ಪ್ರಧಾನಿ ಮೋದಿ ರಾಜ್ಯಕ್ಕೆ : ಪ್ರಶ್ನೆಗಳ ಸುರಿಮಳೆಗರೆದ ಸಿದ್ದರಾಮಯ್ಯ

ವಾಲ್ಮೀಕಿಯವರ ಮಂದಿರವನ್ನು ಅಯೋಧ್ಯೆಯಲ್ಲಿ ಸ್ಥಾಪಿಸಿ...

Team Udayavani, Nov 10, 2022, 5:24 PM IST

siddaramaiah

ಬೆಂಗಳೂರು: ರಾಜ್ಯಕ್ಕೆ ಆಗಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗಳ ಸುರಿಮಳೆಗರೆದಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು,  ನಾಲ್ಕು ವರ್ಷಗಳ ಹಿಂದೆ ನೀವು ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಬಂದಾಗ ನೀಡಿದ್ದ ಭರವಸೆಗಳೆಲ್ಲಾ ಏನಾಗಿವೆ? ಎಂದು ಪ್ರಶ್ನಿಸಿದ್ದಾರೆ. ಸರ್ಕಾರದ 40% ಕಮಿಷನ್‍ನಿಂದಾಗಿ ಸಂಕಟ ಪಡುತ್ತಿರುವ ಹಲವರು ನಿಮಗೆ ಅನೇಕ ಪತ್ರಗಳನ್ನು ಬರೆದರು. ಸಾಮಾಜಿಕ ಮಾಧ್ಯಮಗಳ ಮೂಲಕ ಮನವಿ ಮಾಡಿದರು. ನಿಮ್ಮದೇ ಪಕ್ಷದ ಕಾರ್ಯಕರ್ತ ಸಂತೋಷ್ ಪಾಟೀಲ್ 40% ಲಂಚದ ಕಾರಣದಿಂದ ಜೀವ ಕಳೆದುಕೊಂಡರು. ಮತ್ತೋರ್ವ ಗುತ್ತಿಗೆದಾರ ಬಸವರಾಜು ಎನ್ನುವವರು ಸರ್ಕಾರದ ಲಂಚಾವತಾರದಿಂದ ಬೇಸತ್ತು ದಯಾ ಮರಣ ಕೋರಿ ನಿಮಗೆ ಪತ್ರ ಬರೆದರು.

ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟ (ರುಪ್ಸಾ) 40% ಸರ್ಕಾರದ ಕಿರುಕುಳಗಳನ್ನು ನೇರವಾಗಿ ಪ್ರಸ್ತಾಪಿಸಿ ಪತ್ರ ಬರೆಯಿತು. ಗುತ್ತಿಗೆದಾರರ ಸಂಘದವರು ಸರ್ಕಾರವನ್ನು ಎದುರು ಹಾಕಿಕೊಂಡು ಪತ್ರಗಳನ್ನು ಬರೆದರು. ಸ್ವತಃ ವಿರೋಧ ಪಕ್ಷದ ನಾಯಕನಾಗಿ ನಾನೆ ಈ ಕುರಿತು ಬರೆದಿದ್ದೇನೆ.  ಈ ಎಲ್ಲ ಪತ್ರಗಳ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಇನ್ಸ್‌ಪೆಕ್ಟರ್ ಹುದ್ದೆಗೆ 60-70 ಲಕ್ಷ ರೂಪಾಯಿ ಕೊಟ್ಟು ಬರಬೇಕಾಗಿದೆ ಎಂದು ಸಚಿವ ಎಂ.ಟಿ.ಬಿ ನಾಗರಾಜ್ ಅವರು ಬಹಿರಂಗವಾಗಿ ಹೇಳಿದ್ದಾರೆ. ಪೊಲೀಸರು ಲಂಚ ತಿಂದು ಕುಳಿತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ಒಪ್ಪಿಕೊಂಡಿದ್ದಾರೆ. ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಹಿರಿಯ ಐಪಿಎಸ್ ಅಧಿಕಾರಿಗಳೂ ಸಿಕ್ಕಿ ಬಿದ್ದಿದ್ದಾರೆ. ಸಚಿವ ಎಸ್.ಟಿ.ಸೋಮಶೇಖರ್ ಅವರ ಮೇಲಿನ ಲಂಚ ಪ್ರಕರಣದ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಹೈಕೋರ್ಟ್ ಸೂಚನೆ ನೀಡಿದೆ. ಹೈಕೋರ್ಟ್ ಸೂಚನೆ ವಿರುದ್ಧ ಸಚಿವರು ಸುಪ್ರೀಂಕೋರ್ಟ್ ಮೊರೆ ಹೋಗಿದ್ದಾರೆ. ಸುಪ್ರೀಂ ಕೋರ್ಟು ಕೂಡ ಅವರ ನೆರವಿಗೆ ಬರಲಿಲ್ಲ. ಆರೋಗ್ಯ ಸಚಿವ ಸುಧಾಕರ್ ಅವರು ಕೋವಿಡ್ ಪಿಡುಗಿನ ಸಂದರ್ಭದಲ್ಲಿ ಭ್ರಷ್ಟಾಚಾರ ಎಸಗಿದ್ದಾರೆ. ಸಚಿವ ಸುಧಾಕರ್, ಶಿವರಾಮ್ ಹೆಬ್ಬಾರ್, ಬಿ.ಸಿ.ಪಾಟೀಲ್, ಗೋಪಾಲಯ್ಯ, ಬೈರತಿ ಬಸವರಾಜ್, ಶ್ರೀರಾಮುಲು, ಆನಂದ್ ಸಿಂಗ್, ಪ್ರಭು ಚೌಹಾಣ್ ಹೀಗೆ ಸಾಲು ಸಾಲು ಸಚಿವರ ಮೇಲೆ ಲಂಚ, ದುರಾಡಳಿತ, ಅಕ್ರಮಗಳು ಸೇರಿ ರಾಶಿ ರಾಶಿ ಆರೋಪಗಳು ಕೇಳಿ ಬಂದಿವೆ. ಅನೇಕ ಸಚಿವರು ಸಿಡಿ ಪ್ರಕರಣಗಳಲ್ಲಿ ತಡೆಯಾಜ್ಞೆ ಪಡೆದಿದ್ದಾರೆ. ಗೋವುಗಳ ಮೇವು ಸರಬರಾಜಿಗೂ ಲಂಚ ಕೇಳಿ ದಾಖಲೆ ಮಾಡಿದ ಆರೋಪಗಳು ಬಂದರೂ ಮಾಮೂಲಿಯಂತೆ ದಿವ್ಯ ಮೌನಕ್ಕೆ ಜಾರಿದ್ದ ನಿಮಗೆ ಚುನಾವಣೆ ಕಾರಣಕ್ಕೆ ರಾಜ್ಯ ಮತ್ತೆ ಮತ್ತೆ ನೆನಪಾಗುತ್ತಿದೆ. ಇದನ್ನು ನಾವು ಯಾವ ಮಾತುಗಳಲ್ಲಿ ವಿವರಿಸಬೇಕು ಹೇಳಿ? ಎಂದಿದ್ದಾರೆ.

