ಜಾತಿಗಣತಿ ವರದಿ ಒಪ್ಪಿಕೊಳ್ಳುವಂತೆ ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿದೆ

Team Udayavani, May 11, 2022, 10:55 AM IST

4siddaramaih

ಬೆಂಗಳೂರು: ರಾಜ್ಯದಲ್ಲಿ ಸಿದ್ದವಾಗಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಆಧಾರದಲ್ಲಿ ಹಿಂದುಳಿದ ವರ್ಗಗಳಿಗೆ ರಾಜಕೀಯ ಮೀಸಲಾತಿಯನ್ನು ರೂಪಿಸಿ ಅದನ್ನು ಸುಪ್ರೀಮ್ ಕೋರ್ಟ್‌ಗೆ ಸಲ್ಲಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ಅವಕಾಶ ಕೋರಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸುಪ್ರೀಮ್ ಕೋರ್ಟ್ ಮಂಗಳವಾರ ನೀಡಿರುವ ಆದೇಶದಿಂದ ಸೃಷ್ಟಿಯಾಗಿರುವ ಬಿಕ್ಕಟ್ಟಿಗೆ ಇದೊಂದೇ ಪರಿಹಾರ. ಈ ಆದೇಶದಿಂದ ಹಿಂದುಳಿದ ಜಾತಿಗಳಿಗೆ ಆಗಲಿರುವ ಈ ಅನ್ಯಾಯವನ್ನು ತಪ್ಪಿಸಲು ರಾಜ್ಯ ಸರ್ಕಾರ ಕಾನೂನು ತಜ್ಞರ ಜೊತೆ ಸಮಾಲೋಚಿಸಿ, ವಿರೋಧಪಕ್ಷಗಳನ್ನು ವಿಶ್ವಾಸಕ್ಕೆ ಪಡೆದು ಸಮರೋಪಾದಿಯಲ್ಲಿ ಕಾನೂನು ಹೋರಾಟಕ್ಕೆ ತಯರಾಗಬೇಕು ಎಂದು ಆಗ್ರಹಿಸಿದ್ದಾರೆ.

“ಉದ್ಯೋಗ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದ ಹಿಂದುಳಿದ ಜಾತಿಗಳ ಮೀಸಲಾತಿಯನ್ನು ರಾಜಕೀಯ ಕ್ಷೇತ್ರಕ್ಕೆ ಅನ್ವಯಿಸಲಾಗದು. ಇದಕ್ಕಾಗಿ ಹಿಂದುಳಿದ ವರ್ಗಗಳ ಆಯೋಗದ ಮೂಲಕ ವಿಶ್ವಾಸಾರ್ಹ ದತ್ತಾಂಶ ಆಧರಿಸಿದ ಮಾಹಿತಿಯನ್ನು ಮೂರು ಹಂತಗಳ ಪರಿಶೀಲನೆಗೊಡ್ಡಿ ಪ್ರತ್ಯೇಕ ರಾಜಕೀಯ ಮೀಸಲಾತಿಯನ್ನು ರೂಪಿಸಬೇಕು” ಎಂದು 2010ರಲ್ಲಿಯೇ ಸುಪ್ರೀಮ್ ಕೋರ್ಟ್ ರಾಜ್ಯಗಳಿಗೆ ಆದೇಶ ನೀಡಿತ್ತು. ಅದೇ ಆದೇಶವನ್ನು ಸುಪ್ರೀಮ್ ಕೋರ್ಟ್ ಪುನರುಚ್ಚರಿಸುತ್ತಾ ಬಂದಿದೆ ಎಂದರು.

