ಬಾದಾಮಿಗೆ ಸಿಎಂ: ಮಂಗಳವಾರ ನಾಮಪತ್ರ ಸಲ್ಲಿಸಲಿರುವ ಸಿದ್ದರಾಮಯ್ಯ

Team Udayavani, Apr 22, 2018, 6:00 AM IST

22.jpg

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದಲ್ಲೂ ಸ್ಪರ್ಧೆ ಮಾಡುವ ಕುರಿತ ಪ್ರಶ್ನೆಗೆ ಕೊನೆಗೂ ಉತ್ತರ ದೊರೆ ತಿದ್ದು ಎ. 24ರಂದು ನಾಮಪತ್ರ ಸಲ್ಲಿಸಲಿದ್ದಾರೆ.

ಚಾಮುಂಡೇಶ್ವರಿ ಜತೆಗೆ ಬಾದಾಮಿ ಕ್ಷೇತ್ರದಿಂದಲೂ ಸ್ಪರ್ಧಿಸಲು ಹೈಕಮಾಂಡ್‌ ಅನುಮತಿ ದೊರೆತಿದ್ದು, ಶನಿವಾರ ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ್‌ ಅವರು ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಜತೆ ಚರ್ಚಿಸಿ ಒಪ್ಪಿಗೆ ನೀಡಿದ್ದಾರೆ. ಆದರೆ ಚಾಮುಂಡೇಶ್ವರಿಯಲ್ಲಿ ಸೋಲುವ ಭೀತಿಯಿಂದ ಬಾದಾಮಿಯಲ್ಲಿ ಸ್ಪರ್ಧೆ ಮಾಡುತ್ತಿದ್ದಾರೆ ಎಂಬ ಸಂದೇಶ ರವಾನೆಯಾಗದಂತೆ ನೋಡಿಕೊಳ್ಳಲು ಸೂಚಿಸಿದ್ದಾರೆ ಎಂದು ಹೇಳಲಾಗಿದೆ.

ಈ ಮಧ್ಯೆ, ಸಿಎಂ ವಿರುದ್ಧ ಬಿಜೆಪಿ ಅಭ್ಯರ್ಥಿಯಾಗಿ ಸಂಸದ ಶ್ರೀರಾಮುಲು ಅವರನ್ನು ಕಣಕ್ಕಿಳಿಸುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಜತೆಗೆ ಬಾಗಲಕೋಟೆ ಸಂಸದ ಗದ್ದಿಗೌಡರ್‌, ಮಾಜಿ ಸಂಸದ ವಿಜಯ ಸಂಕೇಶ್ವರ ಹೆಸರು ಪರಿಶೀಲನೆಯಲ್ಲಿದೆ ಎಂದು ಮೂಲಗಳು ತಿಳಿಸಿವೆ. ಯಡಿಯೂರಪ್ಪ ಅವರೇ ಕಣಕ್ಕಿಳಿಯಲಿದ್ದಾರೆ ಎಂಬ ಮಾತುಗಳಿವೆಯಾದರೂ ಪಕ್ಷದ ಮೂಲ ಗಳು ಇದನ್ನು ನಿರಾಕರಿಸಿವೆ. ಈ ನಡುವೆ ಜೆಡಿಎಸ್‌ನಿಂದ ಹನುಮಂತಪ್ಪ ಮಾವಿನಮರದ ಅವರು ಕುಮಾರಸ್ವಾಮಿ ಸಮ್ಮುಖದಲ್ಲಿ ಬಾದಾಮಿ ಕ್ಷೇತ್ರಕ್ಕೆ ಶನಿವಾರ ನಾಮಪತ್ರ ಸಲ್ಲಿಸಿದ್ದಾರೆ. 

ಈ ಮಧ್ಯೆ ಈಗಾಗಲೇ ಟಿಕೆಟ್‌ ಘೋಷಿಸಿದ್ದ ಬೆಂಗಳೂರಿನ ಪದ್ಮನಾಭನಗರದಲ್ಲಿ ಗುರಪ್ಪನಾಯ್ಡು ಬದಲಿಗೆ ಮಾಜಿ ಶಾಸಕ ಎಂ. ಶ್ರೀನಿವಾಸ್‌, ಜಗಳೂರಿನಲ್ಲಿ ಪುಷ್ಪಾ ಬದಲಿಗೆ ಎಚ್‌.ಪಿ. ರಾಜೇಶ್‌, ತಿಪಟೂರಿನಲ್ಲಿ ನಂಜಾಮರಿ ಬದಲಿಗೆ ಷಡಕ್ಷರಿ, ಮಲ್ಲೇಶ್ವರದಲ್ಲಿ ಎಂ.ಆರ್‌.ಸೀತಾರಾಂ ಬದಲಿಗೆ ಕೆಂಗಲ್‌ ಹನುಮಂತಯ್ಯ ಮೊಮ್ಮಗ ಶ್ರೀಪಾದ ರೇಣು ಅವರಿಗೆ ಟಿಕೆಟ್‌ ನೀಡಲು ತೀರ್ಮಾನಿಸಲಾಗಿದೆ. 

