ಬಿಮ್ಸ್  ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಮುಖ್ಯಮಂತ್ರಿಗಳೇ ಬರಬೇಕಾ? – ಸತೀಶ್ ಜಾರಕಿಹೊಳಿ

Team Udayavani, May 30, 2021, 5:52 PM IST

ಬಿಮ್ಸ್  ಆಸ್ಪತ್ರೆ ಅವ್ಯವಸ್ಥೆ ಸರಿಪಡಿಸಲು ಮುಖ್ಯಮಂತ್ರಿಗಳೇ ಬರಬೇಕಾ? – ಸತೀಶ್ ಜಾರಕಿಹೊಳಿ

ಬೆಳಗಾವಿ: ಬಿಮ್ಸ್   ಆಸ್ಪತ್ರೆಯಲ್ಲಿನ ಅವ್ಯವಸ್ಥೆಯನ್ನು ಸರಿಪಡಿಸಲು ಸ್ವತಃ ಮುಖ್ಯಮಂತ್ರಿಗಳೇ ಬೆಳಗಾವಿಗೆ ಬರುವದಾದರೆ  ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಯಾಕೆ ಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಪ್ರಶ್ನಿಸಿದ್ದಾರೆ.

ನಗರದ ಕಾಂಗ್ರೆಸ್ ಭವನದಲ್ಲಿ ಬೆಳಗಾವಿ ಜಿಲ್ಲಾ ಗ್ರಾಮೀಣ ಕಾಂಗ್ರೆಸ್ ಸಮಿತಿಯಿಂದ ನೂತನವಾಗಿ ಆರಂಭಿಸಿರುವ ಕೋವಿಡ್-19 ಹೆಲ್ಪ್ ಲೈನ್ ಸರ್ವೀಸ್ ಸೆಂಟರ್ ಗೆ ಚಾಲನೆ ನೀಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿರುವ ನಾಲ್ವರು ಮಂತ್ರಿಗಳು ಬಿಮ್ಸ್ ಗೆ ತೆರಳಿ ಸಭೆ ನಡೆಸಿ, ಸಮಸ್ಯೆಗಳನ್ನು ಬಗೆಹರಿಸಬೇಕಿತ್ತು. ಮುಖ್ಯಮಂತ್ರಿಗಳೇ ಎಲ್ಲವನ್ನು ಮಾಡಲು ಆಗುವುದಿಲ್ಲ. ಒಂದು ವೇಳೆ ಮುಖ್ಯಮಂತ್ರಿ ಗಳೇ ಮಾಡುವದಾದರೆ ಸಚಿವರಿದ್ದು ಏನು ಪ್ರಯೋಜನ ಎಂದರು.

ಯಾವುದೇ ಸರ್ಕಾರ ಅಧಿಕಾರದಲ್ಲಿರಲಿ, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳೀಯರೇ ಆಗಿರಬೇಕು ಎಂದು ನಾನು ಈ ಹಿಂದೆಯೇ ಹೇಳಿದ್ದೇನೆ. ಸ್ಥಳೀಯರಿಗೆ ಅಲ್ಲಿನ ಸಮಸ್ಯೆಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿರುತ್ತದೆ. ಅನುಭವವೂ ಇರುತ್ತದೆ. ಹೀಗಾಗಿ, ಜಿಲ್ಲೆಯಲ್ಲಿರುವ ನಾಲ್ವರು ಸಚಿವರಲ್ಲಿ ಒಬ್ಬರು ಜಿಲ್ಲಾ ಉಸ್ತುಸಚಿವರಾಗಬೇಕಿತ್ತು ಎಂದು ಹೇಳಿದರು.

ಇದನ್ನೂ ಓದಿ: ನಿಮ್ಮ ಆಕ್ಸಿಮೀಟರ್ ಖರ್ಚನ್ನು ಉಳಿಸಲಿದೆ ಕೇರ್‌ ಪ್ಲಿಕ್ಸ್ ವೈಟಲ್ಸ್ ಸ್ಮಾರ್ಟ್ ಫೋನ್ ಆ್ಯಪ್!

