ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

ನಾನು ಕಾಯುತ್ತೇನೆ, ಜನರ ಜತೆ ನಿಲ್ಲುತ್ತೇನೆ

Team Udayavani, Jun 2, 2023, 9:56 PM IST

HDK

ಬೆಂಗಳೂರು: ಗ್ಯಾರಂಟಿಗಳ ಬಗ್ಗೆ ಷರತ್ತುಗಳನ್ನು ವಿಧಿಸಿರುವ ರಾಜ್ಯ ಕಾಂಗ್ರೆಸ್ ಸರಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ನಕಲಿ ಗ್ಯಾರಂಟಿಗಳ ಮೂಲಕ ಜನರಿಗೆ ಟೋಪಿ ಹಾಕಲಾಗಿದೆ ಎಂದು ಟೀಕಿಸಿದ್ದಾರೆ.

ಸರಣಿ ಟ್ವೀಟ್ ಮಾಡಿರುವ ಅವರು, ‘ಷರತ್ತುಸಹಿತ’ವಾಗಿ ಘೋಷಣೆ ಮಾಡಲಾಗಿರುವ 5 ಗ್ಯಾರಂಟಿಗಳ ಬಗ್ಗೆ ಈಗಾಗಲೇ ಜನರಿಗೆ ಒಂದು ನಿರ್ದಿಷ್ಟ ಅಭಿಪ್ರಾಯ ಬಂದಿದೆ. ಹರುಷದ ಕೂಳಿಗೆ ಆಸೆಪಟ್ಟು ವರುಷದ ಕೂಳು ಕಳೆದುಕೊಂಡರು ಎನ್ನುವ ಮಾತನ್ನು ಹೇಳಲಾರೆ. ಆದರೆ, ರಾಜ್ಯದ ಜನತೆಗೆ ಇದರ ಒಳಮರ್ಮ ಅರ್ಥವಾಗಲು ಬಹಳ ದಿನ ಬೇಕಿಲ್ಲ ಎಂದಿದ್ದಾರೆ.

ಗ್ಯಾರಂಟಿಗಳ ಬಗ್ಗೆ ಚರ್ಚೆ ಅಥವಾ ವಿಮರ್ಶೆಗೆ ನನಗೆ ಆತುರವಿಲ್ಲ, ನನಗೆ ತಾಳ್ಮೆ ಇದೆ. ಆದರೆ, ಮತ ಗಳಿಕೆಗೆ ಮುನ್ನ ಕೊಟ್ಟ ಭರವಸೆಗಳು ಅಧಿಕಾರಕ್ಕೆ ಬಂದ ಮೇಲೆ ‘ಷರತ್ತು ಸಹಿತ’ ಎಂದಾಗಿದ್ದರ ಬಗ್ಗೆ ನನಗೆ ನೋವಿದೆ. ಜನರ ಸಹನೆ ಎನ್ನುವುದು ಖಂಡಿತಾ ಕಟ್ಟೆಯೊಡೆಯುತ್ತದೆ, ನಾನು ಕಾಯುತ್ತೇನೆ ಹಾಗೂ ಅವರ ಜತೆ ನಿಲ್ಲುತ್ತೇನೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಅವರು 2013-18ರಲ್ಲಿ ಮುಖ್ಯಮಂತ್ರಿಗಳಾಗಿದ್ದಾಗ 2.75 ಲಕ್ಷದಷ್ಟು ಸರಕಾರಿ ಹುದ್ದೆಗಳನ್ನು ಖಾಲಿ ಇಟ್ಟಿದ್ದರು. ಆ ಖಾಲಿ ಹುದ್ದೆಗಳನ್ನು ತುಂಬಲು ಅವರು ಆ ಸಂದರ್ಭದಲ್ಲಿ ಎಳ್ಳಷ್ಟೂ ಪ್ರಯತ್ನ ಮಾಡಲಿಲ್ಲ. ಅಂದು ಕಾಣದ ನಿರುದ್ಯೋಗ ಈ ಚುನಾವಣೆಗೆ ಮುನ್ನ ಕಂಡಿತು, ಮತ ಫಸಲು ತಂದುಕೊಟ್ಟಿತು. ಮುಗ್ಧ ಯುವಜನರಿಗೆ 3,000 ಮಾಸಿಕ ಭತ್ಯೆ ಎಂದು ಗ್ಯಾರಂಟಿ ಕೊಟ್ಟಾಗ ಷರತ್ತಿನ ಬಗ್ಗೆ ನಾಲಿಗೆ ಮೌನವಾಗಿತ್ತು! ಅದೇ ಯುವಜನರ ವೋಟಿನಿಂದ ಪಟ್ಟಕ್ಕೇರಿದ ಮೇಲೆ ‘ಪ್ರಸಕ್ತ ಸಾಲಿಗೆ ಮಾತ್ರ’ ಎನ್ನುವ ಷರತ್ತು ವಿಧಿಸಿ 24 ತಿಂಗಳಷ್ಟೇ ಭತ್ಯೆ ಎಂದಿದ್ದು ನನ್ನನ್ನು ಬಾಧಿಸಿದೆ. ಯುವಕರಿಗೆ ಟೋಪಿ ಹಾಕಿದ ‘ನಕಲಿ ಗ್ಯಾರಂಟಿ’ಗೆ ಶಾಸ್ತಿ ದೂರವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಾನು ತುಟಿಗೆ ತುಪ್ಪ ಸವರುವವರನ್ನು ನೋಡಿದ್ದೆ. ಹಣೆಗೆ ತುಪ್ಪ ಸವರುವವರನ್ನು ನೋಡಿರಲಿಲ್ಲ. ಗ್ಯಾರಂಟಿ ಕಾರ್ಡಿಗೆ ಸಹಿ ಹಾಕಿ ಕೊಟ್ಟು ಯಾಮಾರಿಸಿದ ಮಹಾನುಭಾವರು ಹಣೆಗೆ ತುಪ್ಪ ಸವರಿ ನಯಗಾರಿಕೆಯಿಂದ ಭಂಡತನ ಮೆರೆದು ಯುವಜನರ ಬೆನ್ನಿಗೆ ಚೂರಿ ಹಾಕಿದ್ದಾರೆ. ಯುವಜನರೂ ತಮ್ಮ ಶಕ್ತಿಯನ್ನು ತೋರಿಸಲಿದ್ದಾರೆ, ನಾನು ಕಾಯುತ್ತೇನೆ ಎಂದು ತಿಳಿಸಿದ್ದಾರೆ.

