ಮಾರ್ಚ್‌ನಿಂದ ವೇತನ ಪಾವತಿಯಾಗಿಲ್ಲ: ಸರಕಾರಿ ಪಾಲಿಟೆಕ್ನಿಕ್‌ ಅರೆಕಾಲಿಕ ಉಪನ್ಯಾಸಕರ ಅಳಲು

Team Udayavani, Jul 19, 2023, 6:34 AM IST

KPT

ಮಂಗಳೂರು: ರಾಜ್ಯದ ವಿವಿಧ ಸರಕಾರಿ ಪಾಲಿಟೆಕ್ನಿಕ್‌ ಮತ್ತು ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಸುಮಾರು 1,200 ಅರೆಕಾಲಿಕ ಉಪನ್ಯಾಸಕರಿಗೆ ಕಳೆದ ಮಾರ್ಚ್‌ನಿಂದ ಜೂನ್‌ ವರೆಗಿನ ಒಂದು ಸೆಮಿಸ್ಟರ್‌ಗೆ ಸಂಬಂಧಿಸಿದ ವೇತನ ಪಾವತಿಯಾಗದೆ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಅಖಿಲ ಕರ್ನಾಟಕ ಸರಕಾರಿ ಪಾಲಿಟೆಕ್ನಿಕ್‌ ಅರೆಕಾಲಿಕ ಉಪನ್ಯಾಸಕರ ಸಂಘದ ಪದಾಧಿಕಾರಿಗಳು ಅಳಲು ತೋಡಿಕೊಂಡಿದ್ದಾರೆ.

ಸಂಘದ ಅಧ್ಯಕ್ಷ ಪ್ರಶಾಂತ್‌ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ತಿಂಗಳಿಗೆ ಕೇವಲ 12,500 ರೂ. ವೇತನಕ್ಕೆ ಕೆಲಸ ಮಾಡುತ್ತಿದ್ದು, ಫೆ. 27ರಿಂದ ಜೂ. 17ರ ವರೆಗಿನ ಸೆಮಿಸ್ಟರ್‌ನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡಿದ್ದು, ಸೆಮಿಸ್ಟರ್‌ ಮುಗಿದು ತಿಂಗಳಾದರೂ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್‌ ಅವರನ್ನು ಭೇಟಿ ಮಾಡಿ, ಕಷ್ಟವನ್ನು ವಿವರಿಸಲಾಗಿದೆ. ಆದರೂ ಇದು ವರೆಗೆ ವೇತನ ಪಾವತಿಸಿಲ್ಲ ಎಂದರು.

14 ವರ್ಷಗಳಲ್ಲಿ ಒಂದು ಬಾರಿ ಮಾತ್ರ ವೇತನ ಪರಿಷ್ಕರಣೆಯಾಗಿದೆ. ರಾಜ್ಯದಲ್ಲಿ 89 ಸರಕಾರಿ ಪಾಲಿಟೆಕ್ನಿಕ್‌ ಹಾಗೂ 13 ಸರಕಾರಿ ಎಂಜಿನಿಯರಿಂಗ್‌ ಕಾಲೇಜುಗಳಲ್ಲಿ ಸುಮಾರು 1,200 ಅರೆಕಾಲಿಕ ಉಪನ್ಯಾಸಕರು ಕೆಲಸ ಮಾಡುತ್ತಿದ್ದು, ಖಾಯಂ ಹುದ್ದೆಯಲ್ಲಿ ಬೋಧನೆ ಮಾಡುವ ಉಪನ್ಯಾಸಕರ ಕಾರ್ಯಭಾರವನ್ನೂ ಹೊರುವ ಪರಿಸ್ಥಿತಿ ಇದೆ. ಆದರೆ ಕಾಲೇಜು ಶಿಕ್ಷಣ ಇಲಾಖೆಯಡಿ ಬರುವ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಶಿಕ್ಷಕರಿಗೆ ನೀಡುವಷ್ಟು ಸೌಲಭ್ಯವೂ ನಮಗೆ ಸಿಗುತ್ತಿಲ್ಲ.

ಯಾವುದೇ ಸೇವಾ ಭದ್ರತೆ ಇಲ್ಲದೆ ಕೆಲಸ ಮಾಡುವಂತಾಗಿದೆ. ಆದ್ದರಿಂದ ಮಾಸಿಕ 25,000 ರೂ. ವೇತನ, ಸೇವಾ ಭದ್ರತೆ, ಪಿಎಫ್, ಇಎಸ್‌ಐ, ರಜಾ ಸೌಲಭ್ಯ, ಉನ್ನತ ಶಿಕ್ಷಣ ಪಡೆಯಲು ರಜೆ ಮತ್ತು ವೇತನ ಸೌಲಭ್ಯ, ಐಡಿ ಕಾರ್ಡ್‌, ಸೇವಾ ಪ್ರಮಾಣ ಪತ್ರ ಸೌಲಭ್ಯಗಳನ್ನು ಒದಗಿಸಬೇಕು ಎಂದು ಆಗ್ರಹಿಸಿದರು.

ವಿವಿಧ ಸರಕಾರಿ ಪಾಲಿಟೆಕ್ನಿಕ್‌ಗಳ ಅರೆಕಾಲಿಕ ಉಪನ್ಯಾಸಕರಾದ ವಿನಯ ಕುಮಾರ್‌, ಸಹನಾ, ಶಾಂತಾ, ಸಂಧ್ಯಾ, ನಯನಾ, ಮಮತಾ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

ವರದಿ, ವೀಡಿಯೋ ಪ್ರಕಟಿಸದಂತೆ ನಿರ್ಬಂಧಕಾಜ್ಞೆ ತಂದ ಈಶ್ವರಪ್ಪ ಪುತ್ರ

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Hassan Pen Drive; 40 ಜಿಬಿ ಪೆನ್‌ಡ್ರೈವ್‌ನಲ್ಲಿ ಸಾವಿರಾರು ಅಶ್ಲೀಲ ವಿಡಿಯೋ!

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Lok Sabha Elections; ಉತ್ತರ ಕರ್ನಾಟಕಕ್ಕೆ ಚುನಾವಣಾ ಆಯೋಗ ಶಿಫ್ಟ್

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

Home Minister ಅಮಿತ್‌ ಶಾಗೆ ವಕೀಲ ದೇವರಾಜೇಗೌಡ ಪತ್ರ: ವೈರಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.