ಕಾಂಗ್ರೆಸ್ ಪಕ್ಷಕ್ಕೆ ಬಾಹ್ಯ ಬೆಂಬಲ ಸೂಚಿಸಿದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ
Team Udayavani, Feb 25, 2021, 1:19 PM IST
ಬೆಂಗಳೂರು: ಹೊಸಕೋಟೆ ವಿಧಾನಸಭೆ ಕ್ಷೇತ್ರದ ಪಕ್ಷೇತರ ಶಾಸಕ ಶರತ್ ಬಚ್ಚೇಗೌಡ ಅವರು ಇಂದು ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಪ್ರಕಟಿಸಿದರು.
ಬೆಂಗಳೂರಿನಲ್ಲಿ ಗುರುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶರತ್ ಬಚ್ಚೇಗೌಡ ಕಾಂಗ್ರೆಸ್ ಶಾಸಕಾಂಗ ಪಕ್ಷಕ್ಕೆ ಬಾಹ್ಯ ಬೆಂಬಲ ಪ್ರಕಟಿಸಿದರು.
ಇದನ್ನೂ ಓದಿ:ತನ್ನ ಹೊಸ ಆವೃತ್ತಿಯ ಸ್ವಿಫ್ಟ್ ಅನಾವರಣಗೊಳಿಸಿದ ಮಾರುತಿ ಸುಜುಕಿ :ಶೇರು ಟ್ರೇಡ್ ನಲ್ಲಿ ಏರಿಕೆ
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್. ಪಾಟೀಲ್, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತಿತರರು ಹಾಜರಿದ್ದರು.