ಬಿಜೆಪಿ-ಜೆಡಿಎಸ್‌ಗೆ ಸಿದ್ಧಾಂತವಿಲ್ಲ; ಸಿದ್ದರಾಮಯ್ಯ ಆಕ್ರೋಶ
Team Udayavani, Jan 21, 2022, 9:00 PM IST
ಬೆಂಗಳೂರು: ಬಿಜೆಪಿ ಹಾಗೂ ಜೆಡಿಎಸ್‌ಗೆ ಸಿದ್ಧಾಂತವಿಲ್ಲ. ಜೆಡಿಎಸ್ ಅವಕಾಶವಾದಿ, ಸಿದ್ಧಾಂತದ ಮೇಲೆ ನಿಂತಿರೋದು ಕಾಂಗ್ರೆಸ್ ಮಾತ್ರ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ಜೆಡಿಎಸ್‌ನ ಪರಿಷತ್ ಮಾಜಿ ಸದಸ್ಯ ಬೆಮೆಲ್ ಕಾಂತರಾಜು ಕಾಂಗ್ರೆಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಎಸ್‌ಎಸ್ ಮುಖವಾಡ ಬಿಜೆಪಿ. ದೇವರು,ಧರ್ಮ,ಜಾತಿ ಮೇಲೆ ರಾಜಕಾರಣ ಮಾಡಿ ಜನರನ್ನು ದಾರಿ ತಪ್ಪಿಸವುದೇ ಅವರ ಕೆಲಸ ಎಂದು ದೂರಿದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತಗಳನ್ನು ಒಪ್ಪಿ ಪಕ್ಷ ಸೇರಿದ್ದೇನೆ ಎಂದು ಕಾಂತರಾಜು ಅವರು ಹೇಳಿದ್ದಾರೆ, ಬಹಳ ಸಂತೋಷ. ಸಿದ್ಧಾಂತವಿಲ್ಲದೆ ರಾಜಕೀಯ ಪಕ್ಷ ಹೆಚ್ಚು ಕಾಲ ಉಳಿಯಲ್ಲ. ಜೆಡಿಎಸ್ ಗೆ ಯಾವುದೇ ಸಿದ್ಧಾಂತವಿಲ್ಲ. ಅದೊಂದು ಅವಕಾಶವಾದಿ ಪಕ್ಷ ಎಂದು ಹೇಳಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಆರಂಭವಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲಾ ನಾಯಕರು ಒಗ್ಗಟ್ಟಾಗಿ ಕೆಲಸ ಮಾಡಬೇಕು ಎಂದು ಮನವಿ ಮಾಡುತ್ತೇನೆ ಎಂದರು.
ನರೇಂದ್ರ ಮೋದಿ ಅವರು ಪ್ರಧಾನಿಯಾದ ವೇಳೆ ಇದ್ದ ದೇಶದ ಒಟ್ಟು ಸಾಲ ರೂ. 53 ಲಕ್ಷ ಕೋಟಿ, ಇವತ್ತು ದೇಶದ ಸಾಲು 135 ಲಕ್ಷ ಕೋಟಿ ರೂ. ರೈತ ವಿರೋಧಿ ಕಾನೂನುಗಳ ವಿರುದ್ಧ ದೇಶದ ರೈತರು ವರ್ಷಕ್ಕೂ ಹೆಚ್ಚು ಕಾಲ ಪ್ರತಿಭಟನೆ ಮಾಡಿದರು. ವಿಧಿಯಿಲ್ಲದೆ ಕಾನೂನು ವಾಪಾಸು ಪಡೆಯಿತು. ನರೇಂದ್ರ ಮೋದಿ ಅವರಿಗೆ ಮಾನ ಮರ್ಯಾದೆ ಇದ್ದಿದ್ದರೆ ರಾಜೀನಾಮೆ ಕೊಡಬೇಕಿತ್ತು. ಇದು ಬಿಜೆಪಿಗೆ ದೊಡ್ಡ ಸೋಲು, ಆದರೆ ಅದನ್ನೇ ಅವರು ತಮ್ಮ ಜಯ ಎಂದು ತಿಳಿದುಕೊಂಡಿದ್ದಾರೆ ಎಂದು ಲೇವಡಿ ಮಾಡಿದರು.
