ಸಿದ್ಧಗಂಗಾ ಶ್ರೀಗಳಿಗೆ 3 ನೇ ಬಾರಿ ಯಶಸ್ವಿ ಸ್ಟಂಟ್ ಅಳವಡಿಕೆ
Team Udayavani, Sep 21, 2017, 11:28 AM IST
ತುಮಕೂರು : ಸಿದ್ಧಗಂಗಾ ಮಠದ ಶ್ರೀಗಳಾದ ಶತಾಯುಷಿ ಡಾ.ಶಿಮಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಸ್ಪಲ್ಪ ಏರುಪೇರು ಕಾಣಿಸಿದ್ದು ಅವರನ್ನು ಗುರುವಾರ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಯಾರೂ ಆತಂಕ ಪಡುವ ಅಗತ್ಯವಿಲ್ಲ, ಅವರ ಆರೋಗ್ಯ ಸ್ಥಿರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ ಎಂದು ಮಠದ ಮೂಲಗಳು ತಿಳಿಸಿವೆ.
ಕಫ, ಜ್ವರ ಮತ್ತು ಗಂಟು ನೋವಿನಿಂದ ಬಳಲುತ್ತಿದ್ದ ಶ್ರೀಗಳಿಗೆ ಮಠದಲ್ಲೇ ಡಾ.ಪರಮೇಶ್ ನೇತೃತ್ವದ ವೈದ್ಯರ ತಂಡ ಚಿಕಿತ್ಸೆ ನೀಡಿತ್ತು.
ಶ್ರೀಗಳು ಗುರುವಾರ ಪೂಜೆ ಮಾಡಿ ಪ್ರಸಾದ ಸ್ವೀಕರಿದ್ದು, ಆ ಬಳಿಕ ಅವರನ್ನು ಮಠದ ಕಾರಿನಲ್ಲಿ ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿದೆ. 8 ಮಂದಿ ತಜ್ಞ ವೈದ್ಯರು ವಿಶೇಷ ಮುತುವರ್ಜಿ ವಹಿಸಿ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಸವಾಲೆಂಬಂತೆ ಶ್ರೀಗಳಿಗೆ 3 ನೇ ಬಾರಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಕೆ ಮಾಡಲಾಗಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು
MUST WATCH
ಹೊಸ ಸೇರ್ಪಡೆ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