Sharavati ಜಲ ವಿದ್ಯುತ್ ಯೋಜನೆ ಟೆಂಡರ್; ಯಥಾಸ್ಥಿತಿಗೆ ಹೈಕೋರ್ಟ್ ಮಧ್ಯಾಂತರ ಆದೇಶ
Team Udayavani, Mar 11, 2024, 11:31 PM IST
ಬೆಂಗಳೂರು: ಎಂಟು ಸಾವಿರ ಕೋಟಿ ರೂ. ಮೊತ್ತದ ಶರಾವತಿ ಹೈಡ್ರೋ ಎಲೆಕ್ಟ್ರಿಕಲ್ ಯೋಜನೆಯ ಟೆಂಡರ್ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಹೈಕೋರ್ಟ್ ಮಧ್ಯಾಂತರ ಆದೇಶ ನೀಡಿದೆ.
ಈ ವಿಚಾರವಾಗಿ ಏಕಸದಸ್ಯ ನ್ಯಾಯಪೀಠ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಲಾರ್ಸೆನ್ ಆ್ಯಂಡ್ ಟುಬ್ರೋ (ಎಲ್ ಆ್ಯಂಡ್ ಟಿ) ಕಂಪೆನಿ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.ಅಂಜಾರಿಯಾ ಹಾಗೂ ನ್ಯಾ| ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ನೀಡಿದೆ.
ಕಂಪೆನಿ ಪರ ವಕೀಲರು ಮೇಲ್ಮನವಿಯನ್ನು ತುರ್ತು ವಿಚಾರಣೆಗೆ ಕೈಗೆತ್ತಿಕೊಳ್ಳಬೇಕು ಎಂದು ಮಾಡಿದ ಮನವಿಯ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ವಿಭಾಗೀಯ ನ್ಯಾಯಪೀಠ, ಹೈಕೋರ್ಟ್ ಏಕಸದಸ್ಯ ಪೀಠದ ತೀರ್ಪಿನ ಪ್ರತಿ ಇನ್ನೂ ಲಭ್ಯವಾಗದ ಹಿನ್ನೆಲೆಯಲ್ಲಿ ಗುತ್ತಿಗೆ ಸಂಬಂಧ ಯಥಾಸ್ಥಿತಿ ಕಾಯ್ದುಕೊಳ್ಳಲು ವಿಭಾಗೀಯ ನ್ಯಾಯಪೀಠ ಆದೇಶಿಸಿ ವಿಚಾರಣೆಯನ್ನು ಮುಂದೂಡಿತು. ಇದೇ ವೇಳೆ ಟೆಂಡರ್ನ ಲೆಟರ್ಆಫ್ ಅವಾರ್ಡ್ ಅಮಾನತ್ತಿನಲ್ಲಿಡಲು ಪ್ರತಿವಾದಿ ಕೆಪಿಸಿಎಲ್ಗೆ ಸೂಚನೆ ನೀಡಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