ಮಾಸ್ಕ್ ಜೊತೆ ಗುಲಾಬಿ ನೀಡಿ ಕೋವಿಡ್ ಅರಿವು ಮೂಡಿಸಿದ ಸಚಿವೆ ಶಶಿಕಲಾ ಜೊಲ್ಲೆ
Team Udayavani, Apr 23, 2021, 1:53 PM IST
ವಿಜಯಪುರ : ಕೋವಿಡ್ ಬಗ್ಗೆ ಅರಿವು ಮೂಡಿಸಲು ನಗರದ ಸಿದ್ದೇಶ್ವರ ದೇವಸ್ಥಾನದಿಂದ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಗಿತ್ತು. ಜಿಲ್ಲಾಡಳಿತದಿಂದ ಹಮ್ಮಿಕೊಂಡಿದ್ದ ಈ ಜಾಥಾಕ್ಕೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವೆ ಶ್ರೀಮತಿ ಶಶಿಕಲಾ ಜೊಲ್ಲೆ ಶುಕ್ರವಾರ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಹಾಗೂ ನಿಯಮಿತವಾಗಿ ಸ್ಯಾನಿಟೈಸರ್ ಬಳಕೆಯಿಂದ ಈ ಕೊರೊನಾದಿಂದ ರಕ್ಷಿಸಿಕೊಳ್ಳಬಹುದು ಎಂದು ಹೇಳಿದರು. ಸಿದ್ದೇಶ್ವರ ದೇವಸ್ಥಾನದಿಂದ ಪ್ರಾರಂಭವಾದ ಜಾಥಾ ನಗರದ ವಿವಿಧ ಬಡಾವಣೆಗಳಲ್ಲಿ ಸಂಚರಿಸಿ ಮಾಸ್ಕ್ ಧರಿಸದ ಸಾರ್ವಜನಿಕರಿಗೆ ಉಚಿತ ಮಾಸ್ಕ್ ಹಾಗೂ ಗುಲಾಬಿ ಹೂ ನೀಡಿ ಅರಿವು ಮೂಡಿಸಲಾಯಿತು.
ಪ್ರಮುಖವಾಗಿ ಶಾಸ್ತ್ರಿ ಮಾರುಕಟ್ಟೆಯಲ್ಲಿ ಸಂಚರಿಸಿ ಅಂಗಡಿ ಮಾಲೀಕರಿಗೆ ಹಾಗೂ ವ್ಯಾಪಾರಿಗಳಿಗೆ ತಿಳುವಳಿಕೆ ಮೂಡಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸಿಇಓ ಗೋವಿಂದರೆಡ್ಡಿ, ವಿಧಾನ ಪರಿಷತ್ ಸದಸ್ಯ ಅರುಣ್ ಶಹಾಪುರ, ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್.ಪಾಟೀಲ್, ಬಿಜೆಪಿ ಮುಖಂಡರಾದ ವಿಜುಗೌಡ ಪಾಟೀಲ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