6-8ನೇ ತರಗತಿ ಆರಂಭ ಇಂದು ನಿರ್ಧಾರ? 

Team Udayavani, Aug 30, 2021, 7:20 AM IST

6-8ನೇ ತರಗತಿ ಆರಂಭ ಇಂದು ನಿರ್ಧಾರ? 

ಬೆಂಗಳೂರು: ಪ್ರೌಢಶಾಲೆ, ಪಿಯು ಬಳಿಕ ಈಗ ರಾಜ್ಯಾದ್ಯಂತ 6ರಿಂದ 8ನೇ ತರಗತಿ ಗಳನ್ನು ಆರಂಭಿಸಲು ಸರಕಾರ ಸೋಮವಾರ ಹಸುರು ನಿಶಾನೆ ತೋರುವ ಸಾಧ್ಯತೆಯಿದೆ.

ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಈ ಬಗ್ಗೆ ಸುಳಿವು ನೀಡಿದ್ದಾರೆ. ಮೊದಲಿಗೆ 6ರಿಂದ 8ನೇ ತರಗತಿ ಆರಂಭಿಸಿ, ಮಕ್ಕಳು ಮತ್ತು ಹೆತ್ತವರ ಪ್ರತಿಕ್ರಿಯೆ ಆಧರಿಸಿ, 15 ದಿನಗಳ ಅನಂತರ 1ರಿಂದ 5ನೇ ತರಗತಿ ಆರಂಭಿಸುವ ಯೋಚನೆ ಯಿದೆ ಎಂದು ಸಚಿವರು ಹೇಳಿದ್ದಾರೆ. ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವ ದಲ್ಲಿ ಸೋಮವಾರ ನಡೆಯುವ ತಜ್ಞರ ಸಮಿತಿ ಸಭೆ ಯಲ್ಲಿ ಈ ಕುರಿತು ನಿರ್ಣಯ ಹೊರ ಬೀಳುವ ಸಾಧ್ಯತೆಯಿದೆ ಎಂದೂ ತಿಳಿಸಿದ್ದಾರೆ.

ಎರಡು ಕಾರ್ಯಯೋಜನೆ ಸಿದ್ಧ :

ಎಲ್ಲ ವಿದ್ಯಾರ್ಥಿಗಳಿಗೂ ಭೌತಿಕ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧವಾಗಿದೆ. ತಾಂತ್ರಿಕ ಸಲಹಾ ಸಮಿತಿ ಶಾಲಾರಂಭಕ್ಕೆ ಒಪ್ಪಿಗೆ ನೀಡಿದ ಕೂಡಲೇ ತರಗತಿ ಆರಂಭಿಸಲಿದ್ದು, ಅಗತ್ಯವಾದ ಎಲ್ಲ ತಯಾರಿ ನಡೆಸಲಾಗಿದೆ ಎಂದು ಸಚಿವ ಬಿ.ಸಿ. ನಾಗೇಶ್‌ ಹೇಳಿದ್ದಾರೆ. ಭೌತಿಕ ತರಗತಿ ಆರಂಭಕ್ಕೆ ಸಂಬಂಧಿಸಿ ಶಿಕ್ಷಣ ಇಲಾಖೆಯ ಮುಂದೆ 2 ಕಾರ್ಯಯೋಜನೆಗಳಿವೆ.

ಮೊದಲಿಗೆ 6ರಿಂದ 8ನೇ ತರಗತಿ ಆರಂಭಿಸಿ, ಅದಕ್ಕೆ ಸಿಗುವ ಸ್ಪಂದನೆ ಆಧರಿಸಿ 15 ದಿನಗಳ ಬಳಿಕ 1ರಿಂದ 5ನೇ ತರಗತಿ ಆರಂಭಿಸುವ ಯೋಚನೆಯಿದೆ. ಜತೆಗೆ 1ರಿಂದ 8ನೇ ತರಗತಿಯನ್ನು ಒಮ್ಮೆಲೆ ಆರಂಭಿಸುವ ಚಿಂತನೆಯೂ ಇದೆ ಎಂದಿದ್ದಾರೆ.

ಈಗಾಗಲೇ 9ರಿಂದ 12ನೇ ತರಗತಿ ಪ್ರಾರಂಭ ವಾಗಿದೆ. ಮಕ್ಕಳು ಉತ್ಸಾಹದಿಂದ ಆಗ ಮಿಸು ತ್ತಿದ್ದಾರೆ. ಅನೇಕ ಶಾಲೆಗಳಿಗೆ ಸ್ವತಃ ಭೇಟಿ ನೀಡಿದ್ದು, ಬಹುತೇಕ ವಿದ್ಯಾರ್ಥಿಗಳು ಶಾಲೆ ಸಂಪೂರ್ಣ ವಾಗಿ ಆರಂಭಿಸುವಂತೆ ಕೋರಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ತಜ್ಞರ ಅಭಿಪ್ರಾಯವಿಲ್ಲದೆ ನಿರ್ಣಯ ತೆಗೆದುಕೊಳ್ಳುವ ಪ್ರಯತ್ನ ಮಾಡಿಲ್ಲ ಎಂದು ಸಚಿವರು ತಿಳಿಸಿದ್ದಾರೆ.