ಕಾಂಗ್ರೆಸ್‌ಗೆ ಬೇಳೂರು
ಸಾಗರ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ವಂಚಿತ ಬೇಳೂರು ಗೋಪಾಲಕೃಷ್ಣ ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ಶನಿವಾರ ಸಿಎಂ ಸಿದ್ದರಾಮಯ್ಯ ಹಾಗೂ ರಾಜ್ಯ ಕೈ ಉಸ್ತುವಾರಿ ವೇಣುಗೋಪಾಲ್‌ ಜತೆ ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದಾರೆ.

ಸೋಮಣ್ಣ ಪುತ್ರನಿಂದ ಟಿಕೆಟ್‌ ತ್ಯಾಗ?
ಈ ನಡುವೆ ಅರಸೀಕೆರೆ ಕ್ಷೇತ್ರದಿಂದ ಬಿಜೆಪಿ ಟಿಕೆಟ್‌ ಪಡೆದಿರುವ ಮಾಜಿ ಸಚಿವ ವಿ.ಸೋಮಣ್ಣ ಪುತ್ರ ಡಾ| ಅರುಣ್‌ ಸೋಮಣ್ಣ ಸ್ಪರ್ಧಿಸಲು ನಿರಾಕರಿಸುತ್ತಿದ್ದಾರೆ ಎನ್ನಲಾಗುತ್ತಿದ್ದು, ಇಲ್ಲಿ ಬಸವರಾಜ್‌ಗೆ ಬಿಜೆಪಿ ಟಿಕೆಟ್‌ ನೀಡುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ವಿ. ಸೋಮಣ್ಣ ಅವರಿಗೆ ಗೋವಿಂದರಾಜನಗರ, ಅವರ ಕಟ್ಟಾ ಬೆಂಬಲಿಗ ರವೀಂದ್ರ ಅವರಿಗೆ ವಿಜಯ ನಗರ, ಲಕ್ಷ್ಮೀನಾರಾಯಣ ಅವರಿಗೆ ಚಾಮರಾಜಪೇಟೆ ಟಿಕೆಟ್‌ ದೊರೆತಿರುವುದರಿಂದ ಮೂರೂ ಕ್ಷೇತ್ರಗಳಲ್ಲಿ ಓಡಾಡಿ ಪಕ್ಷದ ಗೆಲುವಿಗೆ ಶ್ರಮಿಸಬೇಕೆಂಬ ಹಿನ್ನೆಲೆಯಲ್ಲಿ ಪುತ್ರ ಟಿಕೆಟ್‌ ತ್ಯಾಗ ಮಾಡಲು ನಿರ್ಧರಿಸಿದ್ದಾರೆ ಎಂದು ಹೇಳಲಾಗಿದೆ. ಮಧುಗಿರಿಯ ಟಿಕೆಟ್‌ ಪಡೆದಿರುವ ಹುಲಿ ನಾಯ್ಕರ್‌ ಸಹ ಸ್ಪರ್ಧೆಗೆ ಹಿಂದೇಟು ಹಾಕಿ ಬೇರೆಯವರಿಗೆ ಅವಕಾಶ ಕೊಡಿ ಎಂದಿದ್ದಾರೆ.

ಐದು ಕ್ಷೇತ್ರಗಳಿಗೆ ಕೈ ಟಿಕೆಟ್‌
ನಾಗಠಾಣ ಕ್ಷೇತ್ರದಲ್ಲಿ ಹಾಲಿ ಶಾಸಕ ರಾಜು ಅಲಗೂರು ಬದಲು ಬಿಜೆಪಿಯಿಂದ ವಲಸೆ ಬಂದ ಮಾಜಿ ಶಾಸಕ ವಿಠಲ್‌ ಕಟಕದೊಂಡ ಅವರಿಗೆ ಟಿಕೆಟ್‌ ನೀಡಲು ತೀರ್ಮಾನಿಸ ಲಾಗಿದೆ. ಅದೇ ರೀತಿ ರಾಯಚೂರು ಗ್ರಾಮೀಣ ಕ್ಷೇತ್ರದಿಂದ ಸಿ.ಕೆ.ಜಾಫ‌ರ್‌ ಷರೀಫ್ ಅಳಿಯ ಸೈಯದ್‌ ಯಾಸೀನ್‌, ಶಾಂತಿನಗರದಿಂದ ಹ್ಯಾರೀಸ್‌, ಕಿತ್ತೂರಿನಿಂದ ಹಾಲಿ ಶಾಸಕ ಡಿ.ಬಿ. ಇನಾಂದಾರ್‌, ಸಿಂಧಗಿಯಿಂದ ಶಾಣಪ್ಪ ಸುಣಗಾರ ಅವರಿಗೆ ಟಿಕೆಟ್‌ ನೀಡಲಾಗಿದೆ.

