ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕ ಸೌಲಭ್ಯಗಳಿಲ್ಲ: ಸಿದ್ದರಾಮಯ್ಯ


Team Udayavani, Jul 21, 2020, 3:33 PM IST

ಅತೀ ದೊಡ್ಡ ಕೋವಿಡ್ ಆರೈಕೆ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕ ಸೌಲಭ್ಯಗಳಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ನಗರದ ಅಂತಾರಾಷ್ಟ್ರೀಯ ಪ್ರದರ್ಶನ ಮೈದಾನದಲ್ಲಿ ಆರಂಭಿಸುತ್ತಿರುವ ಕೋವಿಡ್ ಕೇರ್ ಕೇಂದ್ರದಲ್ಲಿ ಅಗತ್ಯಕ್ಕೆ ತಕ್ಕ ಸೌಲಭ್ಯಗಳಿಲ್ಲ. ಸರ್ಕಾರ ಕೂಡಲೇ ಆ ಕುರಿತು ಗಮನ ಹರಿಸಬೇಕು ಎಂದು ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಕೋವಿಡ್ ಕೇರ್ ಕೇಂದ್ರಕ್ಕೆ ಭೇಟಿ ನೀಡಿ ಅಲ್ಲಿಯ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸಿದ ಬಳಿಕ ಸಿದ್ದರಾಮಯ್ಯ ನಂತರ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದರು.

ಏಷ್ಯಾದಲ್ಲೇ ಅತಿದೊಡ್ಡ ಕೋವಿಡ್ ಆರೈಕೆ ಕೇಂದ್ರ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದ್ದರು. ಹೀಗಾಗಿ ಇಲ್ಲಿಯ ವ್ಯವಸ್ಥೆ ಹೇಗಿದೆ ಎಂಬುದನ್ನು ನೋಡಲು ಬಂದಿದ್ದೆ. ಎರಡು ಸಾವಿರಕ್ಕೂ ಹೆಚ್ಚು ವೈದ್ಯರು, ಅರೆ ವೈದ್ಯ ಸಿಬ್ಬಂದಿ ನೇಮಕವಾಗಬೇಕು. ಇನ್ನೂ ನೇಮಕ ಪ್ರಕ್ರಿಯೆ ನಡೆಯುತ್ತಲೇ ಇದೆ. ಶುಕ್ರವಾರದಿಂದ ಸೋಂಕಿತರ ದಾಖಲಾತಿ ಆರಂಭವಾಗುತ್ತದೆ. ವೈದ್ಯರೇ ಇಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಹಾಸಿಗೆ, ದಿಂಬು, ಬೆಡ್‍ಶೀಟ್ ಒದಗಿಸುವ ಗುತ್ತಿಗೆದಾರರ ಸಮಸ್ಯೆಯೇ ಇನ್ನೂ ಇತ್ಯರ್ಥವಾಗಿಲ್ಲ. 800 ರೂ. ಪ್ರಕಾರ ಬಾಡಿಗೆಗೆ ಪಡೆಯುವುದಾಗಿ ಸರ್ಕಾರ ಹೇಳಿತ್ತು. ಸಾರ್ವಜನಿಕವಾಗಿ ಟೀಕೆಗಳು ಬಂದ ಬಳಿಕ ಈಗ ಸರ್ಕಾರವೇ ಖರೀದಿ ಮಾಡುತ್ತಿದೆ. ಅದೂ ಇತ್ಯರ್ಥವಾಗಿಲ್ಲ. ಬಾಡಿಗೆಯೋ, ಖರೀದಿಯೋ ಎಂಬುದು ಮೊದಲು ಇತ್ಯರ್ಥವಾಗಬೇಕು ಎಂದು ಆಗ್ರಹಿಸಿದರು.

ಕೇಂದ್ರದಲ್ಲಿ ಶೌಚಾಲಯಗಳು ದೂರ ಇವೆ. ವಯಸ್ಸಾದವರು ಹೋಗಿ ಬರಲು ಕಷ್ಟ. ಒಳಚರಂಡಿ ವ್ಯವಸ್ಥೆ ಸಹ ಸರಿಯಾಗಿಲ್ಲ. ತಾತ್ಕಾಲಿಕ ವ್ಯವಸ್ಥೆಯೇನೋ ಮಾಡಿದ್ದಾರೆ. ಸರ್ಕಾರ ಉದಾಸೀನ ತೋರಿಸಿರುವುದು ಸ್ಪಷ್ಟವಾಗಿದೆ. ಅಗತ್ಯಕ್ಕೆ ಅನುಗುಣವಾಗಿ ಸಿದ್ಧತೆ ಮಾಡಿಕೊಳ್ಳದೇ ಹೋಗಿದ್ದು ಸರ್ಕಾರದ ತಪ್ಪು. ಸೋಂಕು ನಿಯಂತ್ರಣಕ್ಕೆ ಮತ್ತು ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳಲೇ ಇಲ್ಲ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಬೇಜವಾಬ್ದಾರಿತನ ಎದ್ದು ಕಾಣುತ್ತದೆ.  ಎರಡೂ ಸರ್ಕಾರಗಳು ಸೋಂಕು ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿವೆ ಎಂದರು.

ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರ ಯಾರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಪ್ರತಿಪಕ್ಷಗಳು ಸಲಹೆ ನೀಡಿದರೆ ಗಂಭೀರವಾಗಿ ಪರಿಗಣಿಸುವುದಿಲ್ಲ. ವಿಧಾನ ಮಂಡಲ ಅಧಿವೇಶನ ಕರೆಯುವುದಿಲ್ಲ.  ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿರುವ ಸರ್ಕಾರ ಈಗಲಾದರೂ ಎಚ್ಚೆತ್ತುಕೊಳ್ಳಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ, ಮಾಜಿ ಸಚಿವ ಎಚ್.ಎಂ. ರೇವಣ್ಣ ಹಾಗೂ ಬಿಬಿಎಂಪಿ ಸದಸ್ಯ ಶಿವರಾಜ್ ಅವರು ಹಾಜರಿದ್ದರು.

ಟಾಪ್ ನ್ಯೂಸ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ

2-hunsur

Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.