ಹಿರಿಯ ನಿರೂಪಕ ಗಜಾನನ ಹೆಗಡೆ ನಿಧನ
Team Udayavani, Feb 26, 2020, 3:02 AM IST
ಬೆಂಗಳೂರು: ಖಾಸಗಿ ಸುದ್ದಿವಾಹಿನಿ ನಿರೂಪಕ ಗಜಾನನ ಹೆಗಡೆ (49)ಅವರು ಮಂಗಳವಾರ ನಿಧನರಾದರು. ಇತ್ತೀಚೆಗೆ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಆಯ ತಪ್ಪಿ ಬಿದ್ದು ತಲೆಗೆ ಪೆಟ್ಟಾಗಿದ್ದ ಗಜಾನನ ಹೆಗಡೆ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರು ಸೇರಿ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಹೊನ್ನಾವರದ ಮುಗ್ವಾ ಬೆಣ್ಣೆ ಮನೆಯವರಾಗಿದ್ದ ಹೆಗಡೆ ಅವರು ಹಲವು ಖಾಸಗಿ ಸುದ್ದಿವಾಹಿನಿಗಳಲ್ಲಿ ಕಳೆದ 20 ವರ್ಷಗಳಿಂದ ನಿರೂಪಕರಾಗಿ ಕೆಲಸ ನಿರ್ವಹಿಸಿದ್ದರು. ಜತೆಗೆ ಸಂಗೀತ ಮತ್ತು ರಂಗಭೂಮಿ ಕ್ಷೇತ್ರದಲ್ಲೂ ಅಭಿರುಚಿ ಹೊಂದಿದ್ದ ಅವರು ಸಂಗೀತ ಕಾರ್ಯಕ್ರಮಗಳನ್ನು ನಡೆಸಿಕೊಡುತ್ತಿದ್ದರು. ಬುಧವಾರ ಬೆಂಗಳೂರಿನಲ್ಲಿ ಮೃತರ ಪಾರ್ಥಿವ ಶರೀರದ ಅಂತ್ಯಕ್ರಿಯೆ ನಡೆಯಲಿದೆ. ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿ ಹಲವು ಗಣ್ಯರು ಗಜಾನನ ಹೆಗಡೆ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Haveri; ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸಲು ಸೂಚಕರ ಖೊಟ್ಟಿ ಸಹಿ, ದೂರು ದಾಖಲು
Hubli; ಸ್ಪರ್ಧೆ ಮಾಡಲು ದಿಂಗಾಲೇಶ್ವರ ಸ್ವಾಮೀಜಿಗೆ ಪೇಮೆಂಟ್ ಬಂದಿದೆ: ಯತ್ನಾಳ್ ಆರೋಪ
Box office: ಈ ವಾರ ಬಾಲಿವುಡ್ನಲ್ಲಿ ಎರಡು ಸಿನಿಮಾಗಳು ರಿಲೀಸ್: 1st Day ಗಳಿಸಿದ್ದೆಷ್ಟು?
Congress: ಕೈಗಾರಿಕೋದ್ಯಮದಿಂದ ನಿರುದ್ಯೋಗ ಸಮಸ್ಯೆಗೆ ಪರಿಹಾರ: ಜೆಪಿ ಹೆಗ್ಡೆ
Neha hiremath Case; ನಿಷ್ಪಕ್ಷ ತನಿಖೆ ನಡೆಸಿ ನ್ಯಾಯ ಒದಗಿಸಲಾಗುವುದು: ಹೆಬ್ಬಾಳ್ಕರ್