ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಮೂವರ ಸೆರೆ
Team Udayavani, Feb 3, 2020, 3:02 AM IST
ರಾಯಚೂರು: ನಗರದ ಬಾಲಕಿಯರ ಬಾಲಮಂದಿರದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿ ಸಿ ಮೂವರು ಆರೋಪಿಗಳನ್ನು ಮಹಿಳಾ ಠಾಣೆ ಪೊಲೀಸರು ಬಂಧಿ ಸಿದ್ದಾರೆ. ಬಾಲಮಂದಿರದಲ್ಲಿ ಕ್ಲರ್ಕ್ ಕೆಲಸ ಮಾಡುತ್ತಿದ್ದ ಸಿದ್ದಯ್ಯ ಎಂಬಾತ ಲೈಂಗಿಕ ದೌರ್ಜನ್ಯವೆಸಗಿದ್ದ. ಈತನಿಗೆ ಸೂಪರಿಟೆಂಡೆಂಟ್ ಸೈಯ್ಯದ್ ಪಾಷಾ ಮತ್ತು ಅಡುಗೆ ಸಹಾಯಕಿ ಕಮಲಮ್ಮ ಸಹಕರಿಸಿದ ಕಾರಣ ಮೂವರನ್ನು ವಶಕ್ಕೆ ಪಡೆಯಲಾಗಿದೆ.
2019ರ ನ.11ರಂದು ಬಾಲಮಂದಿರದಲ್ಲಿದ್ದ ಬಾಲಕಿಯನ್ನು ಆರೋಪಿ ಸಿದ್ದಯ್ಯ ಮನೆಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯವೆಸಗಿದ್ದ ಎನ್ನಲಾಗಿದೆ. ಈ ಕುರಿತು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅ ಧಿಕಾರಿ ನೀಡಿದ ದೂರಿನನ್ವಯ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು. ಈ ಘಟನೆ ಬೆಳಕಿಗೆ ಬರುತ್ತಿದ್ದಂತೆ ಆರೋಪಿ ಪರಾರಿಯಾಗಿದ್ದ.
ವಿಶೇಷ ತಂಡ ರಚಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಯನ್ನು ಸೆರೆ ಹಿಡಿದಿದ್ದರು. ವಿಚಾರಣೆ ನಡೆಸಿದಾಗ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಜತೆಗೆ ಹಾಸ್ಟೆಲ್ ಸೂಪರಿಂಟೆಂಡೆಂಟ್ ಹಾಗೂ ಅಡುಗೆ ಸಹಾಯಕಿ ಕೂಡ ನೆರವು ನೀಡಿದ್ದಾಗಿ ತಿಳಿಸಿದ್ದಾನೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