ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ನಿವಾಸಕ್ಕೆ ಭೇಟಿ ನೀಡಿದ ಸಿದ್ದರಾಮಯ್ಯ
Team Udayavani, Mar 9, 2022, 1:19 PM IST
ಬೆಂಗಳೂರು: ಉಕ್ರೇನ್ ನಲ್ಲಿ ಮೃತಪಟ್ಟ ಕನ್ನಡಿಗ ನವೀನ್ ಅವರ ನಿವಾಸಕ್ಕೆ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಇಂದು ಭೇಟಿ ನೀಡಿದರು.
ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನಿವಾಸದಲ್ಲಿ ಸಿದ್ದರಾಮಯ್ಯ ಅವರು ನವೀನ್ ಅವರ ಕುಟುಂಬದವರನ್ನು ಭೇಟಿ ಮಾಡಿ ಸಾಂತ್ವನ ಹೇಳಿದರು. ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು.
ಇದನ್ನೂ ಓದಿ:ನರೇಗಾ ಬಾವಿಗೆ ಕಲಾತ್ಮಕ ಸ್ಪರ್ಶ ಆಕರ್ಷಕ ಕಂಚಿನ ಪಾತ್ರೆ ಹೋಲುವ ಮಾದರಿ
ವಿಧಾನಸಭೆ ಮಾಜಿ ಸ್ಪೀಕರ್ ಕೋಳಿವಾಡ, ಮಾಜಿ ಸಚಿವರಾದ ರುದ್ರಪ್ಪ ಲಮಾಣಿ, ಜಯಮಾಲಾ, ಬ್ಯಾಡಗಿ ಶಿವಣ್ಣ, ಮುಖಂಡರಾದ ಬನ್ನಿಕೋಡ್, ಪ್ರಕಾಶ ಕೋಳಿವಾಡ, ಸೋಮಣ್ಣ ಬೇವಿನಮರದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಎಂ.ಹಿರೇಮಠ ಹಾಜರಿದ್ದರು.
ಉಕ್ರೇನ್ ನಲ್ಲಿ ಮೃತಪಟ್ಟ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಅವರ ನಿವಾಸಕ್ಕೆ ಇಂದು ಭೇಟಿ ನೀಡಿ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದೆ. ಇದೇ ವೇಳೆ ನವೀನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದೆ.
1/2#Ukraine️ pic.twitter.com/XlRO7m6WEp— Siddaramaiah (@siddaramaiah) March 9, 2022