು ತಿಳಿಸಿದೆ.

ಬಿ.ಎಸ್‌. ಯಡಿಯೂರಪ್ಪ ಪರ ಹಿರಿಯ ವಕೀಲ ಸಿ.ವಿ ನಾಗೇಶ್‌ ಹಾಗೂ ಎಸಿಬಿಯ ಪರ ಮಾಜಿ ಅಡ್ವೋಕೇಟ್‌ ಜನರಲ್‌ ಪ್ರೊ. ರವಿ ವರ್ಮಕುಮಾರ್‌ ವಾದ ಮಂಡಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಪ್ರಕರಣಕ್ಕೂ ಸರ್ಕಾರಕ್ಕೂ ಸಂಬಂಧ ವಿಲ್ಲ ಎಂದು ಸ್ಪಷ್ಟ ಪಡಿಸಿದರಲ್ಲದೆ, ಪ್ರಕರಣ ಕಾನೂ ನಿನ ವ್ಯಾಪ್ತಿಯಲ್ಲಿದ್ದು, ಹೆಚ್ಚೇನೂ ಪ್ರತಿಕ್ರಿಯಿಸಲ್ಲ ಎಂದಿದ್ದಾರೆ. 

ಪ್ರಕರಣ ಏನು?: ಡಾ. ಶಿವರಾಮ ಕಾರಂತ ಬಡಾವಣೆ ಭೂಸ್ವಾಧೀನವನ್ನು ಪ್ರಾಥಮಿಕ ಅಧಿಸೂಚನೆಯಿಂದ 257.25 ಗುಂಟೆ ಎಕರೆ ಜಮೀನು ಕೈ ಬಿಡಲು ಭೂ ಮಾಲೀಕರಿಂದ ಅಂದಿನ ಸಿಎಂ ಬಿ.ಎಸ್‌ ಯಡಿಯೂರಪ್ಪ ಹಣಪಡೆದುಕೊಂಡಿದ್ದು ಅಕ್ರಮ ಎಸಗಿದ್ದಾರೆ. ಈ ಸಂಬಂಧ ತನಿಖೆ ನಡೆಸುವಂತೆ ಕೋರಿ ದಾಖಲಾಗಿದ್ದ ದೂರಿನ ಅನ್ವಯ ಎಸಿಬಿ ಮೊದಲ ಹಂತವಾಗಿ 2009ರಿಂದ 2012 ರ ಅವಧಿಯಲ್ಲಿ ಯಲಹಂಕ ಹೋಬಳಿಯ ಆವಲಹಳ್ಳಿ ಗ್ರಾಮದ ಸರ್ವೇ ನಂಬರ್‌ 109/ 1 ರಲ್ಲಿ 3 ಎಕರೆ 6 ಗುಂಟೆ ಜಮೀನು ಡಿನೋಟಿಫಿಕೇಶನ್‌ ಸಂಬಂಧ ಆಗಸ್ಟ್‌ 10ರಂದು ಹಾಗೂ ಯಶವಂತಪುರ ಹೋಬಳಿ ಸೋಮಶೆಟ್ಟಿ ಗ್ರಾಮದ ಸರ್ವೇ ನಂಬರ್‌ 22/2ರಲ್ಲಿರುವ 18ಗುಂಟೆ ಹಾಗೂ ಸರ್ವೇನಂಬರ್‌ 24/ 1 ಎಕರೆ 8 ಗುಂಟೆ ಜಮೀನು ಡಿನೋಟಿಫಿಕೇಶನ್‌ ಸಂಬಂಧ ಆಗಸ್ಟ್‌ 17ರಂದು ಪ್ರತ್ಯೇಕ ಎಫ್ ಐಆರ್‌ಗಳನ್ನು ದಾಖಲಿಸಿಕೊಂಡು ತನಿಖೆ ನಡೆಸುತ್ತಿತ್ತು. ಈ ಎರಡೂ ಎಫ್ಐಆರ್‌ಗಳ ತನಿಖೆಗೆ ತಡೆಯಾಜ್ಞೆ ನೀಡುವಂತೆ ಕೋರಿ ಯಡಿಯೂರಪ್ಪ ಹೈಕೋರ್ಟ್‌ ಮೆಟ್ಟಿಲೇರಿದ್ದರು.

ನೋಟಿಸ್‌ ಯಾಕೆ?
ಮೇಲ್ಮನೆ ಪ್ರತಿಪಕ್ಷ ನಾಯಕ ಕೆ.ಎಸ್‌. ಈಶ್ವರಪ್ಪ ಆಪ್ತ ವಿನಯ್‌ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗೆ ಹಾಜರಾಗಲು ಮಲ್ಲೇಶ್ವರಂ ವಿಭಾಗದ ಸಹಾಯಕ ಪೊಲೀಸ್‌ ಆಯುಕ್ತ ಎ.ಆರ್‌. ಬಡಿಗೇರ್‌ ಶುಕ್ರವಾರ ಬಿಎಸ್‌ವೈಗೆ ನೋಟಿಸ್‌ ಜಾರಿ ಮಾಡಿದ್ದಾರೆ. ಪ್ರಕರಣದ ದೂರುದಾರ ವಿನಯ್‌ಗೂ ಶನಿವಾರ ವಿಚಾರಣೆಗೆ ಬರಲು ಹೇಳಲಾಗಿದೆ.  

ನನ್ನನ್ನು ಸಿಲುಕಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಇಲಾಖೆ  ಸಲಹೆಗಾರ ಕೆಂಪಯ್ಯ ಹಾಗೂ ಇತರ ಅಧಿಕಾರಿಗಳು ರೂಪಿಸಿದ್ದ ಸಂಚು ವಿಫ‌ಲವಾಗಿದೆ. ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಸುಳ್ಳು ಪ್ರಕರಣಗಳನ್ನು ದಾಖಲಿಸಲಾಗಿತ್ತು.
ಬಿ.ಎಸ್‌. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ

ಕೋರ್ಟ್‌ ತಡೆಯಾಜ್ಞೆ ನೀಡಿದ ತಕ್ಷಣ ಯಡಿಯೂರಪ್ಪ ನಿರಪರಾಧಿ ಆಗುವುದಿಲ್ಲ. ನ್ಯಾಯಾಲಯಗಳಲ್ಲಿ ಸಹಜವಾಗಿಯೇ ತಡೆಯಾಜ್ಞೆ ದೊರೆಯುತ್ತದೆ. ತಡೆಯಾಜ್ಞೆ ತೆರವುಗೊಳಿಸಲು ಎಸಿಬಿಗೆ ಅವಕಾಶ ಇದೆ. ಎಸಿಬಿ ತನ್ನ ಪ್ರಯತ್ನ ಮಾಡುತ್ತದೆ.
 ರಾಮಲಿಂಗಾ ರೆಡ್ಡಿ, ಗೃಹ ಸಚಿವ. 

ಟಾಪ್ ನ್ಯೂಸ್

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

16-adu-jeevitham

Movie Review: ಆಡು ಜೀವಿದಂ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

We Are The Bad Boys song from Vidyarthi Vidyarthiniyare

Kannada Cinema; ಬ್ಯಾಡ್‌ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.