ಶೋಭಾರ ಹಿನ್ನೆಲೆ ಗೊತ್ತು: ಸಚಿವ ಎಂ.ಬಿ.ಪಾಟೀಲ್
Team Udayavani, Jun 18, 2019, 3:00 AM IST
ಮೈಸೂರು: “ಶೋಭಾ ಹೆಣ್ಣು ಮಗಳು ಅಂತ ನಾನು ಯಾವ ಪದಗಳನ್ನು ಪ್ರಯೋಗಿಸುತ್ತಿಲ್ಲ. ನಾವು ಬಿಜಾಪುರದವರು, ನಮಗೆ ಬೇರೆ ಪದಗಳೂ ಗೊತ್ತು’ ಎಂದು ಸಂಸದೆ ಶೋಭಾ ಕರಂದ್ಲಾಜೆಗೆ ಗೃಹ ಸಚಿವ ಎಂ.ಬಿ.ಪಾಟೀಲ್ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, “ಶೋಭಾ ಕರಂದ್ಲಾಜೆಯಂತಹ ಹೆಣ್ಣು ಮಕ್ಕಳ ಬಾಯಲ್ಲಿ ಅಂತಹ ಪದ ಬರಬಾರದು. ಅವರ ಹಿನ್ನೆಲೆ, ಸಂಸ್ಕಾರ, ಸಂಸ್ಕೃತಿ ಜನರಿಗೆ ಗೊತ್ತಿದೆ. ಅದೇ ರೀತಿ, ನಮ್ಮ ಸಂಸ್ಕಾರ ಹಾಗೂ ಸಂಸ್ಕೃತಿಯೂ ಜನರಿಗೆ ಗೊತ್ತಿದೆ.
ಜಿಂದಾಲ್ ವಿಚಾರದಲ್ಲಿ ಶೋಭಕ್ಕನಿಗೆ ತಕರಾರಿದ್ದರೆ ಕಮಿಟಿ ಮುಂದೆ ಹೋಗಲಿ. ಅದಕ್ಕಾಗಿಯೇ ಒಂದು ಕಮಿಟಿ ರಚನೆಯಾಗಿದೆ. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡೋದು ಸರಿಯಲ್ಲ’ ಎಂದು ಕಿಡಿಕಾರಿದರು.