ಹಿಂದುಳಿದ ಜಾತಿಗಳಿಗೆ ಸಂಬಂಧಿಸಿದ ಪರಿಷ್ಕೃತ ರಾಜಕೀಯ ಮೀಸಲಾತಿ ತಕ್ಷಣಕ್ಕೆ ಲಭ್ಯ ಇಲ್ಲದೆ ಹೋದರೆ ಅದಕ್ಕಾಗಿ ಕಾಯದೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲು ಕ್ಷೇತ್ರಗಳನ್ನು ಹೊರತುಪಡಿಸಿ ಉಳಿದೆಲ್ಲ ಕ್ಷೇತ್ರಗಳನ್ನು ಸಾಮಾನ್ಯ ಕ್ಷೇತ್ರಗಳೆಂದು ಪರಿಗಣಿಸಿ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಬೇಕು ಎಂದು ತನ್ನ ಹಿಂದಿನ ಆದೇಶವನ್ನು ಸುಪ್ರೀಂ ಕೋರ್ಟ್ ಪುನರುಚ್ಚರಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಡಿಜಿಪಿ ರವೀಂದ್ರನಾಥ್ ರಾಜಿನಾಮೆ ವಿಚಾರ: ಸರಕಾರ ನಡತೆ ಅಧಿಕಾರಿಗಳಿಗೆ ದೊಡ್ಡ ಬೆದರಿಕೆ

ಸ್ಥಳೀಯ ಸಂಸ್ಥೆಗಳಲ್ಲಿನ ಹಿಂದುಳಿದ ವರ್ಗಗಳ ರಾಜಕೀಯ ಮೀಸಲಾತಿಯ ಆದೇಶ ಆದೇಶ ಎಲ್ಲ ರಾಜ್ಯಗಳಿಗೆ ಅನ್ವಯಿಸಿದೆ ಎಂದು ಹೇಳುತ್ತಲೇ ಇದ್ದರೂ ರಾಜ್ಯದ ಬಿಜೆಪಿ ಸರ್ಕಾರ ಕಾನೂನು ಹೋರಾಟಕ್ಕೆ ಮುಂದಾಗದೆ ಕಾಲಹರಣ ಮಾಡುತ್ತಿರುವುದು ವಿಷಾದನೀಯ. ರಾಜ್ಯ ಸರ್ಕಾರ ಪ್ರತಿಷ್ಠೆಯಾಗಿ ಮಾಡಿಕೊಳ್ಳದೆ, ಸರ್ವಜನರ ಹಿತದ ವಿಷಯದಲ್ಲಿ ರಾಜಕೀಯ ಮಾಡಲು ಹೋಗದೆ ಕಾಂತರಾಜ್ ಆಯೋಗದ ವರದಿಯನ್ನು ಒಪ್ಪಿಕೊಳ್ಳಬೇಕು ಎಂದು ಎಂದರು.

ಟಾಪ್ ನ್ಯೂಸ್

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

Congress ಮತ್ತೆ ಸಿಎಂ ಚರ್ಚೆಗೆ ಡಿ.ಕೆ. ಶಿವಕುಮಾರ್‌ ನಾಂದಿ

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

K. S. Eshwarappa ಸಂಧಾನದ ಎಲ್ಲ ಬಾಗಿಲು ಬಂದ್‌

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

“ಹಾದಿ ತಪ್ಪಿದ’ ಹೇಳಿಕೆಗೆ ಎಚ್‌.ಡಿ. ಕುಮಾರಸ್ವಾಮಿ ವಿಷಾದ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Dwarakish: ಕನ್ನಡದ ಹಿರಿಯ ನಟ, ನಿರ್ಮಾಪಕ ದ್ವಾರಕೀಶ್‌ ವಿಧಿವಶ

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

Sandalwood: ಡಾಲಿ ಧನಂಜಯ ʼಉತ್ತರಕಾಂಡʼಕ್ಕೆ ʼಲಚ್ಚಿʼಯಾಗಿ ಎಂಟ್ರಿ ಕೊಟ್ಟ ಚೈತ್ರಾ ಜೆ ಆಚಾರ್

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

ನಾಮಪತ್ರ ಸಲ್ಲಿಸಿದ ದಾವಣಗೆರೆ ಲೋಕಸಭಾ ಬಿಜೆಪಿ ಅಭ್ಯರ್ಥಿ ಗಾಯಿತ್ರಿ ಸಿದ್ದೇಶ್ವರ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Srinagar: ಝೇಲಂ ನದಿಯಲ್ಲಿ ವಿದ್ಯಾರ್ಥಿಗಳಿದ್ದ ಬೋಟ್‌ ಮುಳುಗಡೆ; ಹಲವರು ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.