ನಾಯಕತ್ವ ಬದಲಾವಣೆ ಕುರಿತು ಬಿಜೆಪಿಯಲ್ಲಿ ಭುಗಿಲೆದ್ದಿರುವ ಚಟುವಟಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ಅವರು  ಇದಕ್ಕೆ 2023ರ ಮೇ ನಲ್ಲಿ ಉತ್ತರ ಸಿಗಲಿದೆ ಎಂದು   ಮಾರ್ಮಿಕವಾಗಿ ಹೇಳಿದರು.

ಮಾಜಿ ಸಚಿವ ರಮೇಶ ಜಾರಕಿಹೊಳಿ ಅವರ ಪ್ರಕರಣದ ಕುರಿತು ಪ್ರಸ್ತಾಪಿಸಿ ತನಿಖಾ ತಂಡ ಹಾಗೂ ನ್ಯಾಯಾಲಯದಿಂದಲೇ ಸತ್ಯಾಸತ್ಯತೆ ಹೊರಬರಬೇಕು. ಈ ಬಗ್ಗೆ ನಮ್ಮ ಪಕ್ಷದ ವರಿಷ್ಠರು ಈಗಾಗಲೇ  ಸರ್ಕಾರಕ್ಕೆ ತಮ್ಮ ಅಭಿಪ್ರಾಯ ಮತ್ತು ಆಗ್ರಹವನ್ನು ತಿಳಿಸಿದ್ದಾರೆ ಎಂದು ಹೇಳಿದರು. ಅಂತಿಮ ವರದಿ ಬರಲಿ, ಸತ್ಯಾಸತ್ಯತೆ ತಿಳಿಯಲಿ ಅಲ್ಲಿಯವರೆಗೆ ಕ್ಲೀನ್ ಚಿಟ್ ಹಾಗೂ ಮುಂದಿನ ಹೋರಾಟದ ಬಗ್ಗೆಯಾಗಲಿ ಮಾತನಾಡಲು ಆಗುವುದಿಲ್ಲ ಎಂದರು.

ಪೂಜೆ ಹಾಗೂ ಹೋಮದಿಂದ ಕೋವಿಡ್ ಹೋಗುತ್ತದೆ ಎಂದರೆ ಮಾಡಲಿ, ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ, ಅದನ್ನು ವೈಜ್ಞಾನಿಕವಾಗಿ ಎಲ್ಲರ ಮುಂದೆ ಸಾಬೀತು ಮಾಡಬೇಕು. ಅದು ನಿಜವಾದರೆ  ಕಾಂಗ್ರೆಸ್ ನಿಂದ ಅಂತವರಿಗೆ ಸನ್ಮಾನ ಮಾಡಲಾಗುವುದು ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ಗೆ ಟಾಂಗ್ ನೀಡಿದರು.

ಹೋಮ, ಹವನ ಮಾಡುವುದು ಬಿಜೆಪಿಯವರಿಗೆ ಹೊಸದೇನಲ್ಲ. ಹೋಮದಿಂದ ಕೋವಿಡ್ ಹೋಗುತ್ತದೆ ಎನ್ನುವುದಾದರೆ ವೈದ್ಯರು, ಆಸ್ಪತ್ರೆ ಏಕೆ ಬೇಕು ಎಂದು ಸತೀಶ ಪ್ರಶ್ನಿಸಿದರು.

ಟಾಪ್ ನ್ಯೂಸ್

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

astrology news

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಆನ್‌ ಲೈನ್‌ ವ್ಯವಸ್ಥೆ ಇನ್ನೂ ಆಫ್ ಲೈನ್‌ !

ಆನ್‌ ಲೈನ್‌ ವ್ಯವಸ್ಥೆ ಇನ್ನೂ ಆಫ್ ಲೈನ್‌ !

