ಪೀಠ ತ್ಯಾಗ ಮಾಡಿದ್ದ ಸಿದ್ಧಲಿಂಗ ಶ್ರೀ ಯುವತಿ ಜತೆಗಿದ್ದ ಫೋಟೋ ವೈರಲ್
Team Udayavani, Mar 18, 2019, 12:30 AM IST
ಕೊಪ್ಪಳ: ತಾಲೂಕಿನ ಅಳವಂಡಿಯ ಸಿದ್ದೇಶ್ವರ ಮಠದ ಸ್ವಾಮೀಜಿಯಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿ ಕೆಲವು ತಿಂಗಳ ಹಿಂದೆ ಏಕಾಏಕಿ ಪೀಠತ್ಯಾಗ ಮಾಡಿದ್ದ ಸಿದ್ಧಲಿಂಗ ಸ್ವಾಮೀಜಿ, ಯುವತಿ ಜೊತೆ ಜನ್ಮದಿನ ಆಚರಿಸಿಕೊಂಡಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಸದ್ದು ಮಾಡುತ್ತಿದೆ.
ಅಳವಂಡಿಯ ಸಿದ್ಧೇಶ್ವರ ಮಠದಲ್ಲಿ 13 ವರ್ಷಗಳ ಕಾಲ ಸ್ವಾಮಿಗಳಾಗಿ ಸೇವೆ ಸಲ್ಲಿಸಿ, ಯಾವುದೋ ಕಾರಣಕ್ಕೆ ಕುಟುಂಬಸ್ಥರಿಗೆ ಪೀಠತ್ಯಾಗ ಮಾಡುವುದಾಗಿ ಹೇಳಿ ಮಠದಿಂದ ಹೊರ ನಡೆದಿದ್ದರು. ಇವರ ಪೀಠತ್ಯಾಗದ ಸುದ್ದಿ ಭಾರಿ ಸದ್ದು ಮಾಡಿತ್ತು. ಕೊನೆಗೆ ಅಳವಂಡಿ ಗ್ರಾಮಸ್ಥರು-ಮಠದ ಕುಟುಂಬಸ್ಥರ ಮಧ್ಯೆ ಮಾತಿನ ಚಕಮಕಿ ನಡೆದಿದ್ದಲ್ಲದೆ, ಆಸ್ತಿ ವಿವಾದಕ್ಕೆ ಇಷ್ಟೆಲ್ಲ ನಡೆದಿದೆ ಎನ್ನುವ ಮಾತುಗಳು ಕೇಳಿ ಬಂದಿದ್ದವು. ಕೊನೆಗೆ ಉಜ್ಜಯಿನಿ ಮಠದ ಪೀಠಾಧಿಪತಿಗಳು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದರು.
ಕೆಲವು ತಿಂಗಳ ಹಿಂದೆ ಪೀಠತ್ಯಾಗ ಮಾಡಿದ್ದ ಸಿದ್ಧಲಿಂಗ ಸ್ವಾಮೀಜಿ, ಇತ್ತೀಚೆಗೆ ಯುವತಿ ಜೊತೆ ಮಹಾನಗರದಲ್ಲಿ ಸುತ್ತಾಡುತ್ತಿದ್ದಾರೆ ಎನ್ನುವ ಮಾತು ಕೇಳಿ ಬಂದಿದ್ದವು. ಅದಕ್ಕೆ ಪುಷ್ಟಿ ನೀಡುವಂತೆ ಇತ್ತೀಚೆಗೆ ಯುವತಿ ಜೊತೆ ಜನ್ಮದಿನ ಆಚರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರಿ ಸದ್ದು ಮಾಡುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