
ಮಹಿಳೆಯರ ಉಚಿತ ಪ್ರಯಾಣಕ್ಕೆ ‘Shakti Smart Card’ ಕಡ್ಡಾಯ: ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ
Team Udayavani, Jun 5, 2023, 5:27 PM IST

ಬೆಂಗಳೂರು: ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಘೋಷಿಸಿದ ಮಹಿಳೆಯರಿಗೆ ಉಚಿತ ಪ್ರಯಾಣದ ‘ಶಕ್ತಿ ಯೋಜನೆ’ಯ ಸಂಬಂಧ ಇಂದು ಆದೇಶ ಹೊರಡಿಸಲಾಗಿದೆ. ಶಕ್ತಿ ಯೋಜನೆಯ ಮಾರ್ಗಸೂಚಿಗಳನ್ನು ಇಲ್ಲಿ ಸೂಚಿಸಲಾಗಿದೆ.
ಉಚಿತ ಪ್ರಯಾಣಕ್ಕಾಗಿ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಹೊಂದಿರಬೇಕು ಎಂದು ಸರ್ಕಾರ ಸೂಚಿಸಿದೆ.
ಈ ಯೋಜನೆಯು ರಾಜ್ಯದೊಳಗಿನ ಪ್ರಯಾಣಕ್ಕೆ ಮಾತ್ರ ಅನ್ವಯಿಸುವುದು.
ಐಷಾರಾಮಿ ಬಸ್ ಗಳಾದ ರಾಜಹಂಸ, ನಾನ್ ಎ.ಸಿ ಸ್ಲೀಪರ್ ಹಾಗೂ ವಾಯುವಜ್ರ, ಐರಾವತ, ಐರಾವತ ಕ್ಲಬ್ ಕ್ಲಾಸ್, ಐರಾವತ ಗೋಲ್ಡ್ ಕ್ಲಾಸ್, ಅಂಬಾರಿ, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ್, ಫ್ಲೈ ಬಸ್, ಇವಿ ಪವರ್ ಪ್ಲಸ್ ಬಸ್ ಗಳಿಗೆ ಈ ಯೋಜನೆಯು ಅನ್ವಯಿಸುವುದಿಲ್ಲ.
ಬಿಎಂಟಿಸಿ ಹೊರತುಪಡಿಸಿ ಉಳಿದ ರಸ್ತೆ ಸಾರಿಗೆ ಬಸ್ ಗಳಲ್ಲಿ (ಎಸಿ, ಐಷಾರಾಮಿ ಮತ್ತು ಅಂತಾರಾಜ್ಯ ಬಸ್ ಹೊರತುಪಡಿಸಿ) ಶೇ.50ರಷ್ಟು ಆಸನಗಳನ್ನು ಪುರುಷರಿಗೆ ಕಾಯ್ದಿರಿಸಬೇಕು.
ಉಚಿತ ಪ್ರಯಾಣಕ್ಕೆ ಮಹಿಳೆಯರು ‘ಶಕ್ತಿ ಸ್ಮಾರ್ಟ್ ಕಾರ್ಡ್’ ಗಳನ್ನು ಪಡೆಯಬೇಕು. ಸೇವಾ ಸಿಂಧು ಮೂಲಕ ಅರ್ಜಿಗಳನ್ನು ಹಾಕಿ ‘ಶಕ್ತಿ ಸ್ಮಾರ್ಟ್ ಕಾರ್ಡ್’ಗಳನ್ನು ಪಡೆಯಬೇಕು. ಮುಂದಿನ ಮೂರು ತಿಂಗಳು ಕಾಲ ಇದಕ್ಕೆ ಅವಕಾಶವಿದೆ.
ಶಕ್ತಿ ಸ್ಮಾರ್ಟ್ ಕಾರ್ಡ್ ಪಡೆಯುವವರೆಗೆ ಭಾರತ ಸರ್ಕಾರ/ ಕರ್ನಾಟಕ ಸರ್ಕಾರದ ಇಲಾಖೆಗಳಿಂದ ವಿತರಿಸಿರುವ ಭಾವಚಿತ್ರ ಹಾಗೂ ವಾಸದ ವಿಳಾಸವಿರುವ ಗುರುತಿನ ಚೀಟಿಗಳನ್ನು ಪರಿಗಣಿಸಲಾಗುತ್ತದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Karnataka Bandh: ಕಾವೇರಿಗಾಗಿ ಜನಾಕ್ರೋಶ, ಹಲವೆಡೆ ಪ್ರತಿಭಟನೆ; ಬಿಗಿ ಪೊಲೀಸ್ ಭದ್ರತೆ

Congress ಜಗದೀಶ್ ಶೆಟ್ಟರ್‌ಗೆ ಆಪರೇಷನ್ ಹಸ್ತದ ಹೊಣೆ

Tomorrow ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ದಿಲ್ಲಿಗೆ ?

JDS ಫ್ಯಾಮಿಲಿ ಟ್ರಸ್ಟ್; ಸಿಎಂ ಇಬ್ರಾಹಿಂ “ಭೂಗತ’: ಲಕ್ಷ್ಮಣ್ ವ್ಯಂಗ್ಯ
MUST WATCH
ಹೊಸ ಸೇರ್ಪಡೆ

Karnataka Bandh: ವಿಮಾನಗಳಿಗೂ ತಟ್ಟಿದ ಕರ್ನಾಟಕ ಬಂದ್ ಬಿಸಿ… 44 ವಿಮಾನಗಳ ಹಾರಾಟ ರದ್ದು

Hoshiarpur; ಕಿರಾಣಿ ಅಂಗಡಿಯೆದುರು ಶಿರೋಮಣಿ ಅಕಾಲಿ ದಳ ನಾಯಕನ ಗುಂಡಿಕ್ಕಿ ಹತ್ಯೆ

Teacher: ಹಿಂದೂ ವಿದ್ಯಾರ್ಥಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ… ಶಿಕ್ಷಕಿ ಬಂಧನ

Sapta Sagaradaache Ello ಎರಡನೇ ಭಾಗ ಬಿಡುಗಡೆ ಮುಂದಕ್ಕೆ; ಒಟಿಟಿಗೆ ಬಂತು ಸೈಡ್ 1

Pregnant;ವಿವಾಹಕ್ಕೂ ಮುನ್ನ ಗರ್ಭಿಣಿಯಾದ ಮಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿಹಚ್ಚಿದ ತಾಯಿ!