ಬೆಂಗಳೂರು- ಚೆನ್ನೈ ಸಾರಿಗೆಯ ಹೊಸ ಭಾಷ್ಯ ಎಕ್ಸ್‌ಪ್ರೆಸ್‌ ವೇ!

ಬೆಂಗಳೂರು- ಚೆನ್ನೈ ಸಾರಿಗೆಯ ಹೊಸ ಭಾಷ್ಯ ಎಕ್ಸ್‌ಪ್ರೆಸ್‌ ವೇ!

RAINನಾಳೆ ಕೇರಳಕ್ಕೆ ಮುಂಗಾರು ಪ್ರವೇಶ; ಐದು ದಿನ ಸಾಧಾರಣ ಮಳೆ ಸಾಧ್ಯತೆ

ನಾಳೆ ಕೇರಳಕ್ಕೆ ಮುಂಗಾರು ಪ್ರವೇಶ; ಐದು ದಿನ ಸಾಧಾರಣ ಮಳೆ ಸಾಧ್ಯತೆಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

cmಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ಸಿಎಂ ದಾವೋಸ್‌ ಆರ್ಥಿಕ ಶೃಂಗಸಭೆ ಭೇಟಿ ಯಶಸ್ವಿ; 52 ಸಾವಿರ ಕೋ. ರೂ.ಬಂಡವಾಳ ಹೂಡಿಕೆಗೆ ಒಪ್ಪಂದ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ತಪ್ಪುಗಳನ್ನು ಸರಿಪಡಿಸಲು ಪರ್ಯಾಯ ಕಾರ್ಯಕ್ರಮ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

ಹಾಲು ಉತ್ಪಾದನೆಯಲ್ಲಿ ಕೆಎಂಎಫ್ ಹೊಸ ಮೈಲುಗಲ್ಲು; 91.07 ಲಕ್ಷ ಕೆ.ಜಿ. ಹಾಲು ಶೇಖರಣೆ

MUST WATCH

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

udayavani youtube

Wheel Chair Romeo actor exclusive interview | RELEASING ON MAY 27TH

udayavani youtube

ಶಿರಸಿ : ಬಲೆಯಲ್ಲಿ ಸಿಲುಕಿ ಒದ್ದಾಡುತ್ತಿದ್ದ ನಾಗರ ಹಾವಿನ ರಕ್ಷಣೆ

udayavani youtube

ಪುತ್ರನಿಗೆ ತಪ್ಪಿದ ಪರಿಷತ್ ಟಿಕೆಟ್ : ಬಿಎಸ್ ವೈ ಹೇಳಿದ್ದೇನು?

ಹೊಸ ಸೇರ್ಪಡೆ

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ವಿಜಯೇಂದ್ರ ಮುಂದೇನು? ಶುರುವಾಗಿದೆ ಲೆಕ್ಕಾಚಾರ ,ಸಿಗಲಿದೆಯೇ ಪ್ರ.ಕಾರ್ಯದರ್ಶಿ ಹುದ್ದೆ ?

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ಬೋಟ್‌ ಆ್ಯಂಬುಲೆನ್ಸ್‌ ಪ್ರಸ್ತಾವನೆಯಲ್ಲೇ ಬಾಕಿ

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

ತೆರೆದ ಪುಸ್ತಕ ಪರೀಕ್ಷೆಗೆ ಮರುಜೀವ; ಈ ಶೈಕ್ಷಣಿಕ ವರ್ಷದಲ್ಲಿ ಪ್ರಾಯೋಗಿಕವಾಗಿ ಜಾರಿ

astrology news

ಗುರುವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಆನ್‌ ಲೈನ್‌ ವ್ಯವಸ್ಥೆ ಇನ್ನೂ ಆಫ್ ಲೈನ್‌ !

ಆನ್‌ ಲೈನ್‌ ವ್ಯವಸ್ಥೆ ಇನ್ನೂ ಆಫ್ ಲೈನ್‌ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.