CM ಗಾದಿ ಆಕಾಂಕ್ಷಿಗಳ ಜತೆಗೆ ಸಿದ್ದರಾಮಯ್ಯ ಉಪಾಹಾರ ಕೂಟ
Team Udayavani, Sep 13, 2024, 11:14 PM IST
ಬೆಂಗಳೂರು: ಮುಡಾ ಪ್ರಕರಣದಲ್ಲಿ ಕಾನೂನು ಕುಣಿಕೆಗೆ ಸಿಲುಕಿರುವ ಸಿಎಂ ಸಿದ್ದರಾಮಯ್ಯ, ಸಿಎಂ ಸ್ಥಾನದ ಬಗ್ಗೆ ಆಕಾಂಕ್ಷೆ ವ್ಯಕ್ತಪಡಿಸಿದ ಕಾಂಗ್ರೆಸ್ ನಾಯಕರ ಜತೆಗೆ ಶುಕ್ರವಾರ ಉಪಾಹಾರ ಕೂಟ ನಡೆಸಿದ್ದು, ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
2 ದಿನಗಳ ಹಿಂದೆ ನಿಗದಿಯಾಗಿದ್ದ ಈ ಸಭೆ ಹೈಕೋರ್ಟ್ ವಿಚಾರಣೆ ಹಿನ್ನೆಲೆಯಲ್ಲಿ ಮುಂದೂಡಿಕೆ ಯಾಗಿತ್ತು. ಸಿಎಂ ಆಕಾಂಕ್ಷಿಗಳಾದ ಆರ್.ವಿ. ದೇಶಪಾಂಡೆ, ಡಾ| ಜಿ.ಪರಮೇಶ್ವರ್, ಸತೀಶ್ ಜಾರಕಿ ಹೊಳಿ, ಬಸವರಾಜ ರಾಯರೆಡ್ಡಿ ಹಾಗೂ ಎಂ.ಬಿ. ಪಾಟೀಲ್ ಜತೆಗೆ ತಮ್ಮ ಅಧಿಕೃತ ನಿವಾಸದಲ್ಲಿ ಸಿದ್ದರಾಮಯ್ಯ ಶುಕ್ರವಾರ ಉಪಾಹಾರದ ಜತೆಗೆ ಚರ್ಚೆ ನಡೆಸಿದರು.
ನೀವೆಲ್ಲರೂ ಬಹಿರಂಗವಾಗಿ ಈ ಹೇಳಿಕೆ ನೀಡಿದ ಬಳಿಕ ರಾಜ್ಯ ರಾಜಕಾರಣದಲ್ಲಿ ಬೇರೆಯದೇ ಆದ ಸಂದೇಶ ರವಾನೆಯಾಗುತ್ತಿದೆ. ಎಲ್ಲರೂ ವಿಪಕ್ಷದ ಟೀಕೆಗೆ ಆಹಾರವಾಗಬೇಕಾಗಿದೆ. ನಾಯಕತ್ವದ ಬಗ್ಗೆ ಜನಸಾಮಾನ್ಯರಲ್ಲಿ ಪ್ರಶ್ನೆಗಳು ಮೂಡುತ್ತಿದ್ದು, ಅನಗತ್ಯ ಗೊಂದಲ ಸೃಷ್ಟಿಯಾಗಿದೆ. ಇನ್ನು ಮುಂದೆ ಇಂಥಹ ಯಾವುದೇ ಹೇಳಿಕೆ ನೀಡದಂತೆ ಸೂಚನೆ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಈ ಸಭೆಗೆ ಮುಖ್ಯಮಂತ್ರಿ ಸ್ಥಾನದ ಪ್ರಬಲ ಆಕಾಂಕ್ಷಿ ಡಿ.ಕೆ. ಶಿವಕುಮಾರ್ ಅವರಿಗೆ ಆಹ್ವಾನವಿರಲಿಲ್ಲ. ಅಮೆರಿಕ ಪ್ರವಾಸದಲ್ಲಿರುವ ಅವರ ನಡೆಯ ಬಗ್ಗೆಯೂ ಸಭೆಯಲ್ಲಿ ಪ್ರಸ್ತಾವವಾಗಿದೆ. ವಿಶೇಷವಾಗಿ ರಾಹುಲ್ ಗಾಂಧಿಯವರನ್ನು ಭೇಟಿ ಮಾಡಿರುವುದು ಉಳಿದ ಸಿಎಂ ಆಕಾಂಕ್ಷಿಗಳ ಹುಬ್ಬು ಗಂಟಿಕ್ಕುವಿಕೆಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Savadatthi: ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ
B.Y.Vijayendra; ಏನು ಪುರೋಹಿತನಾ? ಜ್ಯೋತಿಷಿನಾ?…: ಸಿದ್ದರಾಮಯ್ಯ ಕಿಡಿ
Hubli: ಪ್ರಕರಣದಲ್ಲಿ ಮುಸ್ಲಿಮರ ಹೆಸರು ಇದ್ದರೆ ಮಾತ್ರ ಬಿಜೆಪಿಯ ಹೋರಾಟ: ಸಂತೋಷ್ ಲಾಡ್
Baba Siddique Case: ಮಹಾರಾಷ್ಟ್ರದಲ್ಲಿ ಕಾನೂನು ವ್ಯವಸ್ಥೆ ಸಂಪೂರ್ಣ ಕುಸಿದಿದೆ: ಖರ್ಗೆ
Hubli: ಹಳೇಹುಬ್ಬಳ್ಳಿ ಕೇಸು ಹಿಂಪಡೆದ ವಿಚಾರ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.