ಈಗ ಒಂದು ಗ್ಯಾರಂಟಿ ಬಗ್ಗೆ ಮಾತ್ರ ಮಾತನಾಡಿದ್ದೇನೆ. ಉಳಿದವುಗಳ ಬಗ್ಗೆ ಕ್ರಮೇಣ ಮಾತನಾಡುತ್ತೇನೆ. ಜನರ ತಲೆ ಮೇಲೆ ಐದು ಮಕ್ಮಲ್ ಟೋಪಿಗಳನ್ನು ಹಾಕಿದ ಈ ‘ಷರತ್ತು ಸರಕಾರ’ವನ್ನು ಆ ಜನರು ಕ್ಷಮಿಸುವುದಿಲ್ಲ. ಕಂಡಿಷನ್ಸ್ ಕಾಂಗ್ರೆಸ್ ಪಕ್ಷಕ್ಕೆ ತಕ್ಕಪಾಠ ಕಲಿಸಿಯೇ ಕಲಿಸುತ್ತಾರೆ ಎಂದು ಎಚ್ಚರಿಸಿದ್ದಾರೆ.

ಟಾಪ್ ನ್ಯೂಸ್

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

1-saad-sa

World Cup Cricket; ಇತಿಹಾಸ ಬರೆಯಿತು ಅರ್ಜುನ ಸಾರಥ್ಯದ ಶ್ರೀಲಂಕಾ

eBelthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

Belthangady ಕಡಿರುದ್ಯಾವರದಲ್ಲಿ ಆನೆ ದಾಳಿ: ಕೃಷಿ ನಾಶ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

karnataka bund

Cauvery: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

karnataka govt logo

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

Asian Games 2023: ಮುಂದುವರೆದ ಭಾರತದ ಪದಕ ಬೇಟೆ… ಶೂಟಿಂಗ್ ನಲ್ಲಿ ಮತ್ತೊಂದು ಚಿನ್ನ

2-gudibande

Gudibande: ಬುದ್ದಿ ಹೇಳಿದ್ದಕ್ಕೆ ಪೊಲೀಸರ ಬೈಕ್ ಗೆ ಬೆಂಕಿ ಇಟ್ಟ ಭೂಪ

1-thursday

Daily Horoscope: ಸ್ವಂತ ಉದ್ಯಮಿಗಳಿಗೆ ತಾತ್ಕಾಲಿಕ ಹಿನ್ನಡೆ, ಸಾಹಿತ್ಯ ಸಾಧಕರಿಗೆ ಗೌರವ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Examಕರಾವಳಿಯ ಕೈ ತಪ್ಪಿದ ಕೆ-ಸೆಟ್‌ ಕೇಂದ್ರ: 23 ವಿಷಯಗಳಿಗೆ ಪರೀಕ್ಷೆ ಬೆಂಗಳೂರಿನಲ್ಲಿ ಮಾತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.