22,900 ಕೋ.ರೂ.ಸೆಮಿಕಂಡಕ್ಟರ್ ಒಪ್ಪಂದಕ್ಕೆ ಸಹಿ: 1500 ಜನರಿಗೆ ಉದ್ಯೋಗ ನಿರೀಕ್ಷೆ

ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ

Team Udayavani, May 1, 2022, 2:53 PM IST

1-sdfdfs

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ 22,900 ಕೋಟಿ ರೂ.ಗಳ ( ೩ ಬಿಲಿಯನ್ ಡಾಲರ್) ಹೂಡಿಕೆಯ ದೇಶದ ಮೊತ್ತ ಮೊದಲ ಪ್ರತಿಷ್ಠಿತ ಸೆಮಿಕಂಡಕ್ಟರ್ ಪ್ಲಾಂಟ್ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಹಾಗೂ ಐಎಸ್‍ಎಂಸಿ ಅನಲಾಗ್ ಫ್ಯಾಬ್ ಪ್ರೈ.ಲಿ ನಡುವೆ ಒಪ್ಪಂದಕ್ಕೆ ಭಾನುವಾರ ಸಹಿ ಹಾಕಲಾಯಿತು.

ಏಳು ವರ್ಷಗಳ ಅವಧಿಯಲ್ಲಿ ಒಟ್ಟು 1500 ಜನರಿಗೆ ಉದ್ಯೋಗ ಒದಗಿಸುವ ನಿರೀಕ್ಷೆ ಇದ್ದು, ಕರ್ನಾಟಕ ಸರ್ಕಾರದ ಪರವಾಗಿ ಕೈಗಾರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣರೆಡ್ಡಿ ಹಾಗೂ ಐ.ಎಸ್.ಎಂ.ಇ ಪರವಾಗಿ ನಿರ್ದೇಶಕ ಅಜಯ್ ಜಲನ್ ಸಹಿ ಹಾಕಿದರು.

ಸೆಮಿಕಂಡಕ್ಟರ್ ಘಟಕ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಸರ್ಕಾರ ಮತ್ತು ಐ.ಎಸ್.ಎಂ.ಸಿ ಅನಲಾಗ್ ಫ್ಯಾಬ್ ಪ್ರೈ.ಲಿ. ಸಂಸ್ಥೆ ಪರಸ್ಪರ ಮಾಡಿಕೊಂಡಿರುವ ಒಪ್ಪಂದವು ವಿಶ್ವದ ಸೆಮಿಕಂಡಕ್ಟರ್ ನಕ್ಷೆಯಲ್ಲಿ ಕರ್ನಾಟಕವನ್ನು ಗುರುತಿಸುವಂತೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಿವಿಧ ರಾಜ್ಯಗಳು ಸೆಮಿಕಂಡಕ್ಟರ್ ಫ್ಯಾಬ್ ಹೂಡಿಕೆಗಳನ್ನು ಆಕರ್ಷಿಸಲು ಸ್ಪರ್ಧಿಸುತ್ತಿದ್ಧ ವೇಳೆಯಲ್ಲಿಯೇ ಈ ಮಹತ್ವದ ಒಪ್ಪಂದಕ್ಕೆ ಕರ್ನಾಟಕ ಸರ್ಕಾರ ಸಹಿ ಹಾಕಿದೆ. ಕೇವಲ ಆರ್ಥಿಕ ಪ್ರೋತ್ಸಾಹಕಗಳು ಮಾತ್ರವಲ್ಲದೆ, ಒಟ್ಟಾರೆ ಕಾರ್ಯನಿರ್ವಹಣೆಗೆ ಅಗತ್ಯವಿರುವ ವಾತಾವರಣವನ್ನು ನಿರ್ಮಿಸುವುದೂ ಮುಖ್ಯ ಎನ್ನುವುದನ್ನು ಕರ್ನಾಟಕ ಸರ್ಕಾರ ಅರಿತಿದೆ. ದೇಶದಲ್ಲಿಯೇ ಅತ್ಯುತ್ತಮ ಮೂಲಭೂತ ಸೌಕರ್ಯ ಹಾಗೂ ಕೌಶಲ್ಯಯುತ ಮಾನವ ಸಂಪನ್ಮೂಲವನ್ನು ಹೊಂದಿದೆ ಎಂದು ಅವರು ಹೇಳಿದರು.

ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ಇದೊಂದು ಬಹುದೊಡ್ಡ ಹೆಜ್ಜೆ. ಸವಾಲುಗಳು ಸಹ ದೊಡ್ಡಮಟ್ಟದಲ್ಲಿ ಇವೆ. ಈ ಸವಾಲುಗಳನ್ನು ಮೆಟ್ಟಿಲುಗಳನ್ನಾಗಿ ಪರಿವರ್ತಿಸಿಕೊಳ್ಳಲೂ ಈ ಒಪ್ಪಂದ ಅವಕಾಶವನ್ನು ಕಲ್ಪಿಸಿದೆ ಎಂದು ಸಿಎಂ ಹೇಳಿದರು.

ನಮ್ಮ ನೆಚ್ಚಿನ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತ ಸರ್ಕಾರದ ಸೆಮಿಕಂಡಕ್ಟರ್ ಮಿಷನ್ ನ್ನು ಅನುಮೋದಿಸಿರುವುದರಿಂದ ಸೆಮಿಕಂಡಕ್ಟರ್ ವಲಯದಲ್ಲಿ ಕರ್ನಾಟಕ ಮುಂದುವರೆಯಲು ಸಾಧ್ಯವಾಗಿದೆ ಎಂದರು.

ಒಡಂಬಡಿಕೆಯು ಇಸ್ರೇಲ್ ಹಾಗೂ ಭಾರತದ ನಡುವೆ ತಂತ್ರಜ್ಞಾನ ಹಾಗೂ ಸಂಸ್ಕೃತಿಗಳ ವಿನಿಮಯಕ್ಕೂ ವೇದಿಕೆ ಕಲ್ಪಿಸಲಿದೆ ಎಂದರು.

ಈ ಸಂದರ್ಭದಲ್ಲಿ ಉನ್ನತ ಶಿಕ್ಷಣ ಮತ್ತು ಐಟಿ, ಬಿಟಿ ಸಚಿವ ಡಾ. ಸಿ. ಎನ್ ಅಶ್ವತ್ಥ ನಾರಾಯಣ, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಐಟಿ ಬಿಟಿ ನಿರ್ದೇಶಕಿ ಮೀನಾ ನಾಗರಾಜ, ಕೈಗಾರಿಕೆ ಇಲಾಖೆ ಆಯುಕ್ತೆ ಗುಂಜನ ಕೃಷ್ಣಾ, ಭಾರತದಲ್ಲಿರುವ ಇಸ್ರೇಲ್ ರಾಯಭಾರಿ ನಾವರ್ ಗಿಲೋನ್, ಐಎಸ್ಎಂಸಿ ಮುಖ್ಯಸ್ಥ ಇರೇಜ್ ಇಂಬರಮನ್ ಸೇರಿದಂತೆ ಇತರೆ ಮುಖಂಡರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.