ಇದನ್ನೂ ಓದಿ:ಬಂಡಾಯ ಅಭ್ಯರ್ಥಿಯಾದ ಪರ್ರಿಕರ್ ಪುತ್ರ : ನಾಚಿಕೆಗೇಡು ಎಂದ ಉತ್ಪಲ್
ಕರ್ನಾಟಕದಲ್ಲೂ ನೀಚ ಸರ್ಕಾರ ಆಡಳಿತ ನಡೆಸುತ್ತಿದೆ. ನನ್ನ ರಾಜಕೀಯ ಜೀವನದಲ್ಲಿ ಇಂತಹ ಸರ್ಕಾರ ನೋಡಿಲ್ಲ. ದುಡ್ಡಿಲ್ಲದಿದ್ದರೆ ವರ್ಗಾವಣೆ ಆಗಲ್ಲ, ಕಾಮಗಾರಿಗೆ ಶೇ.40 ರಷ್ಟು ಕಮೀಷನ್ ಕೊಡಬೇಕು ಎಂದು ಟೀಕಿಸಿದರು.
ನಾನು ಹದಿಮೂರು ಬಜೆಟ್ ಮಂಡಿಸಿದ್ದೇನೆ. ನಮ್ಮ ಕಾಲದಲ್ಲಿ ಯಾವುದಾದರೂ ಕೆಲಸಕ್ಕೆ ಎನ್.ಒ.ಸಿ ಪಡೆಯಲು ಸಿದ್ದರಾಮಯ್ಯ ಅವರಿಗೆ ಒಂದು ರೂಪಾಯಿ ಲಂಚ ಕೊಟ್ಟಿದ್ದೀನಿ ಎಂದು ಒಬ್ಬ ಕಂಟ್ರಾಕ್ಟರ್ ಹೇಳಿದರೆ ನಾನು ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಸವಾಲು ಹಾಕಿದರು.
ಶಕ್ತಿ ಕೊಟ್ಟಿದೆ
ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, 2023ರ ವಿಧಾನಸಭೆ ಚುನಾವಣೆ ಬಹಳ ಮಹತ್ವದ್ದಾಗಿದ್ದು, ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದರೆ ದೇಶಕ್ಕೆ ಸಂದೇಶ ರವಾನೆಯಾಗುತ್ತದೆ ಎಂದು ಹೇಳಿದರು.
ವಿಧಾನಸಭೆ ಚುನಾವಣೆ ಎದುರಿಸಲು ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಮೇಕೆದಾಟು ಪಾದಯಾತ್ರೆ ನಮಗೆ ಶಕ್ತಿಕೊಟ್ಟಿದೆ. ರಾಜಕೀಯ ಕಾರಣಕ್ಕಾಗಿ ನಾವು ಯಾತ್ರೆ ಮಾಡಲಿಲ್ಲ. ನೀರಿಗಾಗಿ ಮಾಡಿದ ಪಾದಯಾತ್ರೆ ಐತಿಹಾಸಿಕವಾದದ್ದು. ಬಿಜೆಪಿಯವರು ಬೇರೆ ಅರ್ಥ ಕೊಟ್ಟಿರಬಹುದು. ನಮ್ಮ ಬದ್ಧತೆ ಪ್ರದರ್ಶಿಸಿ ಜನರ ಮನಸ್ಸಿಗೆ ನಾವು ಹೋಗಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ ಒಂಟಿಯಾಗುತ್ತಿದ್ದಾರೆಯೇ? ಹೈಕಮಾಂಡ್ ನೀಡಿದ ಸಂದೇಶವೇನು?
ಮೇಲ್ಮನೆ: ಇಂದು ಸ್ಪಷ್ಟ ಚಿತ್ರಣ? ಕಾಂಗ್ರೆಸ್ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರ ಹೆಸರು
ರಾಜ್ಯಕ್ಕೆ ಆಪತ್ತಿನಲ್ಲಿ ಬರಲಿದ್ದಾರೆ “ಆಪದ್ ಮಿತ್ರ’ರು
ಜಾನುವಾರುಗಳ ಹಾನಿಗೆ ಪರಿಹಾರ: ಸಚಿವ ಪ್ರಭು ಚವ್ಹಾಣ್
ಲಂಡನ್: ಬಸವೇಶ್ವರರ ಪ್ರತಿಮೆಗೆ ಗೌರವ ಸಲ್ಲಿಸಿದ ಸಚಿವ ಡಾ.ಅಶ್ವತ್ಥನಾರಾಯಣ್