![1-imek-22](https://www.udayavani.com/wp-content/uploads/2024/06/1-imek-22-415x236.jpg)
D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು
ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ
Team Udayavani, May 24, 2024, 8:50 PM IST
![D. K. Shivakumar ಅಪಪ್ರಚಾರ ಮಾಡುವವರಿಗೆ ನಾಚಿಕೆಯಾಗಬೇಕು](https://www.udayavani.com/wp-content/uploads/2024/05/dk-12-620x350.jpg)
ಬೆಂಗಳೂರು : ಬಂಡವಾಳ ಹೂಡಿಕೆ ವಿಚಾರವಾಗಿ ರಾಜ್ಯದ ಬಗ್ಗೆ ಅಪಪ್ರಚಾರ ಮಾಡುತ್ತಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಚುನಾವಣೆ ಮುಗಿದ ಬಳಿಕ ಅವರಿಗೆ ದಾಖಲೆ ಸಮೇತ ಉತ್ತರ ನೀಡುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ವಿಜಯೇಂದ್ರ ಟ್ವೀಟ್ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು, ಈ ರೀತಿ ಟ್ವೀಟ್ ಮಾಡಿರುವ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು. ಅವರು ದಾಖಲೆಗಳನ್ನು ಪರಿಶೀಲಿಸಿ ಮಾತನಾಡಬೇಕು. ಬಿಜೆಪಿಯ ದುರಾಡಳಿತ, ಕಿರುಕುಳಕ್ಕೆ ಬೇಸತ್ತು ಲಕ್ಷಾಂತರ ಉದ್ದಿಮೆದಾರರು, ವ್ಯಾಪಾರಿಗಳು ದೇಶ ಬಿಟ್ಟು ಹೋಗಿ¨ªಾರೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಬಂಡವಾಳ ಹೂಡಿಕೆದಾರರು ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ ಎಂದರು.
ನಮ್ಮ ಕೈಗಾರಿಕಾ ಸಚಿವರು ಮತ್ತು ಮಾಹಿತಿ ತಂತ್ರಜ್ಞಾನ ಸಚಿವರು ಅತ್ಯುತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಚುನಾವಣೆ ಮುಗಿದ ಬಳಿಕ ಈ ವಿಚಾರವಾಗಿ ದಾಖಲೆ ಸಮೇತ ಬಿಜೆಪಿ ನಾಯಕರಿಗೆ ಉತ್ತರ ನೀಡುತ್ತೇವೆ. ಕರ್ನಾಟಕ ಪ್ರಗತಿ, ಅಭಿವೃದ್ಧಿ ಹಾಗೂ ಶಾಂತಿಯ ನಾಡು ಎಂದು ಇಡೀ ದೇಶಕ್ಕೇ ಗೊತ್ತಿದೆ. ನಮ್ಮ ರಾಜ್ಯ ಹಾಗೂ ಬೆಂಗಳೂರನ್ನು ಇಡೀ ವಿಶ್ವವೇ ನೋಡುತ್ತಿದೆ ಎಂದು ಅಭಿಪ್ರಾಯಪಟ್ಟರು.
ಟಾಪ್ ನ್ಯೂಸ್
![1-imek-22](https://www.udayavani.com/wp-content/uploads/2024/06/1-imek-22-415x236.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.