ಸಿಬಿಐ, ಇಡಿ, ಐಟಿ ಮುಂತಾದ ಕೇಂದ್ರ ತನಿಖಾ ಸಂಸ್ಥೆಗಳ ಮೂಲಕ ಜನರ ಧ್ವನಿ ಅಡಗಿಸುವ ಯತ್ನ ನಡೆಯುತ್ತಿದೆ. ಆದರೆ ರಾಜ್ಯ ಸರ್ಕಾರದಲ್ಲಿರುವ ಎಷ್ಟು ಮಂದಿ ಸಚಿವರು ಮತ್ತು ರಾಜ್ಯ ಬಿಜೆಪಿಯಲ್ಲಿರುವ ಎಷ್ಟು ನಾಯಕರುಗಳ ವಿರುದ್ಧ ಈ ತನಿಖಾ ಸಂಸ್ಥೆಗಳು ಕೇಸು ದಾಖಲಿಸಿಕೊಂಡು ತನಿಖೆ ನಡೆಸಿವೆ ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಕಾನೂನು ಸುವ್ಯವಸ್ಥೆ, ಆಡಳಿತ ಕುಸಿದಿದ್ದರೆ ರಾಜ್ಯದ ಹಣದುಬ್ಬರ ಶೇ7.62ಕ್ಕೆ ಏರಿಕೆಯಾಗಿದೆ. ರಾಜ್ಯದ ನಿರುದ್ಯೋಗ ಪ್ರಮಾಣ ಶೇ.38.7 ಕ್ಕೆ ಏರಿಕೆಯಾಗಿದೆ. ಕೃಷಿ ವೆಚ್ಚ ರಾಕೆಟ್ ವೇಗದಲ್ಲಿ ಏರುತ್ತಿದೆ, ಈ ವೆಚ್ಚದ ಅರ್ಧದಷ್ಟು ಕೂಡ ಬೆಂಬಲ ಬೆಲೆ ಮೂಲಕ ರೈತರಿಗೆ ಸಿಗುತ್ತಿಲ್ಲ. ಬೆಳೆ ಹಾನಿಗೆ ಪರಿಹಾರ ಸೂಕ್ತವಾಗಿ ಸಿಕ್ಕಿಲ್ಲ. ಬೆಳೆ ಸಾಲಕ್ಕೆ ರೈತರ ಪರದಾಟ ನಿಂತಿಲ್ಲ. ರೈತರ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿ ಡಬ್ಬಲ್ ಎಂಜಿನ್ ಸರ್ಕಾರ ಟೋಪಿ ಹಾಕಿದೆ. ನೀವು ಹಿಂದಿನ ಬಾರಿ ರಾಜ್ಯಕ್ಕೆ ಬರುವ ವೇಳೆಯಲ್ಲಿ ನಿಮ್ಮನ್ನು ಖುಷಿ ಪಡಿಸಲೆಂದು ಮಾಡಿದ್ದ ರಸ್ತೆಗಳು ಎರಡು ದಿನವೂ ಬಾಳಿಕೆ ಬರಲಿಲ್ಲ ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರಗಳ ವೈಫಲ್ಯಗಳ ಕುರಿತಂತೆ ನಾವು ಇದುವರೆಗೂ 73 ಪ್ರಶ್ನೆಗಳನ್ನು “ನಿಮ್ಮ ಬಳಿ ಉತ್ತರ ಇದೆಯೇ?” ಎಂದು ಕೇಳಿದ್ದೇವೆ. ಒಂದಕ್ಕೂ ಉತ್ತರಿಸಲು ಸರ್ಕಾರದಿಂದ ಸಾಧ್ಯವಾಗಿಲ್ಲ ಏಕೆ? ರಾಜ್ಯದ ಆರ್ಥಿಕತೆಗೆ ನೆರವಾಗುವ ಮಹದಾಯಿ, ಕೃಷ್ಣಾ ಮೇಲ್ದಂಡೆ, ಮೇಕೆದಾಟು ಯೋಜನೆಗಳನ್ನು ಜಾರಿ ಮಾಡಲಿಲ್ಲ. ಇವುಗಳನ್ನು ರಾಷ್ಟ್ರೀಯ ಯೋಜನೆಗಳೆಂದು ಘೋಷಿಸಿ ಎನ್ನುವ ಎಂಬ ರೈತರ ಬೇಡಿಕೆಗೆ ನೀವು ಸಾಂಪ್ರದಾಯಿಕ ಮೌನವನ್ನೇ ಏಕೆ ಪಾಲಿಸಿದ್ದೀರಿ? ಎಂದು ಪ್ರಶ್ನಿಸಿದ್ದಾರೆ.

ಎಸ್‍ಸಿ/ಎಸ್‍ಟಿ ಸಮುದಾಯಗಳ ಮೀಸಲು ಹೆಚ್ಚಳದ ಕುರಿತು ರಾಜ್ಯದಲ್ಲಿ ಎಲ್ಲ ಪಕ್ಷಗಳೂ ಸೇರಿ ಸರ್ವಾನುಮತದ ತೀರ್ಮಾನ ತೆಗೆದುಕೊಂಡಿದ್ದೇವೆ. ರಾಜ್ಯ ಸರ್ಕಾರ ಕೇಂದ್ರಕ್ಕೆ ಸೂಕ್ತ ಕ್ರಮಕ್ಕಾಗಿ ಕಳಿಸಿದೆ. ಇದನ್ನು ಸಂವಿಧಾನದ 9ನೇ ಶೆಡ್ಯೂಲಿಗೆ ಕೂಡಲೆ ಸೇರಿಸಬೇಕು. ಆದರೆ ಈ ಕುರಿತು ಕೇಂದ್ರದ ನಿಲುವು ಏನು? ನಮ್ಮ ಸರ್ಕಾರವಿದ್ದಾಗ 2013 ರಿಂದ 2018 ರ ವರೆಗೆ ಹಲವಾರು ಜಾತಿಗಳನ್ನು ಪ.ಜಾತಿ/ಪ.ಪಂಗಡಕ್ಕೆ ಸೇರಿಸಬೇಕೆಂದು ಶಿಫಾರಸ್ಸು ಮಾಡಿದ್ದೆವು. ಅವುಗಳ ಕುರಿತು ನಿಮ್ಮ ಸರ್ಕಾರ ಯಾವ ಕ್ರಮ ಕೈಗೊಂಡಿದೆ? ಎಂದು ಪ್ರಶ್ನಿಸಿದ್ದಾರೆ.

