ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಿ: ಸಿಎಂ ಗೆ ಸಿದ್ದರಾಮಯ್ಯ ಪತ್ರ


Team Udayavani, Jun 5, 2021, 12:10 PM IST

siddaramaiah

ಬೆಂಗಳೂರು: ರೈತರ ಬಳಿ ಬಿತ್ತನೆ ಚಟುವಟಿಕೆಗಳಿಗೆ ಕೈಯಲ್ಲಿ ಹಣವಿಲ್ಲದಂತಾಗಿದೆ. ಹಾಗಾಗಿ ರೈತರಿಗೆ ಬೀಜ, ಗೊಬ್ಬರವನ್ನು ಉಚಿತವಾಗಿ ನೀಡಲು ಕ್ರಮವಹಿಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪಗೆ ಪತ್ರ ಬರೆದಿರುವ ಅವರು,  ಕೂಡಲೇ ಸಾಲ ವಿತರಣೆ ಚಟುವಟಿಕೆಗಳನ್ನು ಆರಂಭಿಸಬೇಕು. ಹೆಸರು, ಉದ್ದು, ಅಲಸಂಡೆ, ತೊಗರಿ ಮುಂತಾದ ದ್ವಿದಳ ಧಾನ್ಯಗಳು ಹಾಗೂ ಸೋಯಾ, ಶೇಂಗಾ ಮುಂತಾದ ಎಣ್ಣೆ ಬೀಜಗಳನ್ನು ಹೇಗಾದರೂ ಮಾಡಿ ಸಂಗ್ರಹಿಸಿ ಬೇಡಿಕೆ ಇದ್ದಷ್ಟು ನೀಡಲು ಕೂಡಲೇ ಸಮರೋಪಾದಿಯಲ್ಲಿ ಸಮರ್ಪಕ ಕ್ರಮಗಳನ್ನು ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಈ ವರ್ಷ ಕೇವಲ ಶೇ. 19, ಅಂದರೆ 410 ಕ್ವಿಂಟಾಲ್ ಹೆಸರು ಕಾಳು ಬಿತ್ತನೆ ಬೀಜವನ್ನು ರೈತ ಸಂಪರ್ಕ ಕೇಂದ್ರಗಳಿಗೆ ವಿತರಣೆ ಮಾಡಲಾಗಿದೆ. ಕಳೆದ ವರ್ಷ  ತುಮಕೂರಿಗೆ 851 ಕ್ವಿಂಟಾಲ್ ಕಾಳನ್ನು ವಿತರಿಸಿದ್ದರೆ ಈ ವರ್ಷ ಕೇವಲ 90 ಕ್ವಿಂಟಾಲ್ ವಿತರಿಸಲಾಗಿದೆ. ಹಾಸನಕ್ಕೆ 618 ಕ್ವಿಂಟಾಲಿಗೆ ಬದಲಾಗಿ 87.5 ಕ್ವಿಂಟಾಲ್, ಮೈಸೂರಿಗೆ 418 ಕ್ವಿಂಟಾಲ್ ಬೇಡಿಕೆಗೆ ಬದಲಾಗಿ 165.50, ಚಾಮರಾಜನಗರಕ್ಕೆ 222 ಕ್ವಿಂಟಾಲಿನ ಬದಲು 67.5 ಕ್ವಿಂಟಾಲ್ ನೀಡಲಾಗಿದೆ. ಇದನ್ನು ದ್ರೋಹವೆನ್ನದೆ ಇನ್ನು ಯಾವ ಭಾಷೆಯಲ್ಲಿ ಹೇಳಬೇಕು ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಇದನ್ನೂ ಓದಿ:ಪೀಲ್ಡಿಗಿಳಿದು ಅನಗತ್ಯವಾಗಿ ತಿರುಗಾಟ ನಡೆಸುತ್ತಿದ್ದ ವಾಹನಗಳ ತಪಾಸಣೆ ನಡೆಸಿದ ಎಸ್ ಪಿ

ಈ ವರ್ಷದ ಪೂರ್ವ ಮುಂಗಾರಿನಲ್ಲಿ ಮಳೆಯ ಪ್ರಮಾಣವೂ ಕಡಿಮೆಯಾಗಿಲ್ಲ. ಕಳೆದ ಬಾರಿಗೆ ಹೋಲಿಸಿದರೆ ಸರಾಸರಿಗಿಂತ ಶೇ. 15-20 ರಷ್ಟು ಹೆಚ್ಚು ಮಳೆಯಾಗಿದೆ. ಆದರೆ ಸರ್ಕಾರ ಬಿತ್ತನೆ ಬೀಜ ಸರಬರಾಜು ಮಾಡದೆ ತೊಂದರೆ ಮಾಡಿದೆ. ನನಗಿರುವ ಮಾಹಿತಿಯ ಪ್ರಕಾರ ಈ ವರ್ಷ ಬೇಡಿಕೆಯನ್ನು ಅಂದಾಜು ಮಾಡದೆ, ಸಾಕಷ್ಟು ಪ್ರಮಾಣದಲ್ಲಿ ಬಿತ್ತನೆ ಬೀಜವನ್ನು ಸಂಗ್ರಹಣೆ ಮಾಡಿಕೊಳ್ಳದೆ ಮೈಮರೆಯಲಾಗಿದೆ. ಕಡೆಗೆ ತಮ್ಮ ತಪ್ಪನ್ನು ಮುಚ್ಚಿಕೊಳ್ಳಲು ಕಳೆದ ವರ್ಷ ಬಿತ್ತನೆ ಬೀಜ ಪಡೆದ ರೈತರಿಗೆ ಈ ವರ್ಷ ನೀಡಲಾಗದು ಎಂದು ರೈತ ಸಂಪರ್ಕ ಕೇಂದ್ರಗಳಲ್ಲಿ ಹೇಳಿ ಕಳಿಸಿದ್ದಾರೆ. ಕೃಷಿ ಇಲಾಖೆಯೂ ಸಹ ಸುತ್ತೋಲೆಗಳನ್ನು ಹೊರಡಿಸಿದೆ.

