
ಐಟಿ ದಾಳಿಗೆ ಸಿದ್ದರಾಮಯ್ಯ ಕಾರಣ: ಎಚ್‌ಡಿಕೆ
Team Udayavani, Oct 12, 2021, 11:17 PM IST

ಮೈಸೂರು: ಮಾಜಿ ಸಿಎಂ ಯಡಿಯೂರಪ್ಪ ಅವರ ಆಪ್ತರ ಮನೆ ಮೇಲಿನ ಐಟಿ ದಾಳಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯನವರೇ ಕಾರಣ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪಿಸಿದರು.
ಮಂಗಳವಾರ ಚಾಮುಂಡೇಶ್ವರಿ ದೇವಿಯ ದರ್ಶನ ಪಡೆದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಸಿದ್ದರಾಮಯ್ಯ ಭೇಟಿ ಮಾಡಿದ್ದರಿಂದಲೇ ಐಟಿ ದಾಳಿ ಆಗಿದೆ. ಸಿದ್ದರಾಮಯ್ಯ ಅಧಿಕಾರಕ್ಕಾಗಿ ಏನೂ ಮಾಡುತ್ತಾರೆ. ಯಡಿಯೂರಪ್ಪ ಭೇಟಿಯೂ ಅದರ ಭಾಗವಾಗಿದೆ. ಈ ಭೇಟಿ ಬಗ್ಗೆ ಕೇಂದ್ರಕ್ಕೂ ಮಾಹಿತಿ ಸಿಕ್ಕಿದೆ. ಅದಕ್ಕಾಗಿ ಯಡಿಯೂರಪ್ಪ ಅವರನ್ನು ಹಿಡಿತದಲ್ಲಿಟ್ಟುಕೊಳ್ಳು ಐಟಿ ದಾಳಿ ನಡೆಸಲಾಗಿದೆ. ಇದರ ಹಿಂದೆ ಸ್ಪಷ್ಟವಾಗಿ ರಾಜಕೀಯ ಉದ್ದೇಶ ಇದ್ದೇ ಇದೆ ಎಂದು ಗಂಭೀರ ಆರೋಪ ಮಾಡಿದರು.
ಎಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ : ರೇಣುಕಾಚಾರ್ಯ
ಬೆಂಗಳೂರು: ಐಟಿ ದಾಳಿಗೂ ಯಡಿಯೂರಪ್ಪ ಅವರಿಗೂ ಯಾವುದೇ ಸಂಬಂಧವಿಲ್ಲ. ಅವರ ಬಗ್ಗೆ ಆರೋಪ ಮಾಡುತ್ತಿರುವ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಲಾಟರಿ ಸಿಎಂ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಟಿ ಸ್ವತಂತ್ರ ಸಂಸ್ಥೆಯಾಗಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಆಪ್ತನ ಮೇಲಿನ ದಾಳಿ ರಾಜಕೀಯ ಪ್ರೇರಿತ ದಾಳಿಯಲ್ಲ. ದಾಳಿ ಬಗ್ಗೆ ಕುಮಾರಸ್ವಾಮಿ ನೀಡಿರುವ ಹೇಳಿಕೆ ಸರಿಯಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
