ಲಾಕ್ ಡೌನ್ ನಿಂದ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಪಕ್ಷ ನಾಯಕರ ಸಭೆ ಕರೆದ ಸಿದ್ದರಾಮಯ್ಯ


Team Udayavani, Apr 29, 2020, 1:10 PM IST

ಲಾಕ್ ಡೌನ್ ನಿಂದ ರೈತರ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಪಕ್ಷ ನಾಯಕರ ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ಲಾಕ್‍ಡೌನ್ ನಿಂದಾಗಿ ಕಾರ್ಮಿಕ ವರ್ಗ ಹಾಗೂ ರೈತ ಸಮುದಾಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಚರ್ಚಿಸಲು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ವಿರೋಧ ಪಕ್ಷಗಳ ನಾಯಕರು ಹಾಗೂ ರೈತ ಸಂಘಟನೆಗಳ ಪ್ರಮುಖರ ಸಭೆ ಕರೆದಿದ್ದಾರೆ.

ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಗುರುವಾರ  ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದೆ.  ಕಾಂಗ್ರೆಸ್, ಜೆಡಿಎಸ್, ಜೆಡಿಯು, ಸಿಪಿಐಎಂ, ಸಿಪಿಐಎಂ ಹಾಗೂ ವಿವಿಧ ರೈತ ಸಂಘಟನೆಗಳ ನಾಯಕರು ಸಭೆಯಲ್ಲಿ ಭಾಗವಹಿಸಲಿದ್ದಾರೆ.  ಸಭೆಯಲ್ಲಿ ಭಾಗವಹಿಸುವಂತೆ ಸಿದ್ದರಾಮಯ್ಯ ಅವರು ಎಲ್ಲ ನಾಯಕರಿಗೂ ಪತ್ರ ಬರೆದು ಮನವಿ ಮಾಡಿದ್ದಾರೆ.

ರಾಜ್ಯದಲ್ಲಿ ಲಾಕ್‍ಡೌನ್ ಹೇರಿ ಒಂದು ತಿಂಗಳಿಗಿಂತ ಹೆಚ್ಚು ದಿನಗಳಾಗುತ್ತಿದ್ದು, ನಿತ್ಯದ ದುಡಿಮೆಯನ್ನು ಆಧರಿಸಿ ಬದುಕುತ್ತಿರುವ, ಸಾಂಪ್ರದಾಯಿಕ ವೃತ್ತಿಯನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ವಿವಿಧ ಸಮುದಾಯಗಳವರು, ಅಟೋ, ಟ್ಯಾಕ್ಸಿ ಚಾಲಕರು ಮತ್ತು ಬೀದಿ ಬದಿಯ ವ್ಯಾಪಾರಿಗಳ ಬದುಕು ದುಸ್ತರವಾಗಿರುವುದರ ಕುರಿತು ಈಗಾಗಲೇ ಮುಖ್ಯಮಂತ್ರಿಗಳೊಂದಿಗೆ ಹಲವು ಸಭೆಗಳನ್ನು ಮಾಡಿ ಸರ್ಕಾರಕ್ಕೆ ಮನವಿಗಳನ್ನು ನೀಡಲಾಗಿದೆ.

ಮತ್ತೊಂದೆಡೆ ಲಾಕ್‍ಡೌನ್‍ನಿಂದಾಗಿ ರೈತರ ಸ್ಥಿತಿಯೂ ಶೋಚನೀಯವಾಗಿದೆ. ಬೆಳೆದ ಬೆಳೆಗಳನ್ನು ಖರೀದಿ ಮಾಡುವವರಿಲ್ಲದೆ, ಸಾಗಣೆ, ಮಾರುಕಟ್ಟೆ ವ್ಯವಸ್ಥೆ ಇಲ್ಲದೆ ರೈತರು ಬೀದಿಪಾಲಾಗುವ ಹಂತ ತಲುಪಿದ್ದಾರೆ. ಅನೇಕ ಕಡೆಗಳಲ್ಲಿ ರೈತರು ಬೆಳೆದ ಬೆಳೆಗಳನ್ನು ರಸ್ತೆಗೆ ಸುರಿಯುತ್ತಿರುವ ಬಗ್ಗೆ, ಅವರ ಜಮೀನುಗಳಲ್ಲಿಯೇ ಹಾಳಾಗುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ನಿತ್ಯ ವರದಿಗಳು ಬರುತ್ತಿವೆ.

ಅಲ್ಲದೆ, ಪೂರ್ವ ಮುಂಗಾರಿನ ಬಿರುಗಾಳಿ, ಆಲಿಕಲ್ಲು ಸಹಿತ ಮಳೆಯಿಂದಾಗಿ ಹಲವೆಡೆ ರೈತರು ಬೆಳೆದ ಭತ್ತ, ತರಕಾರಿ, ಹಣ್ಣಿನ ಬೆಳೆಗಳು ವ್ಯಾಪಕವಾಗಿ ಹಾನಿಗೊಳಗಾಗಿವೆ. ನಷ್ಟಕ್ಕೆ ಒಳಗಾದ ರೈತರಿಗೂ ಪರಿಹಾರ ಸಿಕ್ಕಿಲ್ಲ. ಈ ನಡುವೆ ಪೂರ್ವ ಮುಂಗಾರು ಬಿತ್ತನೆಗೆ ಮುಂದಾಗಿರುವ ರೈತರಿಗೆ ಸಮರ್ಪಕ ಪ್ರಮಾಣದಲ್ಲಿ ಗುಣಮಟ್ಟದ ಬೀಜ, ಗೊಬ್ಬರ ದೊರೆಯದಿರುವ ಕುರಿತು ದೂರುಗಳು ಬರುತ್ತಿವೆ. ಈ ಬಗ್ಗೆ ಸರ್ಕಾರದ ಮೇಲೆ ಒತ್ತಡ ತರಲು ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚಿಸಲು, ಈ ವಿಚಾರದಲ್ಲಿ ಎಲ್ಲ ನಾಯಕರ ಸಲಹೆ, ಸೂಚನೆ ಕೋರಲು ಸಭೆ ಕರೆಯಲಾಗಿದೆ ಎಂದು ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

gayi

Davanagere; ಗಾಯಿತ್ರಿ ಸಿದ್ದೇಶ್ವರ್‌ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ

4-shirva

Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Glanders infection: ಗ್ಲ್ಯಾಂಡರ್ಸ್‌ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.