ಈಗ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಬಿತ್ತನೆ ಕೆಲಸಗಳು ಪ್ರಾರಂಭವಾಗುತ್ತವೆ. ಅಲ್ಲಿಗೂ ಸಹ ಸಾಕಷ್ಟು ಪ್ರಮಾಣದ ಬಿತ್ತನೆ ಕಾಳನ್ನು ಒದಗಿಸಲು ಸಾಧ್ಯವಾಗುತ್ತಿಲ್ಲ ಎಂಬ ಆರೋಪಗಳು ಬರುತ್ತಿವೆ. ನನಗೆ ಇರುವ ಮಾಹಿತಿ ಪ್ರಕಾರ ಕೃಷಿ ಇಲಾಖೆ 8391 ಕ್ವಿಂಟಾಲಿಗೆ ಬದಲು ಕೇವಲ 5000 ರಿಂದ 5500 ಕ್ವಿಂಟಾಲ್ ಹೆಸರು ಕಾಳನ್ನು ವಿತರಿಸಲು ಈಗ ಹೊರಟಿದೆ. ಇದು ಸರಿಯಾದ ಕ್ರಮವಲ್ಲ. ರೈತರಿಗೆ ಸಮರ್ಪಕ ಬಿತ್ತನೆ ಬೀಜ ಸಿಗದೆ ಬಿತ್ತನೆ ಮಾಡದಿದ್ದರೆ ಅಥವಾ ರೈತರು ತಮ್ಮ ಬಳಿ ಇದ್ದ ಗುಣಮಟ್ಟವಿಲ್ಲದ ಬೀಜಗಳನ್ನು ಬಿತ್ತನೆ ಮಾಡಿದರೆ ಉತ್ಪಾದನೆ ಕುಂಠಿತಗೊಳ್ಳುತ್ತದೆ. ಇದರಿಂದ ರೈತರಿಗೆ ಆದಾಯ ಕಡಿಮೆಯಾಗುತ್ತದೆ. ವಿದೇಶಗಳಿಂದ ಆಮದು ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತದೆ. ಕಾಳುಗಳನ್ನು ಬಳಸುವ ಗ್ರಾಹಕರಿಗೆ ಸುಲಭದ ದರದಲ್ಲಿ ಕೈಗೆಟುಕದೆ ದ್ವಿದಳ ಧಾನ್ಯಗಳ ಬಳಕೆಯನ್ನು ಕಡಿಮೆ ಮಾಡಲಾರಂಭಿಸುತ್ತಾರೆ. ಇದರಿಂದ ಒಟ್ಟಾರೆ ರಾಷ್ಟ್ರದ ಜನರ ಆರೋಗ್ಯದ ಮಟ್ಟ ಕುಸಿತವಾಗುತ್ತದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಕೇವಲ ಬಾಯಿ ಮಾತಿನಲ್ಲಿ ರಾಷ್ಟ್ರಪ್ರೇಮದ ಮಾತನಾಡಿ ಅದಾನಿ, ಧಮಾನಿ, ಅಂಬಾನಿಗಳ ಕೈಗೆ ಆಹಾರ ಧಾನ್ಯಗಳ ಸಂಗ್ರಹಣೆ ಮತ್ತು ವಿತರಣೆಯನ್ನು ಕೊಟ್ಟು, ಅವರಿಗೆ ಜನರನ್ನು ಹುರಿದು ಮುಕ್ಕಲು ಬಿಟ್ಟು ಜನರ ಬಳಿ ಇರುವ ಬಿಡಿಗಾಸುಗಳನ್ನು ಲೂಟಿ ಹೊಡೆಯಲು ಅವಕಾಶ ಮಾಡಿಕೊಟ್ಟು ಹಸಿರು ಶಾಲನ್ನು ಹೆಗಲ ಮೇಲೆ ಹಾಕಿಕೊಂಡರೆ ಅದು ರೈತ ಪ್ರೇಮವಾಗುತ್ತದೆಯೇ? ವೇಷಗಳನ್ನು ಧರಿಸಿ ಘೋಷಣೆಗಳನ್ನು ಕೂಗಿದರೆ ಅದು ರಾಷ್ಟ್ರಪ್ರೇಮವಾಗುತ್ತದೆಯೇ? ಸುಳ್ಳು ಘೋಷಣೆಗಳ ಕೆಸರಿನಲ್ಲಿ ಮುಳುಗಿಸಿ ಜನರನ್ನು ಭೀಕರ ಶೋಷಣೆ ಮಾಡುವುದರಿಂದ ದೇಶ ಪ್ರಗತಿ ಹೊಂದಲು ಸಾಧ್ಯವೇ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.