ಟಾಪ್ ನ್ಯೂಸ್

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

Siruguppa ಜೆಸ್ಕಾಂ ಸಿಬ್ಬಂದಿ ಎಡವಟ್ಟು; ಗ್ರಾಮಸ್ಥರಿಂದ ತರಾಟೆ

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

ವೇಗದೂತ ಬಸ್‌ಗಳನ್ನು ನಿಲುಗಡೆ ಮಾಡುವಂತೆ ಒತ್ತಾಯಿಸಿ ರಸ್ತೆ ತಡೆ ನಡೆಸಿದ ವಿದ್ಯಾರ್ಥಿಗಳು

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

1-BP

BJP vs BJP; ವಿಜಯೇಂದ್ರ ವಿರುದ್ಧ ಕಿಡಿ ಕಾರಿದ ಹರಿಹರ ಶಾಸಕ ಬಿ.ಪಿ.ಹರೀಶ್

1-sadsadsad

Revanna; ಪ್ರಜ್ವಲ್ ಗೆ 14 ದಿನ ನ್ಯಾಯಾಂಗ ಬಂಧನ: ಸೂರಜ್ ಜುಲೈ 1ರವರೆಗೆ ಸಿಐಡಿ ವಶಕ್ಕೆ

1-woqf

Waqf ಒತ್ತುವರಿ ಆಸ್ತಿ ಸಮುದಾಯದ ಏಳ್ಗೆಗೆ ಬಳಕೆ: ಸಚಿವ ಜಮೀರ್

yatnal

BJP ಹೈಕಮಾಂಡ್ ಗೆ ದೊಡ್ಡವರ ಪಕ್ಷ ವಿರೋಧಿ ಚಟುವಟಿಕೆ ಮಾಹಿತಿ: ಯತ್ನಾಳ್

MUST WATCH

udayavani youtube

ಹರ್ನಿಯಾ ಸಮಸ್ಯೆಗೆ ಕಾರಣವೇನು?ಚಿಕಿತ್ಸಾ ವಿಧಾನಗಳು ಯಾವುವು?

udayavani youtube

ಮಾವುತನನ್ನು ಕಾಲಿನಿಂದ ತುಳಿದು ಅಪ್ಪಚ್ಚಿ ಮಾಡಿದ ಆನೆ!

udayavani youtube

“ನನ್ನಿಂದ ತಪ್ಪಾಗಿದೆ ಸರ್‌ ಆದರೆ..” | ಸಪ್ತಮಿ ಅವರದ್ದು ಎನ್ನಲಾದ Audio

udayavani youtube

ಹುಣಸೂರು ತಾಲೂಕಿನ ಸಮಗ್ರ ಅಭಿವೃದ್ದಿಗೆ ಬದ್ದ: ಸಂಸದ ಯದುವೀರ್‌ ಒಡೆಯರ್

udayavani youtube

ಈಕೆ ಭಾರತದ ಮೊದಲ ಸರಣಿ ಕೊಲೆಗಾರ್ತಿ | ಸೈನೈಡ್ ಮಲ್ಲಿಕಾ

ಹೊಸ ಸೇರ್ಪಡೆ

police

Davanagere; ಅಲ್ಯೂಮಿನಿಯಂ ವೈರ್ ಕಳ್ಳ 23 ವರ್ಷಗಳ ನಂತರ ಮತ್ತೆ ಬಂಧನ

ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

Karnataka ಪರಿಷತ್‌: 17 ನೂತನ ಶಾಸಕರಿಂದ ಪ್ರಮಾಣ ವಚನ ಸ್ವೀಕಾರ

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

HD Revanna ಕುಟುಂಬದ ವಿರುದ್ಧ ಷಡ್ಯಂತ್ರವಿಲ್ಲ: ಪರಮೇಶ್ವರ್‌

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

Kunigal ಹಾಸ್ಟೆಲ್‌ಗಳಿಗೆ ದಿಢೀರ್​ ಭೇಟಿ ಕೊಟ್ಟ ತಹಶೀಲ್ದಾರ್

1–ncxcx.

Bantwal; ಧಾರ್ಮಿಕ ಕೇಂದ್ರಗಳು, ಶಿಶುಮಂದಿರದಿಂದ ಸಾವಿರಾರು ರೂ. ಕಳವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.