ಸಂಕ್ರಾಂತಿಗೆ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ

Team Udayavani, Dec 23, 2019, 3:07 AM IST

BSY1

ಬೆಂಗಳೂರು: ನಾವು ಭರವಸೆ ನೀಡಿದಂತೆ ಉಪಚುನಾವಣೆಯಲ್ಲಿ ಗೆದ್ದವರಿಗೆ ಸಚಿವ ಸ್ಥಾನ ನೀಡಲಿದ್ದೇವೆ. ಮುಂದಿನ ವಾರ ದೆಹಲಿಗೆ ತೆರಳಲಿದ್ದು, ಸಂಕ್ರಾಂತಿ ವೇಳೆಗೆ ಸಿಹಿಸುದ್ದಿ ಸಿಗಲಿದೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ವಿಧಾನಸೌಧದಲ್ಲಿ ಭಾನುವಾರ ಮಾತನಾಡಿದ ಅವರು, ನೂತನ ಶಾಸಕರು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ. ಅವರಿಗೆ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ ಹಾಗೂ ಗೆದ್ದವರನ್ನು ಸಚಿವರನ್ನಾಗಿ ಮಾಡಲಿದ್ದೇವೆ. ಸಚಿವ ಸಂಪುಟವನ್ನು ಆದಷ್ಟು ಬೇಗ ವಿಸ್ತರಿಸುವ ಅಭಿಲಾಷೆಯಿದೆ ಎಂದು ತಿಳಿಸಿದರು. ಒಂದು ವಾರ ಬಿಟ್ಟು ದೆಹಲಿಗೆ ಬರುವಂತೆ ಕೇಂದ್ರದ ವರಿಷ್ಠರು ಸೂಚನೆ ನೀಡಿದ್ದಾರೆ.

ಹೀಗಾಗಿ, ಮುಂದಿನ ವಾರ ದೆಹಲಿಗೆ ಪ್ರಯಾಣ ಬೆಳೆಸಲಿದ್ದೇನೆ. ಗೆದ್ದ ಶಾಸಕರಿಗೆ ಮಂತ್ರಿಸ್ಥಾನ ನೀಡುತ್ತೇವೆ ಎಂದು ಭರವಸೆ ಕೊಟ್ಟಿದ್ದೇವೆ. ಇದರಲ್ಲಿ ಯಾವುದೇ ಅನುಮಾನ, ಸಂಶಯ ಬೇಡ. ಇದನ್ನು ಈಡೇರಿಸುತ್ತೇವೆ. ದೆಹಲಿ ನಾಯಕರಿಂದಲೂ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದು ಹೇಳಿದರು.

ಸಂಬಂಧಪಟ್ಟ ಸಚಿವರೊಂದಿಗೆ ಚರ್ಚೆ: ಕಳಸಾ-ಬಂಡೂರಿ ಯೋಜನೆ ಕುರಿತಂತೆ ಒಂದಷ್ಟು ಗೊಂದಲ ಸೃಷ್ಟಿಯಾಗಿತ್ತು. ಸಂಬಂಧಪಟ್ಟ ಸಚಿವರೊಂದಿಗೆ ನಾನು ಹಾಗೂ ಗೃಹ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿದ್ದೇವೆ. ಸಂಬಂಧಪಟ್ಟ ನೀರಾವರಿ ಸಚಿವರೊಂದಿಗೂ ಮಾತನಾಡಿದ್ದೇನೆ. ಅವರು ಸ್ಪಷ್ಟನೆಯನ್ನು ಅತಿ ಶೀಘ್ರದಲ್ಲಿ ಪ್ರಕಟಿಸಲಿದ್ದಾರೆ ಎಂದು ಹೇಳಿದರು.

ಕಳಸಾ-ಬಂಡೂರಿಯು ಕುಡಿಯುವ ನೀರಿನ ಸಮಸ್ಯೆ ಬಗೆಹರಿಸುವ ವಿಚಾರವಾಗಿದೆ. ಅದನ್ನು ತಡೆಯುವುದು ಧರ್ಮವಲ್ಲ. ಗೋವಾದ ಮುಖ್ಯಮಂತ್ರಿಗಳೊಂದಿಗೂ ಮಾತುಕತೆ ನಡೆಸಲಿದ್ದೇನೆ. ಸಮುದ್ರಕ್ಕೆ ಹರಿದು ಹೋಗುತ್ತಿರುವ ನೀರನ್ನು ಪರಸ್ಪರ ಪ್ರೀತಿ, ವಿಶ್ವಾಸದಿಂದ ಮಾತುಕತೆ ನಡೆಸಿ, ಕುಡಿಯುವ ನೀರಿಗೆ ಅಡ್ಡಿಪಡಿಸದಂತೆ ಮಾತುಕತೆ ನಡೆಸಲಿದ್ದೇವೆ.

ಗೋವಾ, ಕರ್ನಾಟಕ ಹಾಗೂ ಕೇಂದ್ರದಲ್ಲೂ ನಮ್ಮದೇ ಸರ್ಕಾರ ಇದೆ. ಜಲಸಂಪನ್ಮೂಲ ಸಚಿವರು ಮತ್ತು ಗೃಹ ಸಚಿವ ಅಮಿತ್‌ ಶಾ ಅವರು ಈ ಸಮಸ್ಯೆಗೆ ಪರಿಹಾರ ಸೂಚಿಸುತ್ತಾರೆ ಎಂಬ ಭರವಸೆ ಇದೆ. ಸಮಸ್ಯೆಗೆ ಪರಿಹಾರ ಸಿಗಬೇಕು ಎಂಬುದು ನಮ್ಮೆಲ್ಲರ ಅಪೇಕ್ಷೆಯಾಗಿದೆ. ಅದನ್ನು ಮಾಡುತ್ತೇವೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.