ತುಮಕೂರು-ದಾವಣಗೆರೆ ಮುಂತಾದ ರೈಲ್ವೆ ಯೋಜನೆಗಳಿಗೆ ಅಗತ್ಯವಾದಷ್ಟು ಹಣ ಬಂದಿಲ್ಲ. ಯೋಜನೆಗಳು ಕಾಲು ಮುರಿದುಕೊಂಡು ಬಿದ್ದಲ್ಲಿಯೆ ಇವೆ. ರಾಯಚೂರಿನ ಜನತೆಯ ಏಮ್ಸ್ ಕನಸು ಇನ್ನೂ ಕನಸಾಗಿಯೇ ಉಳಿದಿದೆ. ರಾಜ್ಯದ ಪಾಲಿಗೆ ಒದಗಿ ಬಂದಿದ್ದ ಎರಡು ಸಿಆರ್‍ಪಿಎಫ್ ಬೆಟಾಲಿಯನ್‍ಗಳನ್ನು ಕಿತ್ತು ಉತ್ತರ ಪ್ರದೇಶಕ್ಕೆ ವರ್ಗಾಯಿಸಲಾಯಿತು. ಕೇಂದ್ರದ ಆಯೋಗಗಳು ನಡೆಸುವ ಪ್ರವೇಶ ಪರೀಕ್ಷೆಯಿಂದ ಕನ್ನಡವನ್ನು ಕಿಕ್‍ಔಟ್ ಮಾಡಿ ಕನ್ನಡಿಗರ ಪಾಲಿನ ಉದ್ಯೋಗವನ್ನು ಕಿತ್ತುಕೊಳ್ಳಲಾಗಿದೆ. ಇದಕ್ಕೆ ನಿಮ್ಮ ಉತ್ತರವೇನು ಎಂದು ಪ್ರಶ್ನಿಸಿದ್ದಾರೆ.

ನೀವು ಮಹರ್ಷಿ ವಾಲ್ಮೀಕಿ, ನಾಡಪ್ರಭು ಕೆಂಪೇಗೌಡರು, ದಾಸಶ್ರೇಷ್ಠರಾದ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಲು ನೀವು ರಾಜ್ಯಕ್ಕೆ ಬರುತ್ತಿದ್ದೀರಿ. ಇವರೆಲ್ಲಾ ಕನ್ನಡ ಮಣ್ಣಿನ ಸಾಂಸ್ಕøತಿಕ ನಾಯಕರು. ವಿಗ್ರಹಗಳಿಗೆ ಮಾಲಾರ್ಪಣೆ ಮಾಡುತ್ತಾ ಅವರ ವಿಚಾರಗಳನ್ನು ಕೊಲ್ಲುವ ಸಂಪ್ರದಾಯವನ್ನು ಕೇಂದ್ರ ಮತ್ತು ರಾಜ್ಯ ಬಿಜೆಪಿ ಸರ್ಕಾರಗಳು ಬೆದರಿಕೆ ಮೂಲಕ ಆಚರಣೆಗೆ ತರುತ್ತಿವೆ. ನೀವೀಗ ಮಾಲಾರ್ಪಣೆ ಮಾಡುವ ಎಲ್ಲಾ ಮಹನೀಯರ ಬಗ್ಗೆ ನಿಜವಾದ ಗೌರವ, ಶ್ರದ್ಧೆ ಇದ್ದರೆ ಇವರನ್ನೆಲ್ಲಾ ರಾಷ್ಟ್ರೀಯ ಸಾಂಸ್ಕೃತಿಕ ನಾಯಕರು ಎಂದು ಘೋಷಿಸಿ. ಇವರ ಪ್ರತಿಮೆಗಳನ್ನು ಪಾರ್ಲಿಮೆಂಟಿನ ಮುಂದೆ ಸ್ಥಾಪಿಸುವ ಭರವಸೆಯನ್ನು ಜನರಿಗೆ ನೀಡಿ ಎಂದು ಸವಾಲು ಹಾಕಿದ್ದಾರೆ.