ಸೆ. 6ರಿಂದಲೇ ತರಗತಿ ಆರಂಭ? :

9ರಿಂದ 12ನೇ ತರಗತಿವರೆಗೆ ಶಾಲೆ- ಕಾಲೇಜು ಆರಂಭವಾಗಿದೆ. ಗ್ರಾಮೀಣ ಭಾಗ ದಲ್ಲಿ ಸರಾಸರಿ ಶೇ. 65ಕ್ಕೂ ಅಧಿಕ ಹಾಜರಾತಿ ಇದ್ದು, ನಗರ ಭಾಗದಲ್ಲಿ ಸ್ವಲ್ಪ ಕಡಿಮೆಯಿದೆ. ಉಳಿದ ತರಗತಿಗಳನ್ನು ಆರಂಭಿಸಲು ಬೇಡಿಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಣೇಶ ಚತುರ್ಥಿಯ ಅನಂತರ ಅಥವಾ ಸೆಪ್ಟಂಬರ್‌ 6ರಿಂದಲೇ ಉಳಿದ ತರಗತಿಗಳನ್ನು ಆರಂಭಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಮಕ್ಕಳ ಸಂಖ್ಯೆ ಕಡಿಮೆ ಇರುವ ಶಾಲೆಗಳಲ್ಲಿ ನಿರ್ವಹಣೆಗೆ ಸಮಸ್ಯೆ ಇಲ್ಲ. ಸುಮಾರು 10 ಸಾವಿರ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿದೆ. ಇಂತಲ್ಲಿ ನಿರ್ವಹಣೆ ಸ್ವಲ್ಪ ಕಷ್ಟ. ಆಗ ಪಾಳಿ ಪದ್ಧತಿ ಅಥವಾ ಬೇರೆ ಯಾವುದಾದರೂ ವಿಧಾನದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ. ಒಟ್ಟಾರೆಯಾಗಿ ತಾಂತ್ರಿಕ ಸಲಹಾ ಸಮಿತಿ ನೀಡುವ ಅಭಿಪ್ರಾಯ ಮತ್ತು ಮಾರ್ಗಸೂಚಿಯಂತೆ ಶಾಲೆಗಳು ಆರಂಭವಾಗಲಿದೆ ಎಂದು ಸಚಿವರು ತಿಳಿಸಿದರು.

ಸಾರ್ವಜನಿಕ ಗಣೇಶೋತ್ಸವ: ಇಂದು ನಿರ್ಧಾರ? :

ಸಾರ್ವಜನಿಕ ಗಣೇಶೋತ್ಸವ ಆಚರಣೆ ಕುರಿತು ಸೋಮವಾರ ನಿರ್ಧಾರ ಹೊರಬೀಳುವ ಸಾಧ್ಯತೆ ಯಿದೆ. ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ತಜ್ಞರ ಸಮಿತಿ ಸಭೆ ನಡೆಯಲಿದ್ದು, ಗಣೇಶೋತ್ಸವ ಆಚರಣೆಯ ಕುರಿತು ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಸರಕಾರ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ನಿಷೇಧ ಹೇರಿ, ಮನೆಗಳಲ್ಲಿ ಮಾತ್ರ ಆಚರಣೆಗೆ ಅವಕಾಶ ನೀಡಿದ್ದು, ಈ ಬಗ್ಗೆ ಬಿಜೆಪಿ ಯಿಂದಲೇ ವಿರೋಧ ವ್ಯಕ್ತವಾಗಿದೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅವಕಾಶ ನೀಡಬೇಕೆಂಬ ಬೇಡಿಕೆ ಇದೆ.

ಖಾಸಗಿ ಶಾಲೆಗಳ ಶುಲ್ಕದ ವಿಚಾರವಾಗಿ ಮುಖ್ಯ ಮಂತ್ರಿಯವರೊಂದಿಗೆ ಪ್ರತ್ಯೇಕವಾಗಿ ಚರ್ಚಿಸಿ, ಆದಷ್ಟು ಬೇಗ ತೀರ್ಮಾನ ತೆಗೆದುಕೊಳ್ಳುವ ಪ್ರಯತ್ನ ಮಾಡಲಾಗುತ್ತದೆ. ಬಿ.ಸಿ. ನಾಗೇಶ್‌, ಶಿಕ್ಷಣ ಸಚಿವ

ಟಾಪ್ ನ್ಯೂಸ್

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

ಸಮೀಕ್ಷೆಗಳಲ್ಲಿ ಹಿನ್ನಡೆ; ಹೀಗಾಗಿ ಕಾಂಗ್ರೆಸ್ ಕೀಳು‌ಮಟ್ಟದ ರಾಜಕಾರಣ ಮಾಡುತ್ತಿದೆ: ಜೋಶಿ

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Road mishap: ಖಾಸಗಿ ಬಸ್‌ – ಕಾರು ಅಪಘಾತ; ಆಂಧ್ರ ಮೂಲದ ಮೂವರು ಮೃತ್ಯು

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.