ಕಾಂಗ್ರೆಸ್‌ನಿಂದ ದಲಿತರ ವಿದ್ಯಾರ್ಥಿವೇತನ ಸ್ಥಗಿತದ ಬಗ್ಗೆ ಅಪಪ್ರಚಾರ:  ನಾರಾಯಣಸ್ವಾಮಿ ಖಂಡನೆ

Team Udayavani, Jul 20, 2022, 11:47 AM IST

6chalavadi-narayanaswami

ಬೆಂಗಳೂರು: ಎಸ್‍ಸಿ, ಎಸ್‍ಟಿಗಳಿಗೆ ವಿದ್ಯಾರ್ಥಿವೇತನವನ್ನು ತಡೆಹಿಡಿದಿಲ್ಲ. ಈ ಕುರಿತಂತೆ ಯಾವುದೇ ಸರಕಾರಿ ಆದೇಶ ಇಲ್ಲ. ಇದನ್ನು ಯಾರೂ ನಂಬಬಾರದು. ಸ್ಕಾಲರ್‌ಶಿಪ್ ತಡೆ ಹಿಡಿಯುವ ಕಾರ್ಯ ಅಥವಾ ದಲಿತರಿಗೆ ಕೊಡುವ ಸೌಲಭ್ಯಗಳನ್ನು ಸ್ಥಗಿತಗೊಳಿಸುವ ಕಾರ್ಯವನ್ನು ಬಿಜೆಪಿ ಸರಕಾರ ಮಾಡಿಲ್ಲ ಎಂದು ವಿಧಾನಪರಿಷತ್ ಸದಸ್ಯ ಮತ್ತು ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದರು

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2020ರ ನವೆಂಬರ್ 26ರ ಪತ್ರಿಕೆಯೊಂದರ ದೆಹಲಿ ಆವೃತ್ತಿಯಲ್ಲಿ ಬಂದ ವರದಿಯನ್ನು ಆಧರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಕಾಂಗ್ರೆಸ್ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ. ಇದು ತಪ್ಪು ಮಾಹಿತಿಯನ್ನು ಒಳಗೊಂಡಿದೆ. ಈ ವರದಿ ಸತ್ಯಾಂಶದಿಂದ ಕೂಡಿಲ್ಲ ಎಂದು ಸ್ಪಷ್ಟಪಡಿಸಿದರು.

ಸಾಮಾಜಿಕ ಜಾಲತಾಣಗಳಲ್ಲಿ ಈ ವಿಚಾರದಲ್ಲಿ ತಪ್ಪು ಸಂದೇಶಗಳನ್ನು ಕಾಂಗ್ರೆಸ್ ಪಕ್ಷದ ಕುಮ್ಮಕ್ಕಿನಿಂದ ರವಾನಿಸಲಾಗುತ್ತಿದೆ. ಆದರೆ, ಇದು ಪುರಾವೆ ಇಲ್ಲದ ವಿಷಯ. ಸ್ಪಷ್ಟ ಮಾಹಿತಿ ಇದ್ದರೂ ಕೆಲವರು ರಾಜಕೀಯ ದುರುದ್ದೇಶದಿಂದ ಅಪಪ್ರಚಾರದಲ್ಲಿ ತೊಡಗಿದ್ದು, ಇದು ಖಂಡನಾರ್ಹ ಎಂದು ಹೇಳಿದರು.

66 ಲಕ್ಷ ವಿದ್ಯಾರ್ಥಿಗಳಿಗೆ ಕೊಡುತ್ತಿದ್ದ ಸ್ಕಾಲರ್‌ಶಿಪ್ ಅನ್ನು ಸ್ಥಗಿತಗೊಳಿಸಲಾಗಿದೆ ಎಂದು ತಪ್ಪು ಮಾಹಿತಿ ಹರಡಲಾಗುತ್ತಿದೆ. ರಾಜ್ಯ ಮತ್ತು ಕೇಂದ್ರದ ಬಿಜೆಪಿ ಸರಕಾರಗಳು ಎಸ್‍ಸಿ, ಎಸ್‍ಟಿ ವಿದ್ಯಾರ್ಥಿಗಳಿಗಾಗಿ ವಿಶೇಷ ಅನುದಾನ ನೀಡುತ್ತಿವೆ. ಅಲ್ಲದೆ, ಈ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿವೆ. ರಾಜ್ಯದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯದ ಅಭಿವೃದ್ಧಿಗೆ 27 ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗಿದೆ ಎಂದರು.

ಇದನ್ನೂ ಓದಿ: ಬಂಟ್ವಾಳ: ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಬಿದ್ದ ಕಾರು

ಎಸ್‍ಟಿ ಸಮುದಾಯಕ್ಕೆ ವಿಶೇಷ ಪ್ರಾತಿನಿಧ್ಯ ಕೊಡಲು ಕರ್ನಾಟಕದಲ್ಲಿ ಪ್ರತ್ಯೇಕ ಇಲಾಖೆಯನ್ನು ರಚಿಸಲಾಗಿದೆ. ಕೇಂದ್ರದಲ್ಲಿ ಸಚಿವಸಂಪುಟ ಪುನಾರ್‌ರಚನೆ ವೇಳೆ ಈ ಸಮುದಾಯಗಳಿಗೆ ಆದ್ಯತೆ ಕೊಡಲಾಗಿದೆ. ಬಿಜೆಪಿ ಸಾಮಾಜಿಕ ನ್ಯಾಯದಲ್ಲಿ ನಂಬಿಕೆ ಇಟ್ಟಿದೆ. ಕಾಂಗ್ರೆಸ್‍ನವರಿಗೆ ಚಲಾವಣೆಯಲ್ಲಿರಲು ಯಾವುದೇ ವಿಷಯ ಇಲ್ಲದ ಕಾರಣ ಇಂಥ ಸುಳ್ಳು ಸುದ್ದಿಗಳನ್ನು ಹರಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.

ಎಸ್ಸಿ- ಎಸ್ಟಿ ಸಮುದಾಯಗಳ ವಿಚಾರದಲ್ಲಿ ಹಿಂದಿನ ಕಾಂಗ್ರೆಸ್ ಸರಕಾರಗಳು ಕಣ್ಣೊರೆಸುವ ತಂತ್ರವನ್ನಷ್ಟೇ ಮಾಡಿದ್ದವು. ಆದರೆ, ಅವರ ಸರ್ವತೋಮುಖ ಅಭಿವೃದ್ಧಿಗೆ ನೈಜ ಕಳಕಳಿಯಿಂದ ವಿವಿಧ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯದ ಬಿಜೆಪಿ ಸರಕಾರಗಳು ಜಾರಿಗೊಳಿಸುತ್ತಿವೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.