ಜಗತ್ತಿಗೆ ರಾಮಾಯಣದಂಥಹ ಶ್ರೇಷ್ಠ ಗ್ರಂಥವನ್ನು ನೀಡಿ ಶ್ರೀರಾಮನಂತಹ ವ್ಯಕ್ತಿತ್ವವನ್ನು ಪರಿಚಯಿಸಿದ ಮಹರ್ಷಿ ವಾಲ್ಮೀಕಿಯವರ ಮಂದಿರವನ್ನು ಅಯೋಧ್ಯೆಯಲ್ಲಿ ಸ್ಥಾಪಿಸುವಂತೆ ನಾನು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಬಿಜೆಪಿಯ ದುರಾಡಳಿತದ ವಿರುದ್ಧ ನಾಡಿನ ಜನತೆ ರೊಚ್ಚಿಗೆದ್ದಿದ್ದಾರೆ. ನಿಮ್ಮ ಎಲ್ಲ ಭರವಸೆಗಳು ಕೇವಲ ಭರವಸೆಗಳಾಗಿಯೆ ಉಳಿದಿವೆ. ಎಲ್ಲ ಭರವಸೆಗಳನ್ನು ಈಡೇರಿಸಿದ ಮೇಲೆ ನೀವು ಉಳಿದ ಮಾತುಗಳನ್ನು ಆಡಬೇಕಾಗಿದೆ. ಇಲ್ಲದಿದ್ದರೆ ಬಿಜೆಪಿಯೆಂದರೆ ಕೇವಲ ‘ಬೊಗಳೆ ಜನರ ಪಕ್ಷ’, ‘ಭ್ರಷ್ಟ ಜನರ ಪಕ್ಷವೆಂದು’ ವೆಂದು ಕರೆಯಬೇಕಾಗುತ್ತದೆಂದು  ತಮಗೆ ತಿಳಿಸಬಯಸುತ್ತೇನೆ ಎಂದಿದ್ದಾರೆ.

ಕೇಂದ್ರ ಸರ್ಕಾರವು ಕೂಡಲೆ ರಾಜ್ಯದ ಕುರಿತಾದ ತಾರತಮ್ಯವನ್ನು ನಿಲ್ಲಿಸಬೇಕು. ಮೇಲೆ ಹೇಳಿದ ಎಲ್ಲ ವಿಷಯಗಳ ಕುರಿತು ಕೂಡಲೇ ಕ್ರಮ ತೆಗೆದುಕೊಂಡು ಅನುಷ್ಠಾನ ಮಾಡಬೇಕು.  ಭ್ರಷ್ಟ ಬಿಜೆಪಿಯ ಸಚಿವರುಗಳ ವಿರುದ್ಧ ಐಟಿ, ಇಡಿ, ಸಿಬಿಐ ತನಿಖೆಗಳನ್ನು ಮಾಡಿಸಬೇಕು. ಯಾವ್ಯಾವ ಸಚಿವರುಗಳ ವಿರುದ್ಧ ವಿಚಾರಣೆ ನಡೆಯುತ್ತಿದೆಯೊ ಅವರನ್ನೆಲ್ಲ ಕೂಡಲೆ ವಜಾ ಮಾಡಬೇಕು. ರಾಜ್ಯವನ್ನು ಭ್ರಷ್ಟಾಚಾರದಿಂದ,  ದ್ವೇಷ, ಹಿಂಸೆಯ ಕೋಮುವಾದಿ ರಾಜಕಾರಣದಿಂದ ಬಿಡುಗಡೆ ಮಾಡಬೇಕೆಂದು ತಮ್ಮನ್ನು  ಆಗ್ರಹಿಸುತ್ತೇನೆ. ಹಾಗೂ ತಾವು ರಾಜ್ಯಕ್ಕೆ ಬರುವಾಗ ರಾಜ್ಯದ ಜನರ ಹಿತಕ್ಕಾಗಿ ಯೋಜನೆಗಳನ್ನು ತರಬೇಕೆ ಹೊರತು, ನಿಮ್ಮ ಪಕ್ಷದ ಹಿತಕ್ಕಾಗಿ ಕೇವಲ ಪ್ರವಾಸ ಬರಬಾರದೆಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.